Thursday, September 19, 2024

ಪ್ರಾಯೋಗಿಕ ಆವೃತ್ತಿ

ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಅವಶ್ಯ- ಸೌಭಾಗ್ಯ

ವಿದ್ಯಾರ್ಥಿಗಳಲ್ಲಿರುವ ಸುಪ್ತ ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ- ಕಲೋತ್ಸವ ಅವಶ್ಯ ಎಂದು ಶಾಲಾ ಶಿಕ್ಷಣ ಇಲಾಖೆ ಉತ್ತರ ವಲಯ ಕ್ಷೇತ್ರಶಿಕ್ಷಣಾಧಿಕಾರಿ ಕೆ.ಟಿ. ಸೌಭಾಗ್ಯ ಹೇಳಿದರು.

ಮಂಡ್ಯ ನಗರದಲ್ಲಿರುವ ಶಾಲಾ ಶಿಕ್ಷಣ ಇಲಾಖೆ ಉತ್ತರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಆವರಣದಲ್ಲಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ ಮಂಡ್ಯ ಉತ್ತರ ವಲಯ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಉತ್ತರ ವಲಯ ವ್ಯಾಪ್ತಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮಂಡ್ಯ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ-2023-24ರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಶಾಲಾ ಮಕ್ಕಳಲ್ಲಿ ಅನೇಕ ಪ್ರತಿಭೆಗಳು ಅಡಗಿದ್ದು, ಅವುಗಳನ್ನು ಹೊರಹೊಮ್ಮಿಸಲು ಸೂಕ್ತ ವೇದಿಕೆಯಾಗಿ ಪ್ರತಿಭಾ ಕಾರಂಜಿ-ಕಲೋತ್ಸವ ಸಂಪನ್ನಗೊಳಿಸುತ್ತಿದೆ, ತರಗತಿಯಲ್ಲಿನ ಕಲಿಕೆಯೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಆಸಕ್ತಿ ಇರುವ ಕ್ಷೇತ್ರಗಳತ್ತ ಗಮನ ಹರಿಸಲು ಸೂಕ್ತ ವೇದಿಕೆಯಾಗಿದೆ ಎಂದು ನುಡಿದರು.

ನೃತ್ಯ, ಜನಪದ ಗೀತೆಗಳು ಸೇರಿದಂತೆ ಇನ್ನೂ ಮುಂತಾದ ನಮ್ಮ ದೇಶೀಯ ಕಲೆಗಳನ್ನು ಉಳಿಸುವ ಸಲುವಾಗಿ ಹಾಗೂ ಮಕ್ಕಳಲ್ಲಿ ಅಡಗಿರುವಂತಹ ಪ್ರತಿಭೆಯನ್ನು ಗುರುತಿಸುವುದೇ ಈ ಪ್ರತಿಭಾ ಕಾರಂಜಿಯ ಉದ್ದೇಶವಾಗಿದೆ. ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ಭಾಗಿಯಾಗಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ವಿವಿಧ ಸ್ಪರ್ಧೆಗಳಲ್ಲಿ ಮಕ್ಕಳು ಉತ್ಸಾಹದಿಂದ ಭಾಗವಹಿಸಿದ್ದರು. ಅಭಿನಯ ಗೀತೆ, ಛದ್ಮವೇಷ, ಚಿತ್ರಕಲೆ, ಮಣ್ಣಿನ ಮಾದರಿ ರಚನೆ, ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಮುಖಾಂತರ ತಮ್ಮ ಪ್ರತಿಭೆಯನ್ನು ಹೊರ ಹಾಕಿದರು.

ಕಾರ್ಯಕ್ರಮದಲ್ಲಿ ಶಾಸಕ ರವಿಕುಮಾರ್‌ಗಣಿಗ, ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಕೆ.ನಾಗೇಶ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಚ್.ಶಿವರಾಮೇಗೌಡ, ಡಯಟ್ ಉಪನಿರ್ದೇಶಕ ಪುರುಷೋತ್ತಮ್, ಶಿಕ್ಷಕರ ಸಂಘದ ಪದಾಧಿಕಾರಿಗಳಾದ ಕೆ.ಸಿ.ರವಿಶಂಕರ್, ಎ.ಚಿಕ್ಕೇಗೌಡ, ವೈಕುಂಠ, ಲೋಕೇಶ್, ವಸಂತಕುಮಾರ್, ಅಶೋಕ್, ಈಚಗೆರೆ ಕೆ.ಆರ್.ಶಶಿಧರ್, ರಾಮಸಂಜೀವಯ್ಯ, ವೇದಾವತಿ, ಕೆ.ಎಸ್.ಗೀರೀಶ್, ಬಿಇಓ ಸೀತಾರಾಂ,ದೈಹಿಕ ಶಿಕ್ಷಣಾಧಿಕಾರಿ ಎಂ.ಎಸ್.ವಿಜಯಕುಮರ್, ಕ್ಷೇತ್ರ ಸಮನ್ವಯಾಧಿಕಾರಿ ಬಿ.ಆರ್.ಶಿವರಾಮು ಮತ್ತಿತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!