Tuesday, November 24, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಎಸ್ಸಿ, ಎಸ್ಟಿ, ಓಬಿಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಮಂಡ್ಯದ ಡಾ.ಬಿ.ಆರ್. ಅಂಬೇಡ್ಕರ್ ವಾರಿಯರ್ಸ್ ಸಂಘಟನೆ ವತಿಯಿಂದ 2023-24ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿರುವ ಮಂಡ್ಯ ಜಿಲ್ಲೆಯ ಎಸ್ ಸಿ, ಎಸ್ ಟಿ,ಓ ಬಿ ಸಿ ಮತ್ತು ವಿಕಲಚೇತನರ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಮಂಡ್ಯ ನಗರದ ಪಿಇಎಸ್ ಕಾಲೇಜು ಆವರಣದಲ್ಲಿರುವ ವಿವೇಕ ರಂಗಮಂದಿರದಲ್ಲಿ ಜು.7ರಂದು ಬೆಳಿಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ಅಧ್ಯಕ್ಷ ಹೆಚ್ ಜಿ ಗಂಗರಾಜು ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯ ಜಿಲ್ಲೆಯ ವಿವಿಧ ಪ್ರೌಢಶಾಲೆಗಳಲ್ಲಿ ವ್ಯಾಸಂಗ ಮಾಡಿದ 2023- 24 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿರುವ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದು ತಿಳಿಸಿದರು .

ಅಂದು ಮೈಸೂರಿನ ವಿಶ್ವಮೈತ್ರಿ ಬುದ್ಧ ವಿಹಾರದ ಡಾ.ಕಲ್ಯಾಣಸಿರಿ ಭಂತೇಜಿ ದಿವ್ಯ ಸಾನಿಧ್ಯದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಗುರುಪ್ರಸಾದ್ ಕೆರಗೋಡು ಅಧ್ಯಕ್ಷತೆವಹಿಸುವರು. ಶಾಸಕ ರವಿಕುಮಾರ್ ಸಮಾರಂಭ ಉದ್ಘಾಟಿಸುವರು ಎಂದರು.

ಮುಖ್ಯ ಅತಿಥಿಗಳಾಗಿ ಮಂಡ್ಯ ಜಿಲ್ಲಾ ರೈತಸಂಘದ ಅಧ್ಯಕ್ಷ ಎ ಎಲ್ ಕೆಂಪುಗೌಡ, ಪ್ರಗತಿಪರ ಚಿಂತಕ ಸಂಪತ್ ಕುಮಾರ್, ಮನ್ಮುಲ್ ನಿರ್ದೇಶಕ ಬಿ ಆರ್ ರಾಮಚಂದ್ರ , ಅಪರ ಜಿಲ್ಲಾಧಿಕಾರಿ ಹೆಚ್‌ಎಲ್ ನಾಗರಾಜು, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಹೆಚ್ ಶಿವರಾಮೇಗೌಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಸ್ ರಾಜಮೂರ್ತಿ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಸಿದ್ಧಲಿಂಗೇಶ್ ಸೇರಿದಂತೆ ಇತರ ಗಣ್ಯರು ಭಾಗವಿಸಲಿದ್ದಾರೆ ಎಂದು ತಿಳಿಸಿದರು .

ಗೋಷ್ಠಿಯಲ್ಲಿ ವೇಣುಗೋಪಾಲ್, ರಮೇಶ್, ಮುತ್ತುರಾಜ್, ಎಂ.ಲಿಂಗಯ್ಯ, ಮಹಾದೇವು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ