ಮಂಡ್ಯ ಜಿಲ್ಲಾ ಬ್ರಾಹ್ಮಣ ಸಭಾವು ಸೆ.18ರಂದು ವಿಪ್ರ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
2021-22ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.90, ಪಿಯುಸಿಯಲ್ಲಿ ಶೇ.85, ಹಾಗೂ ಸ್ನಾತಕೋತ್ತರ ವಿಭಾಗದಲ್ಲಿ ಶೇ.80 ಅಂಕಗಳಿಗಿಂತ ಹೆಚ್ಚು ಅಂಕ ಪಡೆದವರು, ಪುರಸ್ಕಾರ ಪಡೆಯಲು ಸೆ.13ರೊಳಗೆ ಅರ್ಜಿ ಸಲ್ಲಿಸಬಹುದು ಎಂದು ಸಭಾದ ಕಾರ್ಯದರ್ಶಿ ಎಸ್.ಶಂಕರನಾರಾಯಣ ಶಾಸ್ತ್ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




