Sunday, November 22, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | ಕೃಷಿಮೇಳದ ಪೂರ್ವ ಸಿದ್ದತೆ ಪರಿಶೀಲಿಸಿದ ಸಿಇಓ ನಂದಿನಿ

ಮಂಡ್ಯ ಜಿಲ್ಲೆಯ ವಿ.ಸಿ.ಫಾರಂ ಆವರಣದಲ್ಲಿ ಡಿಸೆಂಬರ್ 05 ರಿಂದ 07ರವರೆಗೆ ನಡೆಯಲಿರುವ ಕೃಷಿ ಮೇಳದ ಪೂರ್ವಸಿದ್ದತೆಗಳ ಕುರಿತು ಜಿ.ಪಂ. ಸಿಇಓ ನಂದಿನಿ ಕೆ.ಆರ್. ಅವರು ಪರಿಶೀಲನೆ ನಡೆಸಿದರು.
ವಿ.ಸಿ.ಫಾರ್ಮ್ ಗೆ ಭೇಟಿ ನೀಡಿದ ಅವರು ವೇದಿಕೆ ನಿರ್ಮಾಣ, ಮಳಿಗೆಗಳ ನಿರ್ಮಾಣ ಸೇರಿದಂತೆ ಇತರೆ ಚಟುವಟಿಕೆಗಳ ಬಗ್ಗೆ ಪರಿಶೀಲನೆ ನಡೆಸಿದ ಅವರು ಕಾರ್ಯಕ್ರಮಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಸ್ವ-ಸಹಾಯ ಸಂಘಗಳ ಮಹಿಳೆಯರಿಗೆ ತಮ್ಮ ಸಂಘಗಳು ಸಿದ್ದಪಡಿಸಿರುವ ಉತ್ಪನ್ನಗಳನ್ನು ಮಾರಾಟ ಮಾಡಲು ಸೂಕ್ತ ಸ್ಥಳಾವಕಾಶ ಕಲ್ಪಿಸಲು 50 ಮಳಿಗೆಗಳನ್ನು ತೆರೆಯಲಾಗುತ್ತಿದ್ದು, ಹೊರ ಜಿಲ್ಲೆಗಳ 16 ಸ್ವ-ಸಹಾಯ ಸಂಘಗಳು ಸೇರಿದಂತೆ ಮಂಡ್ಯ ಜಿಲ್ಲೆಯ 34 ಸ್ವ-ಸಹಾಯ ಸಂಘಗಳಿಗೆ ಮಳಿಗೆಗಳನ್ನು ತೆರೆಯಲಾಗುತ್ತಿದೆ ಎಂದು ತಿಳಿಸಿದರು.
ಸಿರಿ ಸಮೃದಿ ಬ್ರಾಂಡ್ ನಲ್ಲಿ ಸ್ವ-ಸಹಾಯ ಸಂಘಗಳ ಉತ್ಪನ್ನ ಮಾರುಕಟ್ಟೆಗೆ

ಮಂಡ್ಯ ಜಿಲ್ಲೆಯ ಸ್ವ-ಸಹಾಯ ಸಂಘಗಳು ಸಿರಿ ಧಾನ್ಯಗಳಿಂದ ಆಹಾರೋತ್ಪನ್ನಗಳನ್ನು ಸಿದ್ದಪಡಿಸುತ್ತಿದ್ದು, ಸದರಿ ಉತ್ಪನ್ನಗಳನ್ನು ಸಿರಿ ಸಮೃದ್ದಿ ಎಂಬ ಬ್ರಾಂಡ್ ನಲ್ಲಿ ಮಾರುಕಟ್ಟೆಗೆ ಪರಿಚಯಿಸಲಾಗುತ್ತಿದೆ ಎಂದು ತಿಳಿಸಿದರು. ಮಂಡ್ಯ ಜಿಲ್ಲೆಯ ಎಲ್ಲಾ ಕಚೇರಿಗಳಲ್ಲಿ ನಡೆಯುವ ಸಭೆ ಸಮಾರಂಭಗಳಿಗೆ ಸ್ವ-ಸಹಾಯ ಸಂಘಗಳು ಸಿದ್ದಪಡಿಸುವ ಆಹಾರೋತ್ಪನ್ನಗಳನ್ನು ಪಡೆದು ಸಂಘಗಳ ಆರ್ಥಿಕ ಬಲವರ್ಧನೆಗೆ ಸಹಕರಿಸುವಂತೆ ಕೋರಲಾಗಿದೆ ಎಂದರು.

ಕೃಷಿ ಮೇಳದ ಬಗ್ಗೆ ವ್ಯಾಪಕ ಪ್ರಚಾರ ಮಾಡಲು ಸೂಚನೆ: ಡಿಸೆಂಬರ್ 05 ರಿಂದ 07ರವರೆಗೆ ನಡೆಯಲಿರುವ ಕೃಷಿ ಮೇಳದ ಕುರಿತು ವ್ಯಾಪಕ ಪ್ರಚಾರ ಕೈಗೊಳ್ಳುವಂತೆ ಕೃಷಿ ಇಲಾಖೆಯ ಅಧಿಕಾರಿಗಳು ಹಾಗೂ ಎನ್.ಆರ್.ಎಲ್.ಎಂ. ಯೋಜನೆಯ ಸಿಬ್ಬಂದಿಗಳಿಗೆ ಸೂಚಿಸಿದರು. ಸೈಕಲ್ ಜಾಥ, ಬೈಕ್ ರ್‍ಯಾಲಿ ಮತ್ತು ವಾಕಾಥಾನ್ ಗಳಂತಹ ಚಟುವಟಿಕೆಗಳನ್ನು ಆಯೋಜಿಸುವಂತೆ ಸೂಚಿಸಿದರು.
ಎನ್.ಆರ್.ಎಲ್.ಎಂ. ಮತ್ತು ಕೃಷಿ ಇಲಾಖೆಯ ಒಗ್ಗೂಡಿಸುವಿಕೆಯೊಂದಿಗೆ ಕೃಷಿಯಲ್ಲಿ ಯಂತ್ರೋಪಕರಣಗಳ ಬಳಕೆ ಬಗ್ಗೆಯೂ ರೈತರು ಹಾಗೂ ಸ್ವ-ಸಹಾಯ ಗುಂಪುಗಳಿಗೆ ಹೆಚ್ಚಿನ ಅರಿವು ಮತ್ತು ತರಬೇತಿಗಳನ್ನು ಆಯೋಜಿಸುವ ಬಗ್ಗೆಯೂ ಕಾರ್ಯಕ್ರಮ ರೂಪಿಸುವಂತೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಜಂಟಿ ಕೃಷಿ ನಿರ್ದೇಶಕರಾದ ಅಶೋಕ್, ಜಿಲ್ಲಾ ಪಂಚಾಯತ್ ನ ಯೋಜನಾ ನಿರ್ದೇಶಕ ರೂಪಶ್ರೀ, ಸಹಾಯಕ ಯೋಜನಾಧಿಕಾರಿ ಶ್ರೀಹರ್ಷ, ವಿ.ಸಿ.ಫಾರ್ಮ್ ನ ಅಧಿಕಾರಿಗಳು ಸೇರಿದಂತೆ ಇತರರು ಹಾಜರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ