Thursday, September 19, 2024

ಪ್ರಾಯೋಗಿಕ ಆವೃತ್ತಿ

ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಫಲಕ ಅಳವಡಿಸಲು ಆದೇಶ

ಸಂವಿಧಾನದ ಅಮೃತ ಮಹೋತ್ಸವ ಅಂಗವಾಗಿ ಭಾರತ ಸಂವಿಧಾನದ ಮೂಲ ಆಶಯಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ  ಎಲ್ಲಾ ಸರ್ಕಾರಿ ಹಾಗೂ ಸರ್ಕಾರಿ ಅನುದಾನಿತ ಶಾಲಾ-ಕಾಲೇಜು ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಕಡ್ಡಾಯವಾಗಿ ನಮ್ಮ ಸಂವಿಧಾನದ ಪೀಠಿಕೆಯನ್ನು ಅಳವಡಿಸುವಂತೆ ಕಾಲೇಜು ಶಿಕ್ಷಣ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

ದೇಶದ ಪ್ರತಿಯೊಬ್ಬ ಪ್ರಜೆಯು ಭಾರತದ ಸಂವಿಧಾನದ ಮೂಲ ಆಶಯವನ್ನು ಅರಿಯುವುದು ಬಹಳ ಮುಖ್ಯವಾಗಿದೆ ಎಂದು ತಿಳಿಸಿರುವ ನಿರ್ದೇಶಕರು, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಹೇಳಿರುವ ನಮ್ಮ ಭಾರತ ಸಂವಿಧಾನದ ಆತ್ಮವೆಂದೇ  ಖ್ಯಾತವಾದ ಸಂವಿಧಾನದ ಪೀಠಿಕೆಯನ್ನು ಶಾಲಾ-ಕಾಲೇಜುಗಳಲ್ಲಿ ಲಭ್ಯವಿರುವ ಅನುದಾನದಲ್ಲಿ ಖರೀದಿಸಿ ಅಳವಡಿಸಿಕೊಳ್ಳುವಂತೆ ಸೂಚಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!