Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ| ಸಚಿವರ ಜನತಾ ದರ್ಶನದ ಪೂರ್ವಭಾವಿ ಸಭೆ

ಮಳವಳ್ಳಿ ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಡ್ಯ ಉಪವಿಭಾಗಾಧಿಕಾರಿ ಶಿವಮೂರ್ತಿ ಅಧ್ಯಕ್ಷತೆಯಲ್ಲಿ ಜನತಾ ದರ್ಶನ ಪೂರ್ವಭಾವಿ ಸಭೆ ನಡೆಸಲಾಯಿತು.

ಸಭೆಯಲ್ಲಿ ಸೆ.25 ರಂದು ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಉಸ್ತುವಾರಿ ಸಚಿವರು ಹಾಗೂ ಶಾಸಕರ ನೇತೃತ್ವದಲ್ಲಿ ನಡೆಸಲು ತೀರ್ಮಾನಿಸಲಾಯಿತು.

ಜನತಾದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಲು ವಿವಿಧ ಕೌಂಟರ್ ಗಳನ್ನು ತೆರೆಯಬೇಕು. ಅರ್ಜಿಗಳು ರಿಜಿಸ್ಟರ್ ಆದ ನಂತರ ಅರ್ಜಿಗಳು ಸಚಿವರಿಗೆ ನೀಡಬೇಕಾಗುತ್ತದೆ ಎಂದರು.

ಅರ್ಜಿಗಳನ್ನು ಮಧ್ಯಾಹ್ನದವರೆಗೂ ಸ್ವೀಕರಿಸಲಾಗುತ್ತದೆ, ನಂತರ ಅರ್ಜಿಗಳನ್ನು ಸ್ಥಳದಲ್ಲೇ ವಿಲೇವಾರಿ ಮಾಡಲು ಸಚಿವರ ನೇತೃತ್ವದಲ್ಲಿ ಸಭೆ ನಡೆಸಿ ಆದಷ್ಟು ಅರ್ಜಿಗಳನ್ನು ಅಲ್ಲೇ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಸಭೆಯಲ್ಲಿ ತಹಸೀಲ್ದಾರ್ ಲೋಕೇಶ್, ತಾ.ಪಂ ಇಒ ಮಮತ ಸೇರಿದಂತೆ ತಾಲೂಕಿನ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!