Tuesday, November 24, 2026

ಪ್ರಾಯೋಗಿಕ ಆವೃತ್ತಿ

ಸರ್ಕಾರಿ ಆಸ್ತಿಗಳನ್ನು ಸಂರಕ್ಷಿಸಿ :ಡಾ.ಅನ್ನದಾನಿ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಮೂಲಕ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಆಸ್ತಿಗಳನ್ನು ಸಂರಕ್ಷಿಸಿ. ಪುನರ್ ನಿರ್ಮಾಣ ಮಾಡಬೇಕೆಂದು ಶಾಸಕ ಡಾ.ಕೆ.ಅನ್ನದಾನಿ ಸಲಹೆ ನೀಡಿದರು.

ಮಳವಳ್ಳಿ ತಾಲ್ಲೂಕಿನ ಶಾದಿ ಮಹಲ್ ಹಾಲ್ ನಲ್ಲಿ ಹಮ್ಮಿಕೊಂಡಿದ ತಾಲ್ಲೂಕು ಮಟ್ಟದ ಕಾಯಕ ಬಂಧುಗಳ ತರಬೇತಿ ಕಾರ್ಯಾಗಾರದಲ್ಲಿ  ಅವರು ಮಾತನಾಡಿ, ನರೇಗಾ ಯೋಜನೆಯಲ್ಲಿ ಪ್ರಾಂತ್ಯದ ಕೃಷಿ ಕೂಲಿಕಾರರು ಹೆಚ್ಚಾಗಿ ಉದ್ಯೋಗ ಖಾತ್ರಿಯಲ್ಲಿ ಕೆಲಸ ಮಾಡಿ ಜೀವನ ನಡೆಸುತ್ತಿದ್ದಾರೆ ಮತ್ತು ನಮ್ಮ ತಾಲ್ಲೂಕಿನಲ್ಲಿ ಮಹಿಳೆಯರು ಹೆಚ್ಚಾಗಿ ಭಾಗವಹಿಸುತ್ತಾರೆ ಎಂದರು.

ಈ ಸಂದರ್ಭದಲ್ಲಿ ಕೂಲಿಕಾರರ ಸಂಘದ ಜಿಲ್ಲಾಧ್ಯಕ್ಷ ಪುಟ್ಟಮಾದು ಮಾತನಾಡಿ, ಗ್ರಾಮ ಪಂಚಾಯತಿಯು ನರೇಗಾ ಯೋಜನೆಯ ಕೂಲಿ ಕಾರ್ಮಿಕರಿಗೆ ಸೇತುವೆ ಇದಂತೆ ಎಂದರು.

ತಾಲ್ಲೂಕು ಮಾಹಿತಿ ಶಿಕ್ಷಣ ಮತ್ತು ಸಂವಹನ ಸಂಯೋಜಕ  ಹೆಚ್.ಸುನಿಲ್ ಕುಮಾರ್ ಮಾತನಾಡಿ, ಕಾಯಕ ಬಂಧುಗಳು ನಿರ್ವಹಿಸಬೇಕಾದ ಕರ್ತವ್ಯಗಳ ಬಗ್ಗೆ ತಿಳಿಸಿದರು.

ಇದೇ ವೇಳೆ ತಾಲ್ಲೂಕು ತಾಂತ್ರಿಕ ಸಂಯೋಜಕ ಸುಹಾಸ್  ಅವರು 2022ನೇ ಸಾಲಿನ ಹೊಸ ಮೇಟ್ ಕಾರ್ಡ್ ಗಳನ್ನು ವಿತರಿಸಿದರು.

ಇದೇ ಸಂದರ್ಭದಲ್ಲಿ ರಾಜ್ಯ ಪ್ರಾಂತ ಕೂಲಿಕಾರರ ಸಂಘದ ಉಪಾಧ್ಯಕ್ಷ  ಜಿ.ಎನ್.ನಾಗರಾಜು, ಕನ್ನಡ ಸಾಹಿತ್ಯ ಪರಿಷತ್ತಿನ  ಅಧ್ಯಕ್ಷ ಚೇತನ್ ಕುಮಾರ್, ತಾಲ್ಲೂಕು ಅಧ್ಯಕ್ಷ ಶಿವಮಲ್ಲಯ್ಯ ಹಾಗೂ ತಾಲ್ಲೂಕು ಮಟ್ಟದ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ