ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಸಂಪುಟದ ಹಲವು ಸಚಿವರು ಇಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಅನುಮೋದನೆಗೆ ಬಾಕಿ ಇರುವ ವಿಧೇಯಕಗಳ ಬಗ್ಗೆ ಸಮಾಲೋಚನೆ ನಡೆಸಿದರು. ಈ ವೇಳೆ ಮುಖ್ಯಮಂತ್ರಿಗಳು ರಾಷ್ಟ್ರಪತಿಗಳಿಗೆ ಮೈಸೂರು ಪೇಟ ಹಾಗೂ ಶ್ರೀಗಂಧದ ಸ್ಮರಣಿಕೆ ನೀಡಿ ಗೌರವಿಸಿದರು.
ಸಚಿವರಾದ ಕೆ.ಜೆ.ಜಾರ್ಜ್, ಹೆಚ್.ಸಿ.ಮಹದೇವಪ್ಪ,ಸತೀಶ್ ಜಾರಕಿಹೊಳಿ, ಸರ್ಕಾರದ ಮುಖ್ಯಕಾರ್ಯದರ್ಶಿ ಡಾ.ಶಾಲಿನಿರಜನೀಶ್ ಅವರು ಈ ವೇಳೆ ಉಪಸ್ಥಿತರಿದ್ದರು.




