Thursday, June 13, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಮಲೇರಿಯಾ ತಡೆಗಟ್ಟುವಿಕೆ ಜಾಥಾಕ್ಕೆ ಚಾಲನೆ

ವಿಶ್ವ ಮಲೇರಿಯಾ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗ ವಾಹಕ ಆಶ್ರಿತ ರೋಗಗಳ ನಿಯಂತ್ರಣ
ಅಧಿಕಾರಿಗಳ ಕಚೇರಿ ಇವರ ಸಂಯುಕ್ತ ಆಶ್ರಯದಲ್ಲಿ ಮಂಡ್ಯ ನಗರದ ತಮಿಳು ಕಾಲೋನಿ ಬಡಾವಣೆಯಲ್ಲಿ ಮಲೇರಿಯಾ ತಡೆಗಟ್ಟುವಿಕೆ ಜಾಥಾಗೆ ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್ ನಾಗರಾಜು ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ನಿವಾಸಿಗಳು ಅಕ್ಕ- ಪಕ್ಕದ ಸ್ಥಳಗಳನ್ನು ಸ್ವಚ್ಚವಾಗಿಟ್ಟುಕೊಳ್ಳಬೇಕು. ಕಲ್ಮಷ ನೀರು ಒಂದೆಡೆ ನಿಲ್ಲದಂತೆ ಎಚ್ಚರಿಕೆ‌ ವಹಿಸಬೇಕು. ಶುದ್ದ ಆಹಾರ ಸೇವನೆ ಹಾಗೂ ಸ್ವಚ್ಚತೆಗೆ ಹೆಚ್ಚಿನ ಆಧ್ಯತೆ ನೀಡಬೇಕೆಂದು ನಿವಾಸಿಗಳಿಗೆ ಕಿವಿಮಾತು ಹೇಳಿದರು.

ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಕೆ ಮೋಹನ್ (ಡಿ.ಎಚ್.ಒ) ಜಿಲ್ಲಾ ಕುಷ್ಟರೋಗ ನಿರ್ಮೂಲನಾಧಿಕಾರಿ ಡಾ.ಸೋಮಶೇಖರ್, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ಬೆಟ್ಟಸ್ವಾಮಿ, ಆರ್.ಸಿ. ಹೆಚ್ ಅಧಿಕಾರಿ ಡಾ.ಅನಿಲ್ ಕುಮಾರ್, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಎಂ.ಎನ್ ಆಶಾಲತಾ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಕಾಂತರಾಜು, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಕುಮಾರ್, ತಾಲ್ಲೂಕು ಆರೋಗ್ಯ ವೈದ್ಯಾಧಿಕಾರಿ (ಟಿ.ಎಚ್.ಒ), ಡಾ.ಜವರೇಗೌಡ, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಮಂಗಳಾ, ಮಲೇರಿಯ ವಿಭಾಗದ ಅಧಿಕಾರಿಗಳಾದ ಸೋಮಶೇಖರ್, ಜಾನೆಟ್ ಮೆನೆಜಿಸ್, ಹಾಗೂ ಎಸ್.ಡಿ.ಜಯರಾಂ ನರ್ಸಿಂಗ್ ಶಾಲೆಯ ವಿದ್ಯಾರ್ಥಿನಿಯರು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!