Monday, May 6, 2024

ಪ್ರಾಯೋಗಿಕ ಆವೃತ್ತಿ

ಪ್ರಧಾನಮಂತ್ರಿ ನರೇಂದ್ರಮೋದಿ ರೋಡ್ ಶೋಗೆ ಹೆಚ್ಚಿನ ಜನಸೇರುವ ನಿರೀಕ್ಷೆ-ಅಶೋಕ್‌ ಜಯರಾಂ ಅಭಿಮತ

ಬೆಂಗಳೂರು-ಮೈಸೂರು ಹೈವೇ ಹೆದ್ದಾರಿ ಲೋಕಾರ್ಪಣೆಗಾಗಿ ಮಾ.12 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಡ್ಯ ನಗರಕ್ಕೆ ಆಗಮಿಸುತ್ತಿರುವುದರಿಂದ ಪ್ರಚಾರವಾಹನಕ್ಕೆ ಚಾಲನೆ ನೀಲಾಗುತ್ತಿದೆ ಎಂದು ಮಂಡ್ಯ ವಿಧಾನಸಭಾ ಕ್ಷೇತ್ರ ಬಿಜೆಪಿ ಮುಖಂಡ ಅಶೋಕ್‌ಜಯರಾಂ ಹೇಳಿದರು.

ನಗರದ ಬಿಜೆಪಿ ಕಚೇರಿ ಬಳಿ ಮಂಡ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಾರ್ವಜನಿಕರ ಗಮನ ಸೆಳೆದು ಐತಿಹಾಸಿ ರೋಡ್‌ಶೋಗೆ ಬರುವಂತೆ ಆಹ್ವಾನ ನೀಡಲು ಪ್ರಚಾರ ವಾಹನಗಳ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡದರು.

ಪ್ರಥಮ ಬಾರಿಗೆ ಮಂಡ್ಯ ನಗರಕ್ಕೆ ಬರುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಅದ್ದೂರಿಯಾಗಿ ಸ್ವಾಗತಿಸಿ, ಗೌರವಿಸಲಾಗುವುದು, ನಗರದ ಹೆದ್ದಾರಿಯಲ್ಲಿ ರೋಡ್ ಶೋ ಮೂಲಕ ಜನರ ಮನಸ್ಸನ್ನು ಸೆಳೆಯಲಿದ್ದಾರೆ, ಲಕ್ಷಾಂತರ ಸಂಖ್ಯೆಯಲ್ಲಿ ಜನತೆ ಪಾಲ್ಗೊಳ್ಳಲಿದ್ದಾರೆ ಎಂದು ನುಡಿದರು.

ಮಂಡ್ಯ ನಗರದಲ್ಲಿ ರೋಡ್ ಶೋ
ಮಂಡ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ನಡೆಸಲಿದ್ದಾರೆ. ಕಳೆದ ಫೆಬ್ರವರಿ ತಿಂಗಳಿನಲ್ಲಿ ಮೋದಿ ಅವರು ಶಿವಮೊಗ್ಗ, ಬೆಳಗಾವಿಗೆ ಭೇಟಿ ನೀಡಿ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ್ದರು. ಹಾಗೂ ಫಲಾನುಭವಿಗಳ ಸಮಾವೇಶ ಉದ್ದೇಶಿಸಿ ಮಾತನಾಡಿದ್ದರು. ಸದ್ಯ ಮಂಡ್ಯದ ಜನರ ಮನ ಸೆಳೆಯಲು ಸಕ್ಕರೆ ನಾಡಿಗೆ ಭೇಟಿ ನೀಡುತ್ತಿದ್ದಾರೆ. ಇದಕ್ಕಾಗಿ ಎಲ್ಲಾ ರೀತಿಯ ತಯಾರಿ ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಿದರು.

ರೋಡ್ ಶೋನಲ್ಲಿ ಪಾಲ್ಗೊಳ್ಳುವ ಹಿರಿಯರಿಗೆ ವಿಶೇಷವಾಗಿ ಗಮನಿಸಿಕೊಳ್ಳಲಾಗುವುದು, ಯುವಕರಿಗೆ ಹೆಚ್ಚಿನ ಆಧ್ಯತೆ ನೀಡಲಾಗಿದೆ, ಕಾಲೇಜು ವಿದ್ಯಾರ್ಥಿಗಳು ವೀಕ್ಷಣೆಗೆ ಸೂಕ್ತ ಸ್ಥಳ ನೀಡಲಾಗಿದೆ ಎಂದು ತಿಳಿಸಿದರು.

ಬೆಂಗಳೂರು-ಮೈಸೂರು ಹೈವೇ ಲೋಕಾರ್ಪಣೆ
ಬೆಂಗಳೂರು-ಮೈಸೂರು ಹೈವೇಯನ್ನು ನೆಚ್ಚಿನ ಪ್ರದಾನಮಂತ್ರಿ ನರೇಂದ್ರ ಮೋದಿ ಅವರು ಲೋಕಾರ್ಪಣೆ ಮಾಡಲಿದ್ದಾರೆ. ಈಗಾಗಲೇ ಮದ್ದೂರು ತಾಲೂಕಿನ ಗೆಜ್ಜಲಗೆರೆ ಕಾಲೋನಿಯಲ್ಲಿ ನಡೆಯುವ ಸಮಾವೇಶಕ್ಕೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. ೧೬ ಎಕರೆ ವಿಸ್ತೀರ್ಣದಲ್ಲಿ ಬೃಹತ್ ಸಮಾವೇಶ ಮಾಡಲಾಗುತ್ತಿದೆ. ಪ್ರಧಾನಿ ಮೋದಿ ಆಗಮನ ಹಿನ್ನಲೆ ಜಿಲ್ಲಾಡಳಿತ ಭಾರಿ ಎಚ್ಚರಿಕೆ ವಹಿಸುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಡಾ.ಸದಾನಂದ, ಪ್ರಚಾರ ಸಮಿತಿ ವ್ಯವಸ್ಥಾಪಕ ಶ್ರೀನಿವಾಸ್, ಬಿಜೆಪಿ ನಗರಮೋರ್ಚಾ ಅಧ್ಯಕ್ಷ ವಿವೇಕ್, ಮುಖಂಡರಾದ ಮಹೇಶ್, ನಗರಸಭಾ ನಾಮಿನಿ ಸದಸ್ಯರಾದ ಚಂದ್ರ, ಪ್ರಸನ್ನ, ಜವರೇಗೌಡ, ಹರ್ಷ ಮತ್ತಿತರರಿದ್ದರು.

ಮಂಡ್ಯ ನಗರದ ಬಿಜೆಪಿ ಕಚೇರಿ ಬಳಿ ಮಂಡ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಾರ್ವಜನಿಕರ ಗಮನ ಸೆಳೆದು ಮಾ.12ರ ಐತಿಹಾಸಿಕ ರೋಡ್‌ಶೋಗೆ ಬರುವಂತೆ ಆಹ್ವಾನ ನೀಡಲು ಪ್ರಚಾರ ವಾಹನಗಳ ಅಭಿಯಾನಕ್ಕೆ ಬಿಜೆಪಿ ಮುಖಂಡ ಅಶೋಕ್‌ಜಯರಾಂ ಚಾಲನೆದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!