Tuesday, November 24, 2026

ಪ್ರಾಯೋಗಿಕ ಆವೃತ್ತಿ

ಬಸರಾಳು ಭಾಗದ ಅಭಿವೃದ್ಧಿಗೆ ಆದ್ಯತೆ : ಶಾಸಕ ರವಿಕುಮಾರ್

ಮಂಡ್ಯ : ವಿಧಾನಸಭಾ ಕ್ಷೇತ್ರದ ಬಸರಾಳು ವ್ಯಾಪ್ತಿಯ ಎಂಟು ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಹೆಚ್ಚಿನ ಅಭಿವೃದ್ದಿಗೆ ಆದ್ಯತೆ ನೀಡಲಾಗಿದೆ ಎಂದು  ಶಾಸಕ ರವಿಕುಮಾರ್ ಹೇಳಿದರು.

ಬಸರಾಳಿನಲ್ಲಿ ನಡೆದ ಜನತಾ ದರ್ಶನದಲ್ಲಿ ಮಾತನಾಡಿದ ಅವರು, ಗ್ರಾಮೀಣ ಜನರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ಸಮಸ್ಯೆಗಳನ್ನು ಪರಿಹರಿಸುವ ಉದ್ದೇಶದಿಂದ ಪ್ರಜಾಸೇವೆ ಆಂದೋಲನ ಜಾರಿಗೆ ತರಲಾಗಿದೆ ಎಂದರು.

ರಸ್ತೆ, ಕುಡಿಯುವ ನೀರು ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ. ಮನೆ ಇಲ್ಲದ ಅರ್ಹ ಬಡ ಕುಟುಂಬಗಳಿಗೆ ನಿವೇಶನ ಒದಗಿಸುವ ನಿಟ್ಟಿನಲ್ಲಿ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಸುಮಾರು 40 ಕುಟುಂಬಗಳಿಗೆ ನಿವೇಶನ ಒದಗಿಸಲಾಗಿದ್ದು, ನಿವೇಶನ ಅಭಿವೃದ್ಧಿಗೆ 50 ಲಕ್ಷ ಅನುದಾನ ಬಳಸಲಾಗಿದೆ.
ಮುಂದಿನ ದಿನಗಳಲ್ಲಿ ಅರ್ಹ ಫಲಾನುಭವಿಗಳನ್ನು ಗುರುತಿಸಿ ಇನ್ನಷ್ಟು ನಿವೇಶನ ಒದಗಿಸಲಾಗುವುದು ಎಂದರು.

ಬಸರಾಳು–ದೇವಲಾಪುರ ಭಾಗದ ಕುಡಿಯುವ ನೀರಿನ ಯೋಜನೆ ಹಾಗೂ ಹೇಮಾವತಿ ನಾಲೆ ಅಭಿವೃದ್ಧಿಗೆ ಅಗತ್ಯ ಅನುಮೋದನೆ ಮತ್ತು ಅನುದಾನ ದೊರೆಯುವಂತೆ ಸರ್ಕಾರದ ಮಟ್ಟದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ