Wednesday, June 12, 2024

ಪ್ರಾಯೋಗಿಕ ಆವೃತ್ತಿ

ರಾಜ್ಯಸಭೆಗೆ ಪ್ರಿಯಾಂಕ ಗಾಂಧಿ ಆಯ್ಕೆ ಮಾಡಲು ಮನವಿ

ಕರ್ನಾಟಕದಿಂದ ರಾಜ್ಯಸಭಾ ಸದಸ್ಯೆಯಾಗಿ ಕಾಂಗ್ರೆಸ್ ಪಕ್ಷದಿಂದ ಪ್ರಿಯಾಂಕ ಗಾಂಧಿ ಅವರನ್ನು ಆಯ್ಕೆ ಮಾಡಬೇಕೆಂದು ಮೈಷುಗರ್ ಮಾಜಿ ಅಧ್ಯಕ್ಷ ಬಿ.ಸಿ.ಶಿವಾನಂದ್ ಮನವಿ ಮಾಡಿದ್ದಾರೆ.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ದೇಶದ ರಾಜಕೀಯ ಚುಕ್ಕಾಣಿ ಹಿಡಿಯಲು ಹಾಗೂ ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಲು ಪ್ರಿಯಾಂಕ ಗಾಂಧಿಯವರನ್ನು ಕರ್ನಾಟಕ ವಿಧಾನ ಸಭೆಯಿಂದ ರಾಜ್ಯಸಭೆಗೆ ಆಯ್ಕೆ ಮಾಡಬೇಕು ಎಂದು ಒತ್ತಾಯಿಸಿದರು.

ಕರ್ನಾಟಕ ರಾಜ್ಯದಿಂದ ಈ ಹಿಂದೆ ಇಂದಿರಾ ಗಾಂಧಿ ಮತ್ತು ಸೋನಿಯಾ ಗಾಂಧಿ ಸಹ ಲೋಕಸಭೆಯಿಂದ ಆಯ್ಕೆಯಾಗಿದ್ದಾರೆ. ಅದೇ ರೀತಿ ಪ್ರಿಯಾಂಕ ಗಾಂಧಿಯವರು ಸಹ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾದರೆ ಮುಂಬರುವ ವಿಧಾನ ಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ಜಯಗಳಿಸಿ ಅಧಿಕಾರಕ್ಕೆ ಬರಲು ಸಹಕಾರಿಯಾಗಲಿದೆ ಎಂದು ಹೇಳಿದರು.

ಈ ಹಿಂದೆ ರಾಷ್ಟ್ರದಲ್ಲಿ ಬಿಜೆಪಿ ಪಕ್ಷ ಕೇವಲ 2 ಸಂಸತ್ ಸ್ಥಾನಗಳನ್ನು ಮಾತ್ರ ಪಡೆದಿದ್ದು, ವಿರೋಧ ಪಕ್ಷದ ಸ್ಥಾನವನ್ನು ಸಹ ದಕ್ಕಿಸಿಕೊಳ್ಳಲು ಆಗಲಿಲ್ಲ. ಈ ರಾಷ್ಟ್ರದಲ್ಲಿ ಕಾಂಗ್ರೆಸ್ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಧೃತಿಗೆಡಬೇಕಾಗಿಲ್ಲ. ಧೈರ್ಯವಾಗಿರಿ, ಮುಂದೆ ಅಧಿಕಾರಕ್ಕೆ ನಾವು ಬಂದೇ ಬರುತ್ತೇವೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಪ್ರಿಯಾಂಕ ಗಾಂಧಿಯವರಿಗೆ ಕರ್ನಾಟಕದಿಂದಲೇ ಸ್ಪರ್ಧೆ ಮಾಡುವಂತೆ ಒತ್ತಾಯಿಸಿದ್ದಾರೆ. ಅದೇ ರೀತಿ ಕರ್ನಾಟಕ ರಾಜ್ಯದ ಕಾಂಗ್ರೆಸ್ ಪಕ್ಷದ ಪರವಾಗಿ ನಾವು ಸಹ ಒತ್ತಾಯಿಸುತ್ತೇವೆ.

ಸುದ್ದಿಗೋಷ್ಠಿಯಲ್ಲಿ ರಾಜ್ಯ ಕಾನೂನು ಘಟಕದ ಉಪಾಧ್ಯಕ್ಷ ಕೆ.ಎನ್.ನಾಗರಾಜು, ಐಟಿಸೆಲ್ ರಾಜ್ಯ ಕಾರ್ಯದರ್ಶಿ ಹೆಚ್.ಎಂ.ರಾಜಪ್ಪಉಪ ಸ್ಥಿತರಿದ್ದರು.

ಇದನ್ನು ಓದಿ: ಪದವೀಧರ ಶಿಕ್ಷಕರ ಸಮಸ್ಯೆ ಬಗೆಹರಿಸಲು ಕಾಂಗ್ರೆಸ್ ಗೆ ಮತ ನೀಡಿ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!