Monday, May 6, 2024

ಪ್ರಾಯೋಗಿಕ ಆವೃತ್ತಿ

ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ : ಪ್ರಿಯಾಂಕ ಗಾಂಧಿ

ಬೆಲೆ ಏರಿಕೆಯಿಂದ ಇಂದು ಕುಟುಂಬ ನಿರ್ವಹಣೆ ಕಷ್ಟವಾಗಿದೆ. ಕರ್ನಾಟಕ ಸರ್ಕಾರದ ವಿರುದ್ಧ 40 ಪರ್ಸೆಂಟೆಜ್ ​ಕಮಿಷನ್​ ಆರೋಪವಿದೆ. ಪಿಎಸ್​ಐ ನೇಮಕಾತಿ ಹಗರಣ ಸೇರಿ ಹಲವು ಭ್ರಷ್ಟಾಚಾರ ಆರೋಪಗಳಿವೆ. ಇಡೀ ಬಿಜೆಪಿ ಸರ್ಕಾರವೇ ಭ್ರಷ್ಟಚಾರದಲ್ಲಿ ಮುಳುಗಿದೆ ಎಂದು ಐಎಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದರು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಕೆಪಿಸಿಸಿ ವತಿಯಿಂದ ಆಯೋಜಿಸಲಾಗಿದ್ದ ‘ನಾ ನಾಯಕಿ’ ಮಹಿಳಾ ಸಮಾವೇಶದಲ್ಲಿ ಪ್ರಧಾನ ಭಾಷಣ ಮಾಡಿದ ಅವರು, ತಮ್ಮ ಭಾಷಣದುದ್ದಕ್ಕೂ ಬಿಜೆಪಿ ಸರ್ಕಾರಗಳ ವೈಫಲ್ಯಗಳನ್ನೆ ಪ್ರಸ್ತಾಪಿಸಿ ವಾಗ್ಧಾಳಿ ನಡೆಸಿದರು.

ರಾಜ್ಯದ ಪ್ರತಿಯೊಂದು ಇಲಾಖೆಯಲ್ಲೂ ಭ್ರಷ್ಟಾಚಾರದ ಆರೋಪ ಕೇಳಿ ಬಂದಿದೆ. ಕೋವಿಡ್ ವೇಳೆ ಜನರಿಗೆ ನೆರವು ನೀಡುವಲ್ಲಿ ಸರ್ಕಾರ ವಿಫಲವಾಗಿದೆ. ಉದ್ಯೋಗ ನೀಡುವಲ್ಲಿ ವಿಫಲವಾಗಿದ್ದು, ಅಗತ್ಯ ವಸ್ತುಗಳ ಬೆಲೆ ಏರಿಕೆ ಗಗನಕ್ಕೇರಿ ಸಾಮಾನ್ಯ ಜನ ಕಷ್ಟದಲ್ಲಿದ್ದಾರೆ. ರೈತರು, ಬಡವರ ಸಮಸ್ಯೆಗಳಿಗೆ ಕೇಂದ್ರ, ರಾಜ್ಯಗಳು  ಸ್ಪಂದಿಸಿಲ್ಲ. ಅನಗತ್ಯ ವಿವಾದಗಳನ್ನು ಸೃಷ್ಟಿಸಿ ಜನರನ್ನು ದಾರಿ ತಪ್ಪಿಸಲಾಗುತ್ತಿದೆ. ಶ್ರೀಮಂತರ ಪರ ಕೇಂದ್ರ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬೆಲೆ ಏರಿಕೆಯ ಸಂಕಷ್ಟದಿಂದ ಜನಸಾಮಾನ್ಯರು ತತ್ತರಿಸಿದ್ದಾರೆ. ಹೀಗಾಗಿ ಇಡೀ ಕುಟುಂಬದ ನಿರ್ವಹಣೆಯಲ್ಲಿ ಪ್ರಮುಖ ಪಾತ್ರ ವಹಿಸುವ ಮಹಿಳೆಯರಿಗಾಗಿ ”ಗೃಹಲಕ್ಷ್ಮಿ” ಯೋಜನೆಯನ್ನು ನೀಡುತ್ತಿದ್ದೇವೆ, ಇದರಿಂದ ಪ್ರತಿ ಕುಟುಂಬದ ಗೃಹಿಣಿಗೆ ಪ್ರತಿ ತಿಂಗಳು ₹ 2000 ರೂ. ಪ್ರೋತ್ಸಾಹ ಧನ ದೊರೆಯಲಿದೆ, ಇಂತಹ ಹಲವು ಜನಪರ ಯೋಜನೆಗಳಿಗಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಎಂದು ಮನವಿ ಮಾಡಿದರು.

ಭಾರತ ದೇಶಕ್ಕೆ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಕೊಡುಗೆ ಸಾಕಷ್ಟಿದೆ. ಅವರು ಬಡವರು, ಮಹಿಳೆಯರು, ರೈತರಿಗೆ ಸಾಕಷ್ಟು ಜನಪರ ಯೋಜನೆಗಳು ನೀಡಿದ್ದರು. ಕಾಂಗ್ರೆಸ್​ ಆಡಳಿತಾವಧಿಯಲ್ಲಿ ಸಾಕಷ್ಟು ಕೆಲಸಗಳನ್ನು ಮಾಡಲಾಗಿತ್ತು. ಆದರೆ, ಇಂದು ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಜನಸಾಮಾನ್ಯರ ಹಿತ ಕಡೆಗಣಿಸಿದೆ, ಬಂಡವಾಳಶಾಹಿಗಳ ಪರವಾಗಿ ಕೆಲಸ ಮಾಡುತ್ತಿದೆ, ಇಂತಹ ಜನವಿರೋಧಿ ಸರ್ಕಾರವನ್ನು ಕಿತ್ತೊಗೆಯಬೇಕೆಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಐಐಸಿಸಿ ಪ್ರಧಾನ ಕಾರ್ಯದರ್ಶಿ ರಂದೀಪ್ ಸುರ್ಜೆವಾಲ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಪುಷ್ಪ ಅಮರನಾಥ್, ನಾಯಕಿ ಲಕ್ಷ್ಮಿ ಹೆಬ್ಬಾಳ್ಕರ್ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!