Friday, April 19, 2024

ಪ್ರಾಯೋಗಿಕ ಆವೃತ್ತಿ

ಪದವೀಧರರ ಸಮಸ್ಯೆಗಳ ವಿರುದ್ಧ ಧ್ವನಿಯೆತ್ತಲು ಶಕ್ತಿ ಕೊಡಿ : ವಾಟಾಳ್ ನಾಗರಾಜ್

ಪದವೀಧರರ ಸಮಸ್ಯೆಗಳು ಸಾಕಷ್ಟಿದ್ದು ,ಅವರ ಪರವಾಗಿ ವಿಧಾನಪರಿಷತ್‌ನಲ್ಲಿ ಧ್ವನಿಯೆತ್ತಲು ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ನನ್ನನ್ನು ಆಯ್ಕೆ ಮಾಡುವ ಮೂಲಕ ಶಕ್ತಿ ಕೊಡಿ ಪಕ್ಷೇತರ ಅಭ್ಯರ್ಥಿ ವಾಟಾಳ್ ನಾಗರಾಜು ಮಾನವಿ ಮಾಡಿದರು.

ಮಳವಳ್ಳಿ ಪಟ್ಟಣದ ಸರ್ಕಾರಿ ಪದವಿಪೂರ್ವ ಮಹಿಳಾ ಕಾಲೇಜಿನಲ್ಲಿ ಪ್ರಚಾರ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪದವೀಧರರು ಉದ್ಯೋಗವಿಲ್ಲದೆ ನಿರುದ್ಯೋಗದಿಂದ ಬದುಕುತ್ತಿದ್ದಾರೆ. ನಿರುದ್ಯೋಗದ ಸಮಸ್ಯೆಯನ್ನು ಹೋಗಲಾಡಿಸಲು ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಪದವೀಧರರ ಪರ ಹೋರಾಟ ಮಾಡಲು ನನಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸಿ ಎಂದರು.

ನಾಡು, ನುಡಿ, ನೆಲ ಜಲಕ್ಕಾಗಿ ನಿರಂತರವಾಗಿ ಹೋರಾಟ ಮಾಡುತ್ತಿದ್ದೇನೆ. ಕಾರ್ಖಾನೆಗಳಲ್ಲಿ ಕರ್ನಾಟಕದವರಿಗೆ ಎಲ್ಲಾ ಉದ್ಯೋಗವನ್ನು ನೀಡಬೇಕು. ನಿರುದ್ಯೋಗಿ ಪದವೀಧರರಿಗೆ ನಿರುದ್ಯೋಗ ಭತ್ಯೆ ಸೇರಿದಂತೆ ಹಲವಾರು ಸೌಲಭ್ಯಕ್ಕಾಗಿ ಪ್ರಾಮಾಣಿಕ ಹೋರಾಟ ಮಾಡುವುದಾಗಿ ಹೇಳಿದರು.

ದುಡ್ದು ಇದ್ದವರಿಗೆ ಟಿಕೆಟ್ ಎನ್ನುವಂತಾಗಿದೆ, ಪದವೀಧರರ ಸಮಸ್ಯೆಗಳನ್ನು ನಿವಾರಿಸಲು ಯಾರಿಗೂ ಆಸಕ್ತಿ ಇಲ್ಲ. ಆದರೇ ಎಲ್ಲಾರಿಗೂ ಅಧಿಕಾರ ಬೇಕು, ಚುನಾವಣೆ ಎನ್ನುವುದು ವ್ಯಾಪಾರವಾಗಿಬಿಟ್ಟಿದೆ ಎಂದರು.

ನಿರುದ್ಯೋಗ ಪದವಿಧರಿಗೆ 10 ಸಾವಿರ ನಿರುದ್ಯೋಗ ವೇತನ ನೀಡಬೇಕು, ನಿರುದ್ಯೋಗಿ ಯುವಕರಿಗೆ ಉದ್ಯೋಗ ಸಿಗುವಂತಾಗಬೇಕು. ತನ್ನ ಹೋರಾಟದ ಮೂಲಕ ಸಮಸ್ಯೆಗಳನ್ನು ಬಗೆಹರಿಸುತ್ತೆನೆ. ಚುನಾವಣೆಯಲ್ಲಿ ಗೆಲ್ಲಿಸುವುದರ ಮೂಲಕ ಹೊರಾಟಕ್ಕೆ ಶಕ್ತಿ ತುಂಬಬೇಕೆಂದು ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ಪಾರ್ಥಸಾರಥಿ.ಲಿಂಗರಾಜು ಸೇರಿದಂತೆ ಇತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!