Thursday, November 19, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಕೆ.ಸೆಟ್ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ

ಮಂಡ್ಯ ತಾಲ್ಲೂಕು ವ್ಯಾಪ್ತಿಯ 19 ಪರೀಕ್ಷಾ ಕೇಂದ್ರಗಳಲ್ಲಿ ಕೆ.ಸೆಟ್  ಪರೀಕ್ಷೆಯು ಜನವರಿ 13ರಂದು ನಡೆಯಲಿದೆ.

ಕೆ.ಸೆಟ್  (KSET) ಪರೀಕ್ಷೆಯನ್ನು ಸುಗಮವಾಗಿ ನಡೆಸುವ ಸಲುವಾಗಿ ಮಂಡ್ಯ ತಾಲ್ಲೂಕು ವ್ಯಾಪ್ತಿಯ 19 ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಪರೀಕ್ಷಾ ಕೇಂದ್ರಗಳ ಸುತ್ತ ಇರುವ ಜೆರಾಕ್ಸ್ ಅಂಗಡಿಗಳನ್ನು ಪರೀಕ್ಷಾ ಅವಧಿಯಲ್ಲಿ ಮುಚ್ಚುವಂತೆ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಆದೇಶ ಹೊರಡಿಸಿದ್ದಾರೆ.

ಪರೀಕ್ಷಾರ್ಥಿಗಳು ಮತ್ತು ಪರೀಕ್ಷಾ ಕಾರ್ಯಕ್ಕೆ ನೇಮಕಗೊಂಡ ಅಧಿಕಾರಿಗಳು, ಸಿಬ್ಬಂದಿಗಳನ್ನು ಹೊರತುಪಡಿಸಿ ಇತರರು ಯಾರು ನಿಷೇಧಿತ ಪ್ರದೇಶದೊಳಗೆ ಪ್ರವೇಶಿಸುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ