Tuesday, November 24, 2026

ಪ್ರಾಯೋಗಿಕ ಆವೃತ್ತಿ

ಪಶ್ಚಿಮ ಬಂಗಾಳ | ಅತ್ಯಾಚಾರ ತಡೆ ಮಸೂದೆ ಮಂಡನೆ

ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರ ಮಂಗಳವಾರ ವಿಧಾನಸಭೆಯಲ್ಲಿ ಅತ್ಯಾಚಾರ ತಡೆ ಮಸೂದೆಯನ್ನು ಮಂಡಿಸಿದೆ. ಈ ಮಸೂದೆಯು ಅತ್ಯಾಚಾರದ ಅಪರಾಧಿಗಳಿಗೆ ಮರಣದಂಡನೆಯನ್ನು ವಿಧಿಸಲು ಅವಕಾಶ ನೀಡುವ ಮಸೂದೆಯಾಗಿದೆ.

ಮಸೂದೆಯಡಿ ಅತ್ಯಾಚಾರ ಮತ್ತು ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಅತ್ಯಾಚಾರ ಸಂತ್ರಸ್ತೆ ಸಾವನ್ನಪ್ಪಿದರೆ, ಅತ್ಯಾಚಾರ ಮಾಡಿವುದು ದೃಢಪಟ್ಟರೆ ಆರೋಪಿಗೆ ಜೀವಾವಧಿ ಶಿಕ್ಷೆಯನ್ನೂ ವಿಧಿಸಬಹುದು.

ಅಪರಾಜಿತಾ ಮಹಿಳೆ ಮತ್ತು ಮಕ್ಕಳ ಮಸೂದೆ (ಪಶ್ಚಿಮ ಬಂಗಾಳ ಕ್ರಿಮಿನಲ್ ಕಾನೂನು ಮತ್ತು ತಿದ್ದುಪಡಿ ಮಸೂದೆ)-2024 ಅನ್ನು ಸರ್ಕಾರ ಮಂಡಿಸಿದ್ದು, ಇದರಲ್ಲಿ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯದ ಅಪರಾಧಗಳಿಗೆ ಸಂಬಂಧಿಸಿದ ಹೊಸ ನಿಬಂಧನೆಗಳನ್ನು ಪರಿಚಯಿಸಲಾಗಿದೆ.

ಇನ್ನು ಜಿಲ್ಲಾ ಮಟ್ಟದಲ್ಲಿ ವಿಶೇಷ ಕಾರ್ಯಪಡೆಯನ್ನು ರಚಿಸಲು ಈ ಮಸೂದೆಯಲ್ಲಿ ಪ್ರಸ್ತಾಪಿಸುತ್ತದೆ. ಈ ವಿಶೇಷ ಕಾರ್ಯಪಡೆಗೆ ‘ಅಪರಾಜಿತಾ ಟಾಸ್ಕ್ ಫೋರ್ಸ್’ ಎಂದು ಹೆಸರಿಡಲಾಗಿದೆ.

ಕೋಲ್ಕತ್ತಾದಲ್ಲಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆಯ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಎರಡು ದಿನಗಳ ವಿಧಾನಸಭೆಯ ವಿಶೇಷ ಅಧಿವೇಶನಕ್ಕೆ ಕರೆ ನೀಡಿತ್ತು. ಹಾಗೆಯೇ ಮಸೂದೆ ಮಂಡಿಸುವ ಭರವಸೆಯನ್ನು ನೀಡಿತ್ತು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ