ವಿಧಾನಸಭಾ ಚುನಾವಣೆ 2023ರ ಮತದಾನ ಪ್ರಕ್ರಿಯೆ ಮುಗಿದಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ. ಈ ಹಿನ್ನಲೆಯಲ್ಲಿಮಂಡ್ಯ ಜಿಲ್ಲೆಯಲ್ಲಿ ಮೇ 13 ರಂದು ಬೆಳಿಗ್ಗೆ 6 ಗಂಟೆಯಿಂದ ಮೇ 14 ರ ಬೆಳಿಗ್ಗೆ 6 ಗಂಟೆವರೆಗೆ 144ರ ಅಡಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಹೆಚ್.ಎನ್ ಗೋಪಾಲಕೃಷ್ಣ ಆದೇಶ ಹೊರಡಿಸಿದ್ದಾರೆ.
ಮತ ಏಣಿಕೆ ಕಾರ್ಯವು ಮುಗಿಯುತ್ತಿದ್ದಂತೆ ಅಭ್ಯರ್ಥಿಗಳು ಅವರು ಬೆಂಬಲಿಗರೊಡನೆ ಪಟಾಕಿ ಸಿಡಿಸಿಕೊಂಡು ಮೆರವಣಿಗೆಯ ಮೂಲಕ ವಿಜಯೋತ್ಸವವನ್ನು ಚುನಾವಣಾ ಮತ ಏಣಿಕೆ ಕಾರ್ಯ ನಡೆಯುತ್ತಿರುವ ಕೇಂದ್ರದ ಬಳಿ ಹಾಗೂ ಅವರವರ ಕ್ಷೆತ್ರ ವ್ಯಾಪ್ತಿಯ ಪಟ್ಟಣಗಳಲ್ಲಿ ಮತ್ತು ಗ್ರಾಮಗಳಿಗೆ ತೆರಳಿ ಅಲ್ಲಿಯೂ ಸಹಾ ಮೆರವಣಿಗೆ ಹಾಗೂ ವಿಜಯೋತ್ಸವವನ್ನು ಆಚರಿಸುವ ಸಂಭವಿರುತ್ತದೆ.
ಈ ಸಮಯದಲ್ಲಿ ಪರಾಭವಗೊಂಡ ಅಭ್ಯರ್ಥಿಗಳ ಹಾಗೂ ಅವರ ಬೆಂಬಲಿಗರ ನಡುವೆ ಘರ್ಷಣೆ ಉಂಟಾಗಿ ಗ್ರಾಮಗಳಲ್ಲಿ ಹಲ್ಲೆಗಳು ನಡೆದು ಒಬ್ಬರು ಮತ್ತೊಬ್ಬರ ಮನೆಗಳಿಗೆ ಕಲ್ಲುಗಳನ್ನು ಹೊಡೆದು, ಬೆಂಕಿ ಹಚ್ಚಿ ದುಷ್ಕೃತ್ಯಗಳನ್ನು ಮಾಡುವ ಸಾಧ್ಯತೆ ಇದ್ದು ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಉಂಟಾಗುವು ಸಾಧ್ಯತೆಗಳು ಇರುತ್ತದೆ, ಆದ್ದರಿಂದ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಯಾವುದೇ ಮೆರವಣಿಗೆ ಮಾಡುವುದನ್ನು, ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವುದನ್ನು ತಡೆಗಟ್ಟಲು ಸಿ.ಆರ್.ಪಿ.ಸಿ ಕಲಂ 144ರ ಅನ್ವಯ ಮಂಡ್ಯ ಜಿಲ್ಲೆಯಾದ್ಯಂತ ನಿಷೇದಾಜ್ಞೆಯನ್ನು ಜಾರಿಗೊಳಿಸಿ ಆದೇಶಿಸಿರುತ್ತೇನೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




