Friday, June 21, 2024

ಪ್ರಾಯೋಗಿಕ ಆವೃತ್ತಿ

ಕಾಂಗ್ರೆಸ್ ಬೆಂಬಲಿಸಿ ಸಿದ್ದರಾಮಯ್ಯ- ಡಿ.ಕೆ ಶಿವಕುಮಾರ್ ‘ಕೈ’ ಬಲಪಡಿಸಿ: ಸ್ಟಾರ್ ಚಂದ್ರು

ಕಾಂಗ್ರೆಸ್ ಗೆ ಮತನೀಡಿ ನನ್ನನ್ನು ಗೆಲ್ಲಿಸಿ ಕಾಂಗ್ರೆಸ್ ಗೆ ಶಕ್ತಿ ತುಂಬಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರ ಕೈ ಬಲಪಡಿಸಬೇಕು ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಮನವಿ ಮಾಡಿದರು.

ಕೆ.ಆರ್.ನಗರದಲ್ಲಿ ಆಯೋಜಿಸಿದ್ದ ಪ್ರಜಾಧ್ವನಿ-2 ಲೋಕಸಭಾ ಚುನಾವಣಾ ಪ್ರಚಾರ ಸಭಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ‌.ಕೆ.ಶಿವಕುಮಾರ್ ಅವರೊಂದಿಗೆ ಭಾಗವಹಿಸಿ ಮಾತನಾಡಿದರು.

ನಾನು ಇದೇ ಲೋಕಸಭಾ ಕ್ಷೇತ್ರದ ನಾಗಮಂಗಲ ತಾಲೂಕು ಕನ್ನಘಟ್ಟ ಗ್ರಾಮದ ರೈತನ ಮಗ. ಜನಸೇವೆ ಮಾಡುವ ಉದ್ದೇಶದಿಂದ ರಾಜಕೀಯಕ್ಕೆ ಬಂದಿದ್ದೇನೆ, ರಾಜಕಾರಣದಿಂದ ಒಂದು ರೂಪಾಯಿ ಹಣ ಮಾಡಲ್ಲ ಎಂದರು.

ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಅವರ ಸಹಕಾರದಿಂದ, ಕೆ.ಆರ್.ನಗರದ ಅಭಿವೃದ್ಧಿಗೆ ರವಿಶಂಕರ್ ಜೊತೆಗೆ ನಾನು ಕೂಡ ಪ್ರಾಮಾಣಿಕವಾಗಿ ದುಡಿಯುತ್ತೇನೆ ಎಂದು ಹೇಳಿದರು.

ಸಭೆಯಲ್ಲಿ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಚಲುವರಾಯಸ್ವಾಮಿ ಶಾಸಕ ರವಿಶಂಕರ್, ಕೆಪಿಸಿಸಿ ಕಾರ್ಯಕಾರಿಣಿ  ಸಮಿತಿ ಸದಸ್ಯರಾದ ದೊಡ್ಡಸ್ವಾಮೇಗೌಡ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!