ಮಂಡ್ಯ ಜಿಲ್ಲೆಗೆ ಬರುವಂತಹ ಎಲ್ಲಾ ಅನುದಾನವನ್ನು ಸರಿಯಾಗಿ ಬಳಕೆ ಮಾಡಿ ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಶ್ರಮವಹಿಸಿ ಕಾರ್ಯನಿರ್ವಹಿಸಬೇಕು ಎಂದು ಸಂಸದೆ ಸುಮಲತಾ ಅಂಬರೀಶ್ ಸೂಚಿಸಿದರು.
ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಡೆದ ಕೇಂದ್ರ ವಲಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಸುಮಲತಾ ಅಂಬರೀಶ್ ಮಾತನಾಡಿದರು.
ಜಿಲ್ಲೆಯ ಬಹುಪಾಲು ಶಾಲೆಗಳು ಶಿಥಿಲವಾಗಿವೆ ಅವುಗಳನ್ನು ದುರಸ್ತಿಪಡಿಸುವ ಕೆಲಸಗಳನ್ನು ಬೇಗ ಮಾಡಬೇಕು ಶಾಲೆ ಮಕ್ಕಳಿಗೆ ಯಾವುದೇ ತೊಂದರೆಯಾಗದ ರೀತಿ ಮೂಲಸೌಕರ್ಯವನ್ನು ಕಲ್ಪಿಸಿಕೊಡಿ ಎಂದು ಹೇಳಿದರು.
ವಸತಿ ಯೋಜನೆಯಡಿ ಫಲಾನುಭವಿಗಳ ಆಯ್ಕೆ ಗ್ರಾಮಸಭೆಗಳಲ್ಲಿ ನಡೆಯುತ್ತಿಲ್ಲ ಕೇವಲ ಸಭೆಯ ನಡಾವಳಿಗಳನ್ನು ಓದಿ ಅನುಮೋದನೆ ಪಡೆಯಲಾಗುತ್ತಿದೆ ಗ್ರಾಮಸಭೆ ನಡೆಸಿ ಸಾರ್ವಜನಿಕರಿಗೆ ಮಾಹಿತಿ ನೀಡಿ ಇದನ್ನು ಜನರು ಪಡೆಯುವಂತೆ ಅಧಿಕಾರಿಗಳು ಕ್ರಮವಹಿಸಬೇಕು ಎಂದು ನಾಗಮಂಗಲ ಶಾಸಕ ಸುರೇಶ್ ಗೌಡ ಅವರು ತಿಳಿಸಿದರು.
ಜಿಲ್ಲಾ ಟಾಸ್ಕ ಫೋರ್ಸ್ ಸಮಿತಿ ಸಭೆಯ ನಿರ್ಣಯದಂತೆ ಕನಿಜಗಳು ಅನಧಿಕೃತ ಗಣಿಗಾರಿಕೆ ಹಾಗೂ ಅದರ ಸಾಗಾಣಿಕೆಯನ್ನು ತಡೆಯಲು ಜಿಲ್ಲೆಯಲ್ಲಿ 10 ಖನಿಜ ತನಿಖಾ ಠಾಣೆ ಗಳನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಶಾಸಕರಾದ ಎಂ. ಶ್ರೀನಿವಾಸ್, ಜಿಲ್ಲಾಧಿಕಾರಿ ಎಸ್ ಅಶ್ವತಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ ಆರ್ ಜೆ ದಿವ್ಯ ಪ್ರಭು, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವೇಣುಗೋಪಾಲ್, ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ಪಿಎ ಋತ್ರೇನ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.