ಮಳವಳ್ಳಿ ಪಟ್ಟಣದ ಎನ್.ಇ. ಎಸ್ ಬಡಾವಣೆಯ ಬಾಡಿಗೆ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಓರ್ವ ಮಹಿಳೆಯನ್ನು ಮಳವಳ್ಳಿ ಪಟ್ಟಣದ ಪೊಲೀಸರು ಬಂಧಿಸಿದ್ದಾರೆ.
ಮಳವಳ್ಳಿ ಪಟ್ಟಣದ ಮಹಿಳೆಯೊಬ್ಬರು ಬಂಧಿತ ಆರೋಪಿಯಾಗಿದ್ದು, ಸಾರ್ವಜನಿಕರು ನೀಡಿದ ಖಚಿತ ಮಾಹಿತಿ ಮೇರೆಗೆ ಇನ್ಸ್ ಪೆಕ್ಟರ್ ರವಿಕುಮಾರ್ ನೇತೃತ್ವದಲ್ಲಿ ಸಿಬ್ಬಂದಿಗಳಾದ ಮಾದೇಶ್, ಪ್ರಕಾಶ, ಕಲಾವತಿ, ಪೂರ್ಣಿಮಾ ಹಾಗೂ ಮಧು ಅವರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಈ ಸಂಬಂಧ ಮಳವಳ್ಳಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




