ರೈತರ ಹಿತ ಸಂರಕ್ಷಣೆ ರಾಜ್ಯ ಸರ್ಕಾರದ ಮೊದಲ ಅದ್ಯತೆ ಎಂದು ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚುವರಾದ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ.
ನಾಗಮಂಗಲ ತಾಲೂಕಿನ ಬೆಳ್ಳೂರಿನಲ್ಲಿ ನೂತನ ರೈತ ಸಂಪರ್ಕ ಕೇಂದ್ರಕ್ಕೆ ಗುದ್ದಲಿ ಪೂಜೆ ನೇರವೇರಿಸಿ ಕೃಷಿಕರಿಗೆ ರಸಗೊಬ್ಬರ, ಬಿತ್ತನೆ ಬೀಜ, ಕೀಟನಾಶಕಗಳನ್ನು ವಿತರಿಸಿ ಸಚಿವರು ಮಾತನಾಡಿದರು.
ರೈತರರು ಸಮಗ್ರ ಬೇಸಾಯದ ಬಗ್ಗೆ ಗಮನ ಹರಿಸಬೇಕು, ಕಡ್ಡಾಯವಾಗಿ ಬೆಳೆ ವಿಮೆ ನೋಂದಣಿ ಮಾಡಿಸಿ ಅನಿರೀಕ್ಷಿತ ನಷ್ಟ ದಿಂದ ರಕ್ಷಣೆ ಪಡೆಯಬೇಕು. ಎಲ್ಲಾ ರೈತ ಸಂಪರ್ಕ ಕೇಂದ್ರಗಳ ಮೂಲಕ ಬಿತ್ತನೆ ಬೀಜಗಳು, ರಸಗೊಬ್ಬರ ಹಾಗೂ ರೈತರಿಗೆ ಸಿಗುವ ಸಬ್ಸಿಡಿ ಉಪಯೋಗವಾಗುವ ಇನ್ನಿತರ ಮಾಹಿತಿಯನ್ನು ನೀಡಲಾಗುತ್ತದೆ ಎಂದರು.
ತಾವು ಕೃಷಿ ಸಚಿವರಾದ ನಂತರ ರೈತರಿಗೆ ಎಲ್ಲಾ ಸೌಲಭ್ಯ ಒಂದೇ ಕಡೆ ಸಿಗವಂತೆ ಮಾಡಲು ರೈತ ಸಂಪರ್ಕ ಕೇಂದ್ರಗಳನ್ನು ಸಶಕ್ತಗೊಳಿಸಲಾಗುತ್ತಿದೆ. ರೈತರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಇಲಾಖೆಯಲ್ಲಿ 600 ಸಹಾಯಕ ಕೃಷಿ ಅಧಿಕಾರಿ ಹಾಗೂ ಕೃಷಿ ಅಧಿಕಾರಿಗಳ ನೇಮಕಾತಿಗೆ ಕ್ರಮವಹಿದಲಾಗಿದೆ ಎಂದರು.
ರೈತರು ಮಳೆ ಪ್ರಮಾಣವನ್ನು ಅರಿತು ಕಡಿಮೆ ಮತ್ತು ದೀರ್ಘ ಅವಧಿಯಲ್ಲಿ ಬೆಳಗಳ ಬಗ್ಗೆ ನಿರ್ಧಾರ ಮಾಡಬೇಕಿದೆ . ಲಾಭದಾಯಕ ಕೃಷಿ ಬಗ್ಗೆ ರೈತ ಸಂಪರ್ಕ ಕೇಂದ್ರಗಳು ಮಾರ್ಗದರ್ಶನ ನೀಡುವ ಕಾರ್ಯ ನಿರ್ವಹಿಸಲಿವೆ ಎಂದು ಕೃಷಿ ಸಚಿವರು ತಿಳಿಸಿದರು.
ಬೆಳ್ಳೂರು ಹೋಬಳಿಯ ರೈತರಿಗೆ ಉಪಯೋಗ ವಾಗುವಂತೆ ರೈತ ಸಂಪರ್ಕ ಕೇಂದ್ರ ಕಟ್ಟಡಕ್ಕೆ ಶಂಕು ಸ್ಥಾಪನೆ ನೆರವೇರಿದೆ. ಮುಂದಿನ ದಿನಗಳಲ್ಲಿ ನಾಗಮಂಗಲ ತಾಲೂಕಿನ ಎಲ್ಲಾ ರೈತರಿಗೆ ಹೆಚ್ಚಿನ ಪ್ರಮಾಣದಲ್ಲಿ ಕೃಷಿ ಪರಿಕರಗಳನ್ನು ಪೂರೈಸಲಾಗುವುದು ಎಂದು ಚಲುವರಾಯಸ್ವಾಮಿ ಹೇಳಿದರು.
ಕಾರ್ಯಕ್ರಮದಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ಅಶೋಕ್ ಹಾಗೂ ಉಪ ನಿರ್ದೇಶಕಿ ಮಮತ, ನಾಗಮಂಗಲ ತಹಶೀಲ್ದಾರ್ ನಯೀಂ ಉನ್ನಿಸಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.




