Sunday, May 5, 2024

ಪ್ರಾಯೋಗಿಕ ಆವೃತ್ತಿ

ಲೈಂಗಿಕ ಕಿರುಕುಳ ಆರೋಪಿ ಬ್ರಿಜ್ ಭೂಷಣ್ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

ಲೈಂಗಿಕ ಕಿರುಕುಳ ನೀಡಿರುವ ಆರೋಪ ಎದುರಿಸುತ್ತಿರುವ ಭಾರತ ಕುಸ್ತಿ ಫೆಡರೇಶನ್ ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಬಂಧಿಸುವಂತೆ ಆಗ್ರಹಿಸಿ ರೈತಸಂಘ, ಮಹಿಳಾ ಮುನ್ನಡೆ, ಕರ್ನಾಟಕ ಜನಶಕ್ತಿ ಸೇರಿದಂತೆ ವಿವಿಧ ಸಂಘಟನೆಗಳ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು.

ಮಂಡ್ಯ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಜಮಾಯಿಸಿದ ಪ್ರತಿಭಟನಾಕಾರರು ಕೇಂದ್ರ ಸರ್ಕಾರ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

nudikarnataka.com

ಲೈಂಗಿಕ ಕಿರುಕುಳದ ಆರೋಪ ಹೊತ್ತಿರುವವರ ಪರ ನಿಂತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರವು ಕುಸ್ತಿಪಟುಗಳ ನೆರವಿಗೆ ಧಾವಿಸದಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ಭಾರತ ಕುಸ್ತಿ ಫೆಡರೇಶನ್ ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಹಾಗೂ ಸಿಬ್ಬಂದಿಗಳು, ಅಪ್ರಾಪ್ತ ಹೆಣ್ಣು ಮಕ್ಕಳು ಸೇರಿದಂತೆ ಪ್ರಖ್ಯಾತ ಮಹಿಳಾ ಕುಸ್ತಿ ಪಟುಗಳಿಗೆ ಲೈಂಗಿಕ ಕಿರುಕುಳ ನೀಡಿರುವುದು ಅಘಾತಕಾರಿ ಬೆಳವಣಿಗೆಯಾಗಿದ್ದು, ಇದು ಇಡೀ ದೇಶವೇ ತಲೆತಗ್ಗಿಸುವಂಥ ಘಟನೆಯಾಗಿದೆ. ಕೂಡಲೇ ಆರೋಪಿಯನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದರು.

nudikarnataka.com
ಮದ್ದೂರು ಪಟ್ಟಣದಲ್ಲಿಯೂ ಬ್ರಿಜ್ ಭೂಷಣ್ ವಿರುದ್ದ ಪ್ರತಿಭಟನೆ ನಡೆಸಲಾಯಿತು. ಕರ್ನಾಟಕ ಜನಶಕ್ತಿ ಮುಖಂಡರಾದ ನಗರಕೆರೆ ಜಗದೀಶ್, ಚಂದ್ರು , ವೈದುನ ಸೇರಿದಂತೆ ರೈತ ಮುಖಂಡರು ಹಾಗೂ ಮಹಿಳಾ ಮುನ್ನಡೆಯ ಮುಖಂಡರು ತಾಲ್ಲೂಕು ಆಡಳಿತಕ್ಕೆ ಮನವಿ ಸಲ್ಲಿಸಿದರು.

ಹೆಣ್ಣು ಮಕ್ಕಳ ಪರ ನಿಲ್ಲಬೇಕಿರುವ ನರೇಂದ್ರ ಮೋದಿ ನೇತೃತ್ವದ ಒಕ್ಕೂಟ ಸರ್ಕಾರ ಆರೋಪಿ ಬಿಜೆಪಿ ಸಂಸದನನ್ನು ರಕ್ಷಿಸುತ್ತಿರುವುದು ಸರಿಯಲ್ಲ. ನೊಂದ ಮಹಿಳಾ ಕ್ರೀಡಾಪಟುಗಳಿಗೆ ರಕ್ಷಣೆ ನೀಡುವುದನ್ನು ಬಿಟ್ಟು ಪೊಲೀಸ್ ಪಡೆಗಳನ್ನು ಬಳಸಿ ಪ್ರತಿಭಟನೆಯನ್ನು ಹತ್ತಿಕ್ಕುವ ಕೆಲಸ ಮಾಡಿರುವುದು ಖಂಡನೀಯವಾಗಿದೆ. ಕೂಡಲೇ ಮಹಿಳಾ ಕುಸ್ತಿಪಟುಗಳಿಗೆ ರಕ್ಷಣೆ ನೀಡಬೇಕು. ಆರೋಪಿ ಸ್ಥಾನದಲ್ಲಿರುವ ಸಂಸದ ಬ್ರಿಜ್ ಭೂಷಣ್ ಸಿಂಗ್, ಸಂದೇಶ್ ಸಿಂಗ್ ವಿರುದ್ಧ ಕ್ರಮ ಕೈಗೊಂಡು ಬಂಧಿಸಿ, ರಾಜೀನಾಮೆ ಪಡೆಯಬೇಕು ಎಂದು ಒತ್ತಾಯಿಸಿದರು.

ಕಬ್ಬಿನ ದರಕ್ಕಾಗಿ 109 ದಿನಗಳ ಕಾಲ ಧರಣಿ ಮಾಡಿದ್ದೇವೆ. ಆಗಲೂ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದೇವೆ. ಅಮಿತ್ ಶಾ ಬರುತ್ತಿರುವ ಹಿನ್ನೆಲೆಯಲ್ಲಿ ನಮ್ಮ ಧರಣಿಗೆ ಹಾಕಲಾಗಿದ್ದ ಟೆಂಟ್ ಅನ್ನು ತೆರವುಗೊಳಿಸಲಾಗಿತ್ತು. ನಂತರ ಪ್ರಬಲ ವಿರೋಧ ವ್ಯಕ್ತಪಡಿಸಿದಾಗ ಮತ್ತೆ ಟೆಂಟ್ ಹಾಕಿ ಕೊಟ್ಟರು. ಪ್ರಧಾನಿ ಮೋದಿ ಬೇಟಿ ಬಚಾವೋ, ಬೇಟಿ ಪಡಾವೋ ಎನ್ನುತ್ತಾರೆ. ಆದರೆ ದೇಶದಲ್ಲಿ ಯಾವ ಬೇಟಿಯನ್ನು ರಕ್ಷಣೆ ಮಾಡುತ್ತಿದ್ದಾರೆ. ಬಿಜೆಪಿ ರೈತರು, ಹೆಣ್ಣು ಮಕ್ಕಳನ್ನು ರಕ್ಷಿಸದಿದ್ದರೆ ಸರ್ವನಾಶವಾಗಲಿದೆ ಎಂದು ಎಚ್ಚರಿಸಿದರು.

ರೈತಸಂಘದ ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ, ಮಹಿಳಾ ಮುನ್ನಡೆಯ ಪೂರ್ಣಿಮಾ, ಸಿಐಟಿಯುನ ಕಾರ್ಯದರ್ಶಿ ಸಿ.ಕುಮಾರಿ, ಜಾನಪದ ಗಾಯಕಿ ಮಂಜುಳಾ, ರೈತ ಮುಖಂಡ ಬೊಮ್ಮೇಗೌಡ ಸೇರಿದಂತೆ ನೂರಾರು ಕಾರ್ಯಕರ್ತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!