Wednesday, November 18, 2026

ಪ್ರಾಯೋಗಿಕ ಆವೃತ್ತಿ

ಪಾಂಡವಪುರ | ಬಿಜೆಪಿ ಸಂಸದ ಬ್ರಿಜ್ ಭೂಷಣ್ ವಿರುದ್ಧ ರೈತಸಂಘ ಪ್ರತಿಭಟನೆ

ಮಹಿಳಾ ಕ್ರೀಡಾಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಸಣ್ ವಿರುದ್ಧ ಪಾಂಡವಪುರದ ಪಟ್ಟಣದಲ್ಲಿ ರೈತಸಂಘದ ಮುಖಂಡರು, ಕಾರ್ಯಕರ್ತರು ಹಾಗೂ ಕುಸ್ತಿ ಪಟುಗಳು ಸೋಮವಾರ ಪ್ರತಿಭಟನೆ ನಡೆಸಿದರು

ಐದು ವೃತದ ಸರ್ಕಲ್ ನಲ್ಲಿ ನೂರು ರೈತಸಂಘದ ಮುಖಂಡರು ಸೇರಿದರು, ಮೊದಲು ರೈಲ್ವೆ ದುರಂತದಲ್ಲಿ ಮೃತಪಟ್ಟ ಜನರಿಗೆಗಾಗಿ ಸಂತಾಪ ಸೂಚಿಸಿದರು. ನಂತರ ಬ್ರಜ್ ಭೂಷಣ್ ವಿರುದ್ಧ ಘೋಷಣೆ ಕೂಗಿದರು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದರು

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ರೈತ ಸಂಘದ ಜಿಲ್ಲಾಧ್ಯಕ್ಣ ಎ.ಎಲ್.ಕೆಂಪೂಗೌಡ ದೆಹಲಿಯಲ್ಲಿ ಕಳೆದ ನಾಲ್ಕು ತಿಂಗಳಿಂದ ಮಹಿಳಾ ಕುಸ್ತಿ ಪಟುಗಳು ಪ್ರತಿಭಟನೆ ಮಾಡುತ್ತಿದ್ದರೂ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ ನ್ಯಾಯ ಒದಗಿಸುವ ಯಾವುದೇ ಭರವಸೆ ಕೊಟ್ಟಿಲ್ಲ. ಹೊರಟಗಾರರು ಸುಪ್ರೀಂ ಕೋರ್ಟ್ ಮೊರೆ ಹೋಗಿ ಬ್ರಿಜ್ ಭೂಷಣ್ ವಿರುದ್ಧ ದೂರು ದಾಖಲು ಮಾಡಿದ್ದಾರೆ. ಆದರೆ ಮೋದಿ ವಿಶ್ವ ಗುರು ಎಂದು ಹೇಳಿಕೊಳ್ಳುವ ನರೇಂದ್ರ ಮೋದಿ, ದೇಶದ ಹೆಣ್ಣು ಮಕ್ಕಳಿಗೆ ಗೌರವ ಕೊಡದೇ, ಅವರನ್ನು ಅತ್ಯಂತ ಹೀನಾಯವಾಗಿ ನಡೆಸಿಕೊಳ್ಳುತ್ತಿದ್ದಾರೆ. ಇದು ನಿಜವಾಗಲೂ ಹಿಂದೂ ಸಂಸ್ಕೃತಿಯೇ ಎಂದು ಪ್ರಶ್ನಿಸಿದರು.

ಕೇವಲ ಮನ್ ಕಿ ಬಾತ್ ಅಂತ ಮಾಡುವ ಪ್ರಧಾನಿಯವರಿಗೆ, ಮಾಧ್ಯಮಗಳ ಮುಂದೆ ಬಂದು ಮಾತನಾಡಲು ಹೇಗೆ ಹೆದರಿಕೆ ? ಬೇಟಿ ಬಚಾವೋ ಬೇಟಿ ಪಡವೋ ಕೇವಲ ಪ್ರಚಾರಕ್ಕಾಗಿ ಮಾಡಿದ ಯೋಜನೆಯಷ್ಟೆಯಾಗಿದೆ. ವಾಸ್ತವವಾಗಿ ಬಿಜೆಪಿ ಸರ್ಕಾರ ಮಹಿಳಾ ವಿರೋಧಿಯಾಗಿದೆ ಎಂದು ದೂರಿದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ