Thursday, November 19, 2026

ಪ್ರಾಯೋಗಿಕ ಆವೃತ್ತಿ

ತಮಿಳುನಾಡಿಗೆ ನೀರು| ನಾಲ್ವಡಿ ಕೃಷ್ಣರಾಜ ಒಡೆಯರ್ ಟ್ರಸ್ಟ್ ವತಿಯಿಂದ ಪ್ರತಿಭಟನೆ

ರಾಜ್ಯದ ಅಣೆಕಟ್ಟೆಗಳಿಂಧ ತಮಿಳುನಾಡಿಗೆ ನಿರಂತರವಾಗಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ನಾಲ್ವಡಿ ಕೃಷ್ಣರಾಜ ಒಡೆಯರ್ ಟ್ರಸ್ಟ್ ಸದಸ್ಯರು ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದರು.

ಮಂಡ್ಯ ನಗರದ ಕಾವೇರಿ ನೀರಾವರಿ ನಿಗಮ ಕಚೇರಿ ಎದುರಿನ ಕಾವೇರಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಪೂಜೆ ಸಲ್ಲಿಸಿ ಸುಪ್ರೀಂಕೋರ್ಟ್ ನಲ್ಲಿ ಕರ್ನಾಟಕದ ಪರ ತೀರ್ಪು ಬರಲಿ ಎಂದು ಪ್ರಾರ್ಥಿಸಿದರು.

ಬೈಕ್ ರಾಲಿ ಮೂಲಕ ಸಂಜಯ ವೃತ್ತದಲ್ಲಿ ತೆರಳಿ ಮಾನವ ಸರಪಳಿ ನಿರ್ಮಿಸಿ ಕೇಂದ್ರ ರಾಜ್ಯ ಸರ್ಕಾರದ ವಿರುದ್ಧ ಸರ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು ಅಲ್ಲಿಂದ ಹೊರಟ ಹೊರಟ ಸದಸ್ಯರು ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ಧರಣಿಯಲ್ಲಿ ಭಾಗಿಯಾದರು.

ಕಾವೇರಿ ಕೊಳ್ಳದ ಜಲಾಶಯಗಳಿಂದ ನೀರು ಬಿಡುತ್ತಿರುವ ಸರ್ಕಾರದ ಕುಡಿಯುವ ನೀರಿಗೆ ದೊಡ್ಡ ಕಂಟಕ ತರಲಿದೆ, ಕಾವೇರಿ ನದಿ ನೀರನ್ನು ತುರ್ತಾಗಿ ಉಳಿಸಬೇಕಾಗಿದೆ, ಕಾವೇರಿ ನದಿ ಪಾತ್ರದ ಜಿಲ್ಲೆಗಳ ಜನ- ಜಾನುವಾರುಗಳಿಗೆ ಕುಡಿಯಲು ನೀರಿಲ್ಲದ ಸಂದರ್ಭದಲ್ಲಿ ಸರ್ಕಾರ ತಮಿಳುನಾಡಿಗೆ ನೀರು ಹರಿಸುತ್ತಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಟ್ರಸ್ಟ್ ಅಧ್ಯಕ್ಷ ತಗ್ಗಹಳ್ಳಿ ವೆಂಕಟೇಶ್, ಎಂ. ಸಿ ಲಂಕೇಶ್ ಮಂಗಲ, ಮಹದೇವಸ್ವಾಮಿ, ಜವರೇಗೌಡ, ಮಂಜು, ಪ್ರಸನ್ನ, ಉಮಾಪತಿ, ಜಗದೀಶ್ ಶಿವಲಿಂಗೇಗೌಡ, ಜಗದೀಶ್, ಸಂತೆಕಸಲಗೆರೆ ಚರಣ, ಸಚಿನ್ ಸಿದ್ದರಾಜು ಅರಕೆರೆ ಮತ್ತಿತರರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ