Friday, November 20, 2026

ಪ್ರಾಯೋಗಿಕ ಆವೃತ್ತಿ

ತಮಿಳುನಾಡಿಗೆ ನೀರು ನಿಲ್ಲಿಸದ ಸರ್ಕಾರದ ವಿರುದ್ದ ಪ್ರತಿಭಟನೆ

ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ಹರಿಸುತ್ತಿರುವ ನೀರು ನಿಲ್ಲಿಸದ ಸರ್ಕಾರದ ವಿರುದ್ಧ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಮಂಡ್ಯದಲ್ಲಿ ರಸ್ತೆತಡೆ ನಡೆಸಿದವು.

ಮಂಡ್ಯನಗರದಲ್ಲಿ ನಿರಂತರ ಧರಣಿ ಸ್ಥಳದಲ್ಲಿ ವಿವಿಧ ಸಂಘಟನೆಗಳ ಜೊತೆಗೂಡಿ ಸಮಿತಿಯ ಮುಖಂಡರು, ಬೆಂಗಳೂರು -ಮೈಸೂರು ಹೆದ್ದಾರಿಗೆ ಇಳಿದು ವಾಹನ ಸಂಚಾರಕ್ಕೆ ಅಡ್ಡಿಪಡಿಸಿ, ಕೇಂದ್ರ – ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದರು.

ಕಾವೇರಿ ಕಣಿವೆ ಜಲಾಶಯಗಳಲ್ಲಿ ನೀರಿನ ಪ್ರಮಾಣ ಕುಸಿತಗೊಂಡಿದೆ, ಆದರೂ ಸಹ ತಮಿಳುನಾಡಿಗೆ ನಿರಂತರವಾಗಿ ನೀರು ಹರಿಸಲಾಗುತ್ತಿದೆ, ರೈತರ ಜೊತೆ ಕಣ್ಣ ಮುಚ್ಚಾಲೆ ಆಟ ಆಡುತ್ತಿರುವ ಸರಕಾರ ಮತ್ತೆ ಹೆಚ್ಚಿನ ನೀರನ್ನು ಕೆ ಆರ್ ಎಸ್ ಜಲಾಶಯದಿಂದ ಬಿಡುಗಡೆ ಮಾಡಿದೆ, ರೈತರಿಗೆ ದ್ರೋಹ ಮಾಡುತ್ತಿದೆ ಎಂದು ಕಿಡಿಕಾರಿದರು.

nudikarnataka.com

ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ,ಇಷ್ಟು ದಿನವಾದರೂ ಪ್ರಧಾನ ಮಂತ್ರಿ ಕನ್ನಡಿಗರ ಸಮಸ್ಯೆ ಬಗ್ಗೆ ಬಾಯಿ ತೆರೆದಿಲ್ಲ, ಒಕ್ಕೂಟ ವ್ಯವಸ್ಥೆಯಲ್ಲಿ ಎರಡು ರಾಜ್ಯಗಳ ನಡುವೆ ಉದ್ಭವಿಸಿರುವ ಸಮಸ್ಯೆ ಶಮನ ಮಾಡಲು ಮುಂದಾಗಿಲ್ಲ ಎಂದು ಹೇಳಿದರು.

ತಮಿಳುನಾಡಿಗೆ ಹರಿಸುತ್ತಿರುವ ನೀರು ಸ್ಥಗಿತ ಮಾಡಬೇಕು,ಕುಡಿಯುವ ನೀರು ಸಂರಕ್ಷಣೆ ಮಾಡಿಕೊಳ್ಳಬೇಕು, ಕಾವೇರಿ ಸಂಕಷ್ಟವನ್ನು ನಿವಾರಿಸಲು ರಾಜ್ಯ ಸರ್ಕಾರ ಮುಂದಾಗಬೇಕು,ಪ್ರಧಾನಮಂತ್ರಿಗಳು ಮಧ್ಯ ಪ್ರವೇಶಿಸಿ ಪರಿಹಾರ ಸೂತ್ರ ರೂಪಿಸಬೇಕು ಎಂದು ಒತ್ತಾಯಿಸಿದರು.

ಸಮಿತಿಯ ಸುನಂದಾ ಜಯರಾಂ, ಅಂಬುಜಮ್ಮ, ಕನ್ನಡಸೇನೆ ಮಂಜುನಾಥ್, ರೈತ ಸಂಘದ ಇಂಡುವಾಳು ಚಂದ್ರಶೇಖರ್ ನೇತೃತ್ವ ವಹಿಸಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ