Thursday, November 19, 2026

ಪ್ರಾಯೋಗಿಕ ಆವೃತ್ತಿ

ಕೃಷಿ ಕ್ಷೇತ್ರಕ್ಕೆ ಬಹುರಾಷ್ಟ್ರೀಯ ಕಂಪನಿಗಳ ಪ್ರವೇಶ ಖಂಡಿಸಿ ಪ್ರತಿಭಟನೆ : ಕೆಂಪೂಗೌಡ

ಬಹುರಾಷ್ಟ್ರೀಯ ಮತ್ತು ಕಾರ್ಪೋರೇಟ್ ಕಂಪನಿಗಳು ಕೃಷಿಯೆಡೆಗೆ ಮುಂದಾಗಿದ್ದು, ಕೃಷಿ ಮತ್ತು ರೈತ, ಕಾರ್ಮಿಕ, ದಲಿತ, ಮಹಿಳೆ, ವಿದ್ಯಾರ್ಥಿ, ಯುವಜನರ ಬದುಕಿಗೆ ಮಾರವಾಗಿದ್ದು,ಬಹುರಾಷ್ಟ್ರೀಯ ಮತ್ತು ಕಾರ್ಪೋರೇಟ್ ಕಂಪನಿಗಳನ್ನು ದೇಶದಿಂದ ಹೊರದೂಡಲು ಆಗ್ರಹಿಸಿ ಸಂಯುಕ್ತ ಹೋರಾಟ ಕರ್ನಾಟಕದ ವತಿಯಿಂದ ಆ.13ರಂದು ಬೆಳಿಗ್ಗೆ 11 ಗಂಟೆಗೆ ಮಂಡ್ಯ ನಗರದ  ಜೆ.ಸಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಪೂರ್ವದಲ್ಲಿ ಬ್ರಿಟಿಷರನ್ನು ದೇಶದಿಂದ ತೊಲಗಿಸಲು ಆಗಸ್ಟ್ 09 ರಂದು ಭಾರತ ಬಿಟ್ಟು ತೊಲಗಿ ಹೋರಾಟದಂತೆ ದೇಶಾದ್ಯಂತ ಬಹುರಾಷ್ಟ್ರೀಯ ಮತ್ತು ಕಾರ್ಪೋರೇಟ್ ಕಂಪನಿಗಳನ್ನು ದೇಶದಿಂದ ಹೊರಗೆ ದೂಡಲು ದೇಶಾದ್ಯಂತ ಬೃಹತ್ ಪ್ರತಿಭಟನೆ ನಡೆಸಲು ಸಂಯುಕ್ತ ಕಿಸಾನ್ ಮೋರ್ಚಾ ಹಾಗೂ ಕೇಂದ್ರೀಯ ಕಾರ್ಮಿಕ ಸಂಘಟನೆಗಳು ಜಂಟಿಯಾಗಿ ಕರೆ ನೀಡಿದೆ ಎಂದರು.

ಬಹುರಾಷ್ಟ್ರೀಯ ಮತ್ತು ಕಾರ್ಪೋರೇಟ್ ಕಂಪನಿಗಳು ದೇಶದ ಆರ್ಥಿಕತೆಯನ್ನು ಖಾಸಗೀಕರಣಗೊಳಿಸಿ ಎಲ್ಲಾ ಕೇತ್ರಗಳಲ್ಲಿಯೂ ಲಗ್ಗೆ ಇಡುವ ಮೂಲಕ ದೇಶದ ಸ್ವಾವಲಂಬಿ ಹಾಗೂ ಸಾರ್ವಭೌಮತ್ವಕ್ಕೆ ತೊಂದರೆಯುಂಟಾ ಗಲಿದ್ದು, ರೈತ, ಕಾರ್ಮಿಕ, ದಲಿತ, ಮಹಿಳೆ, ವಿದ್ಯಾರ್ಥಿ, ಯುವಜನ ಸಂಘಟನೆಗಳು ಒಟ್ಟಾಗಿ ಕೇಂದ್ರ ಸರ್ಕಾರದ ಕಾರ್ಪೋರೇಟ್ ನೀತಿಯ ವಿರುದ್ದ ಹೋರಾಟ ಮಾಡಲಾಗುವುದು ಎಂದರು.

ಕೇಂದ್ರ ಸರ್ಕಾರ ಅಮೆರಿಕಾದೊಂದಿಗೆ ಆರ್ಥಿಕ, ವಾಣಿಜ್ಯ, ಮುಕ್ತ ವ್ಯಾಪಾರ ಒಪ್ಪಂದ ಮಾಡಿಕೊಳ್ಳಬಾರದು, ವಿದೇಶಿ ನೇರ ಹೂಡಿಕೆಗೆ ಕಡಿವಾಣ ಹಾಕಬೇಕು, ಎನ್‌ಪಿಎಫ್‌ಎಎಂ ಹಾಗೂ ಎನ್‌ಸಿಪಿ ರದ್ದುಪಡಿಸಬೇಕು, ಸಾರ್ವಜನಿಕ ಖಾಸಗಿ ಸಹಭಾಗಿತ್ವ ಮೂಲಕ ಖಾಸಗಿ ಬಂಡವಾಳ ಉತ್ತೇಜಿಸುವ ನೀತಿ ಕೈಬಿಡಬೇಕು. ರೈತರ ಎಲ್ಲಾ ಬೆಳೆಗಳಿಗೂ ಬೆಂಬಲ ಬೆಲೆಯಲ್ಲಿ ಖರೀದಿ ಮಾಡಬೇಕು, ಸಮಗ್ರ ಸಾಲಮನ್ನ ರೀತಿ ಜಾರಿ, ಮೈಕ್ರೋಫೈನಾನ್ಸ್ ಕಿರುಕುಳ ತಡೆ ಸೇರಿದಂತೆ ವಿವಿದ ಬೇಡಿಕೆಗಳ ಈಡೇರಿಗೆ ಆಗ್ರಹಿಸಲಾಗುವುದು ಎಂದು ಹೇಳಿದರು.

ಗೋಷ್ಠಿಯಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಸಂಚಾಲಕ ಎನ್.ಎಲ್.ಭರತ್‌ರಾಜ್, ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಜಿಲ್ಲಾ ಕಾರ್ಯದರ್ಶಿ ಹನುಮೇಶ್, ಸಿಐಟಿಯು ಜಿಲ್ಲಾ ಮುಖಂಡ ಚಂದ್ರಶೇಖರ್, ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ಸಹ ಕಾರ್ಯದರ್ಶಿ ಪ್ರೇಮ, ಸಿ.ಬಿ.ಚಂದ್ರಶೇಖರ್, ರೈತಸಂಘದ ತಾಲ್ಲೂಕು ಅಧ್ಯಕ್ಷ ಅಣ್ಣಯ್ಯ ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ