Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಗ್ಯಾರಂಟಿ ಯೋಜನೆಗೆ ದಲಿತರ ಹಣ ಬಳಕೆ ಖಂಡಿಸಿ ಪ್ರತಿಭಟನೆ

ರಾಜ್ಯ ಕಾಂಗ್ರೆಸ್ ಸರ್ಕಾರ ದಲಿತರ ಅಭ್ಯುದಯಕ್ಕಾಗಿ ಮೀಸಲಿಟ್ಟ ಹಣದಲ್ಲಿ 14,262 ಕೋಟಿ ಹಣವನ್ನು ಗ್ಯಾರಂಟಿ ಯೋಜನೆಗೆ ಬಳಸಲು ಹೊರಟಿರುವ ಕ್ರಮವನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿ ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಮುಖಂಡ ಸೋಮನಹಳ್ಳಿ ಅಂದಾನಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಹಲವು ಕಾರ್ಯಕತರು, ಪರಿಶಿಷ್ಟ ಪಂಗಡದ ವಾಲ್ಮೀಕಿ ನಿಗಮದಲ್ಲಿ ಸುಮಾರು 187 ಕೋಟಿ ರೂ. ಅವ್ಯವಹಾರದಲ್ಲಿ ಭಾಗಿಯಾಗಿರುವವರನ್ನು ಶಿಕ್ಷೆಗೆ ಗುರಿಪಡಿಸಬೇಕು. ಈ ಪ್ರಕರಣದಲ್ಲಿ ಶಾಮೀಲಾಗಿರುವ ಶಾಸಕರು ಹಾಗೂ ಮಂತ್ರಿಗಳನ್ನು ಶಾಸಕತ್ವದಿಂದ ವಜಾಗೊಳಿಸಿ ಮತ್ತೆ ಚುನಾವಣೆಗೆ ಸ್ಪರ್ಧಿಸದಂತೆ ಕಾನೂನು ರೂಪಿಸಬೇಕೆಂದು ಆಗ್ರಹಿಸಿದರು.

ರಾಜ್ಯಪಾಲರು ಮಧ್ಯ ಪ್ರವೇಶಿಸಿ ಗ್ಯಾರಂಟಿ ಯೋಜನೆಗಳಿಗೆ ಪ್ರಜಾ. ಪ್ರವರ್ಗಗಳ ಅಭ್ಯುದಯಕ್ಕೆ ಮೀಸಲಿಟ್ಟಿರುವ ಅನುದಾನವನ್ನು ಬಳಕೆ ಮಾಡಿ ದಲಿತರ ಹಣವನ್ನು ಲೂಟಿ ಹಾಗು SCSP/TSP ಕಾಯ್ದೆಯನ್ನು ಉಲ್ಲಂಘನೆ ಮಾಡಿರುವ ಮುಖ್ಯಮಂತ್ರಿಗಳ  ರಾಜೀನಾಮೆ ಪಡೆಯಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಶಿವು, ಜಿ.ಎಂ.ಸತ್ಯ, ಬಸವರಾಜು, ಮೂರ್ತಿ ಹಾಗೂ ಅಂಕಯ್ಯ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!