Wednesday, September 18, 2024

ಪ್ರಾಯೋಗಿಕ ಆವೃತ್ತಿ

ಹದೆಗೆಟ್ಟ ರಸ್ತೆಗಳು : ಜನಪ್ರತಿನಿಧಿಗಳ ನಿರ್ಲಕ್ಷ್ಯ ಖಂಡಿಸಿ ಪ್ರತಿಭಟನೆ

ಮಳವಳ್ಳಿ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಹದೆಗೆಟ್ಟಿರುವ ರಸ್ತೆಗಳನ್ನು ದುರಸ್ಥಿಗೊಳಿಸಲು ಸರ್ಕಾರ, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯವಹಿಸಿರುವುದನ್ನು ಖಂಡಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಕಾರ್ಯಕರ್ತರು ಪಟ್ಟಣದ ಲೋಕೋಪಯೋಗಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಮಳವಳ್ಳಿ ಪಟ್ಟಣದ ಕುಳ್ಳೇಗೌಡ ಬಿಲ್ದಿಂಗ್ ನಲ್ಲಿರುವ ಕೂಲಿಕಾರರ ಕಚೇರಿಯಿಂದ ಪ್ರತಿಭಟನೆ ಮೆರವಣಿಗೆ ಹೊರಟ ಪ್ರತಿಭಟನಾಕಾರರು ಕೇಂದ್ರ ಮತ್ತು ರಾಜ್ಯಸರ್ಕಾರ, ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ವಿರುದ್ದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿ ಲೋಕೋಪಯೋಗಿ ಇಲಾಖೆ ಮುಂದೆ ಪ್ರತಿಭಟನೆ ನಡೆಸಿದರು.

ಕರ್ನಾಟಕ ಪ್ರಾಂತ ರೈತಸಂಘದ ರಾಜ್ಯಾಧ್ಯಕ್ಷ ಪುಟ್ಟುಮಾಧು ಮಾತನಾಡಿ, ಕೊಟ್ಯಾಂತ ರೂ. ಖರ್ಚು ಆಡಳಿತ ನಡೆಸುವ ಸರ್ಕಾರಗಳು ಕೇವಲ ಹಳ್ಳಿ ರಸ್ತೆಗಳನ್ನು ಸರಿಮಾಡಿಸಲು ಸಾಧ್ಯವಾಗದಿರುವುದು ಖಂಡನೀಯ, ಕೃಷಿ ಕೂಲಿಕಾರರು ವಾಸಮಾಡುತ್ತಿರುವ ಪ್ರದೇಶಗಳಲ್ಲಿ ರಸ್ತೆ ಮತ್ತು ಚರಂಡಿಗಳು ಹಾಳಾಗಿದ್ದು, ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ನಿರ್ಲಕ್ಷವೇ ರಸ್ತೆಅದ್ವಾನಕ್ಕೆ ಕಾರಣವಾಗಿದೆ ಎಂದು ಕಿಡಿಕಾರಿದರು. ಪ್ರಾಂತ ರೈತಸಂಘದ ತಾಲ್ಲೂಕು ಅಧ್ಯಕ್ಷ ಶಿವಮಲ್ಲಯ್ಯ ಮಾತನಾಡಿದರು.

ಪ್ರತಿಭಟನೆಯಲ್ಲಿ ಪ್ರಾಂತ ಕೃಷಿಕೂಲಿಕಾರರ ಸಂಘದ ಮುಖಂಡರಾದ ಹನುಮೇಗೌಡ, ರಾಮಯ್ಯ, ಆನಂದ್, ಕೃಷ್ಣೇಗೌಡ, ಕಪನಿಗೌಡ ಮಲ್ಲೇಶ್, ಮಹದೇವು, ಮಾರಯ್ಯ, ನಾಗರತ್ನ, ಸರೋಜಮ್ಮ, ಮಾದಹಳ್ಳಿ ಶಿವಕುಮಾರ್ ಸೇರಿದಂತೆ ನೂರಾರು ಮಹಿಳೆಯರು ಇದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!