Friday, September 20, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ವಿವಿಧ ಬೇಡಿಕೆ ಮುಂದಿಟ್ಟು ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಂಡ್ಯ ಜಿಲ್ಲಾ ಪಂಚಾಯಿತಿ ಎದುರು ಆಶಾ ಕಾರ್ಯಕರ್ತೆಯರು ಬುಧವಾರ ಪ್ರತಿಭಟನೆ ನಡೆಸಿದರು.

ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಮಂಡ್ಯನಗರದ ಸಿಲ್ವರ್ ಜ್ಯೂಬಿಲಿ ಪಾರ್ಕ್ ನಿಂದ ಮೆರವಣಿಗೆ ಹೊರಟ ಆಶಾ ಕಾರ್ಯಕರ್ತೆಯರು ಜಿಲ್ಲಾ ಪಂಚಾಯಿತಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.

ಕೇಂದ್ರದ ಪ್ರೋತ್ಸಾಹಧನ ಆರ್ ಸಿಎಚ್ ಪೋರ್ಟಲ್ ಗೆ ಲಿಂಕ್ ಮಾಡಿರುವುದರಿಂದ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಮಸ್ಯೆ ಪರಿಹಾರಿಸಬೇಕು. ಆಶಾ ಕಾರ್ಯಕರ್ತೆಯರ ಸೇವೆಗೆ ನಿಗದಿಯಾಗಿರುವ ಕೇಂದ್ರ ಸರ್ಕಾರದ ಪ್ರೋತ್ಸಾಹ ಧನ ದೊರಕದೆ ಹಲವು ಚಟುವಟಿಕೆ ಸಾಧ್ಯವಾಗುತ್ತಿಲ್ಲ, ಇದರಿಂದ ಸಂಪೂರ್ಣ ವೇತನ ಸಿಗದೆ ನಷ್ಟ ಅನುಭವಿಸುವಂತಾಗಿದೆ. ಸಕಾಲದಲ್ಲಿ ಪ್ರೋತ್ಸಾಹ ಧನ ದೊರಕುವ ವ್ಯವಸ್ಥೆ ಮಾಡಬೇಕು, ರಾಜ್ಯ ಸರ್ಕಾರ ನಿಶ್ಚಿತ ಗೌರವಧನ ಹಾಗೂ ಆಶಾ ನಿಧಿ ಪ್ರೋತ್ಸಾಹ ಧನ ಒಟ್ಟುಗೂಡಿಸಿ ಮಾಸಿಕ 15000 ರೂ ಗೌರವಧನ ನೀಡಬೇಕು, ಕಳೆದ ಮೂರು ವರ್ಷಗಳಲ್ಲಿ ಪಾವತಿ ಯಾಗದಿರುವ ಎಎನ್‌ಸಿ, ಪಿಎನ್ ಸಿ, ಎಂಆರ್1, ಎಂ ಆರ್ 2 ಪ್ರೋತ್ಸಾಹ ಧನವನ್ನು ಲೆಕ್ಕಾಚಾರ ಮಾಡಿ ಪಾವತಿ ಮಾಡಬೇಕು ಎಂದು ಒತ್ತಾಯಿಸಿದರು.

ಕೋವಿಡ್ -19 ಸಂದರ್ಭದಲ್ಲಿನ ವಿಶೇಷ ಪ್ರೋತ್ಸಾಹ ಧನ ಹಾಗೂ ಎಂಟಿಎಸ್ ಹಣ ಹಲವರಿಗೆ ನೀಡಲಾಗಿಲ್ಲ,ಈ ಕೂಡಲೇ ಹಣ ಪಾವತಿಗೆ ಸೂಕ್ತ ಕ್ರಮ ಕೈಗೊಳ್ಳಬೇಕು, ಗೌರವಧನ ಕಡಿತ ಮಾಡದೆ ನಿಗದಿತ ಗೌರವಧನ ಪಾವತಿಸಬೇಕು, ತಾಂತ್ರಿಕ ದೋಷದಿಂದ ವೇತನ ದೊರಕದ ಕಾರ್ಯಕರ್ತೆಯರಿಗೆ ವೇತನ ಪಾವತಿಗೆ ಕ್ರಮ ವಹಿಸಬೇಕು, ಗೌರವಧನ ಇಲ್ಲದೆ ಪರೀಕ್ಷೆ ಮತ್ತು ಚುನಾವಣೆ ಕರ್ತವ್ಯಕ್ಕೆ ನಿಯೋಜಿಸಬಾರದು, ಗ್ರಾಮೀಣ ಪ್ರದೇಶದಲ್ಲಿ ದೂರದ ಪ್ರದೇಶಕ್ಕೆ ಕೆಲಸಕ್ಕೆ ನಿಯೋಜಿಸಬಾರದು, 2500 ಜನಸಂಖ್ಯೆಗೆ ಒಬ್ಬ ಕಾರ್ಯಕರ್ತೆಯ ಕೆಲಸ ಸೀಮಿತಗೊಳಿಸಬೇಕು, ಪ್ರಾರ್ಥಮಿಕ ಆರೋಗ್ಯ ಕೇಂದ್ರ ಹಂತದಲ್ಲಿ ಸ್ಫೂಟಮ್ ತರವಂತೆ ಒತ್ತಡ ಹಾಕದಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಪ್ರತಿ ಮೂರು ತಿಂಗಳಿಗೊಮ್ಮೆ ಆಶಾ ಕಾರ್ಯಕರ್ತೆಯರ ಸಂಘದ ಮುಖಂಡರ ಸಭೆ ಕರೆದು ಸಮಸ್ಯೆಗಳ ಬಗ್ಗೆ ಚರ್ಚಿಸಬೇಕು, ಅನಗತ್ಯವಾಗಿ ಸರ್ವೆ ಹಾಗೂ ಕಾರ್ಯಕ್ರಮಗಳಿಗೆ ಕಾರ್ಯಕರ್ತೆಯರನ್ನು ತೊಡಗಿಸಿ ಕೊಳ್ಳುವುದನ್ನು ಕೈಬಿಡಬೇಕು, ಪ್ರತಿ ತಿಂಗಳ ಗೌರವಧನ ಮತ್ತು ಪ್ರೋತ್ಸಾಹ ಧನ ಜಮೆ ವೇಳೆ ಯಾವ ತಿಂಗಳಿನದ್ದು ಎಂಬುದನ್ನ ನಮೂದಿಸಬೇಕು, ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರತಿವಾರ ಕಾರ್ಯಕರ್ತೆಯರ ಸಭೆಯಿಂದ ತೊಂದರೆಯಾಗುತ್ತಿರುವುದರಿಂದ ಸಭೆ ಕರೆಯಬಾರದು ಎಂದು ಆಗ್ರಹಿಸಿದರು.

ಆಶಾ ಕಾರ್ಯಕರ್ತೆಯರ ಸಂಘ ಅಧ್ಯಕ್ಷೆ ಎಂ.ಬಿ ಪುಷ್ಪಾವತಿ, ಕಾರ್ಯದರ್ಶಿ ಜ್ಯೋತಿ, ಸಂಧ್ಯಾ ನೇತೃತ್ವ ವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!