ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಕಾರ್ಯಕರ್ತರು ಮಂಡ್ಯದಲ್ಲಿ ಇಂದು ಪ್ರತಿಭಟನೆ ನಡೆಸಿದರು.
ಪ್ರಧಾನಿ ನರೇಂದ್ರ ಮೋದಿ ಬಗ್ಗೆ ರಾಹುಲ್ ಗಾಂಧಿ ಟೀಕೆ ಮಾಡಿರುವುದನ್ನು ಖಂಡಿಸಿ ಮಂಡ್ಯನಗರದ ಸಂಜಯ ವೃತ್ತದಲ್ಲಿ ಮಂಡ್ಯ ಬಿಜೆಪಿ ಲೋಕಸಭಾ ಉಸ್ತುವಾರಿ ಸುನೀಲ್ ಸುಬ್ರಹ್ಮಣ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ಕಾಂಗ್ರೆಸ್ ಹಾಗೂ ರಾಹುಲ್ ಗಾಂಧಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಪಕ್ಷದ ನಾಯಕರು ಜಾತಿ ಹೆಸರಿನಲ್ಲಿ ದೇಶ ಹೊಡೆಯುವುದು ತಪ್ಪು, ರಾಹುಲ್ ಗಾಂಧಿಯವರು ಹಳೆಯ ಚಾಳಿ ಮುಂದುವರಿಸಿದ್ದಾರೆ. ಈ ದೇಶವನ್ನು ಹೊಡೆಯುವ ಕೆಲಸ ಮಾಡ್ತಿದ್ದಾರೆ, ತಕ್ಷಣವೇ ರಾಹುಲ್ ಗಾಂಧಿ ಕ್ಷಮೆಯಾಚನೆ ಮಾಡಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್, ಮುಖಂಡರಾದ ಕೆ.ಎಸ್.ನಂಜುಂಡೇಗೌಡ, ಸಿಪಿ ಉಮೇಶ್, ಮುನಿರಾಜು, ಟಿ.ಶ್ರೀಧರ್, ಎಸ್.ಪಿ.ಸ್ವಾಮಿ ಸೇರಿದಂತೆ ಹಲವರು ಭಾಗವಹಿಸಿದ್ದರು.




