Friday, May 3, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ನೇಹಾ ಹಂತಕನಿಗೆ ಮರಣ ದಂಡನೆ ವಿಧಿಸಲು ಆಗ್ರಹ

ವಿದ್ಯಾರ್ಥಿನಿ ನೇಹಾ ಹಿರೇಮಠ್ ಕೊಲೆ ಮಾಡಿದ ಹಂತಕನಿಗೆ ಮರಣ ದಂಡನೆ ಶಿಕ್ಷೆಯಾಗುವಂತೆ ಕ್ರಮ ಕೈಗೊಳ್ಳಬೇಕು, ರಾಜ್ಯದಲ್ಲಿ ಹೆಚ್ಚುತ್ತಿರುವ ಮಹಿಳೆಯರ ಮೇಲಿನ ದೌರ್ಜನ್ಯವನ್ನು ತಡೆಗಟ್ಟಬೇಕೆಂದು ಆಗ್ರಹಿಸಿ ಮಂಡ್ಯದಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಮಂಡ್ಯನಗರದ ಸಂಜಯ ವೃತ್ತದಿಂದ ಮೆರವಣಿಗೆ ಹೊರಟ ಪಕ್ಷದ ಕಾರ್ಯಕರ್ತರು, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗುತ್ತಾ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ರಾಜ್ಯಪಾಲರಿಗೆ ಮನವಿ ಪತ್ರ ರವಾನಿಸಿದರು.

ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಿಸಿದೆ, ಲವ್ ಜಿಹಾದ್ ಗೆ ಕಡಿವಾಣ ಹಾಕದ ಸರ್ಕಾರ ಎಂದು ಭಿತ್ತಿ ಫಲಕ ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದರು. ಕಾರ್ಪೊರೇಟರ್ ಮಗಳಿಗೆ ಸುರಕ್ಷತೆ ಇಲ್ಲವಾಗಿದ್ದು ಜನಸಾಮಾನ್ಯರ ರಕ್ಷಣೆ ಹೇಗೆ ಎಂಬುದು ಪ್ರಶ್ನೆಯಾಗಿದೆ. ಕಳೆದ ಮೂರು ದಿನದಿಂದ ರಾಜ್ಯದಲ್ಲಿ 8 ಹತ್ಯೆಗಳು ನಡೆದಿದ್ದರೂ ರಾಜ್ಯ ಸರ್ಕಾರ ಕಣ್ಮುಚ್ಚಿ ಕುಳಿತಿದೆ ಎಂದು ದೂರಿದರು.

ಪ್ರತಿಭಟನೆಯಲ್ಲಿ ಮಂಡ್ಯ ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ.ಇಂದ್ರೇಶ್ ಕುಮಾರ್, ಅಶೋಕ್ ಜಯರಾಮ್, ವಿದ್ಯಾ ನಾಗೇಂದ್ರ, ಚಂದಗಾಲು ಶಿವಣ್ಣ, ಅರವಿಂದ್, ಸಿ ಟಿ ಮಂಜುನಾಥ್, ನಾಗಾನಂದ ಮತ್ತಿರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!