Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಕಾವೇರಿ ಹೋರಾಟ ಬೆಂಬಲಿಸಿ ಪತ್ರಕರ್ತರ ಪ್ರತಿಭಟನೆ

ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ನಿರಂತರ ಅನ್ಯಾಯವಾಗುತ್ತಿರುವುದನ್ನು ಖಂಡಿಸಿ ಮಂಡ್ಯನಗರದಲ್ಲಿ ಮಂಡ್ಯ ಜಿಲ್ಲಾ ಕಾರ್ಯನಿರತ ಪ್ರರ್ತಕರ್ತರ ಸಂಘದ ನೇತೃತ್ವದಲ್ಲಿ ಜಿಲ್ಲೆಯ ಪರ್ತಕರ್ತರು ಪ್ರತಿಭಟನೆ ನಡೆಸಿದರು.

ಮಂಡ್ಯ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಪರ್ತಕರ್ತರು , ಕೇಂದ್ರ – ರಾಜ್ಯ ಸರ್ಕಾರ ಹಾಗೂ ಕಾವೇರಿ ನದಿ ನೀರು ಪ್ರಾಧಿಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಜಿಲ್ಲಾ ರೈತ ಹಿತರಕ್ಷಣಾ ಸಮಿತಿಯ ಧರಣಿ ಸ್ಥಳಕ್ಕೆ ತೆರಳಿ ಧರಣಿಯಲ್ಲಿ ಭಾಗಿಯಾದರು.

ಕಾವೇರಿ ವಿಚಾರದಲ್ಲಿ ಹಲವು ದಶಕಗಳಿಂದ ಕರ್ನಾಟಕಕ್ಕೆ ಅನ್ಯಾಯ ಆಗುತ್ತಲೇ ಬಂದಿದೆ, ತಮಿಳುನಾಡಿಗೆ ಪೂರಕ ತೀರ್ಪು ಬರುತ್ತಿದ್ದು ಕನ್ನಡಿಗರಿಗೆ ಮಾರಕವಾಗುತ್ತಿದೆ,ನೀರು ಹಂಚಿಕೆ ಮಾಡಿರುವ ತೀರ್ಪುಗಳು ಸಂಕಷ್ಟಕಾಲದಲ್ಲಿ ಅನುಸರಿಸಬೇಕಾದ ಸೂತ್ರದ ಬಗ್ಗೆ ಮೌನ ವಹಿಸಿವೆ, ಕೇಂದ್ರ ಸರ್ಕಾರ ಸಹ ಸಂಕಷ್ಟ ಸೂತ್ರ ರಚಿಸಲು ಮುಂದಾಗಿಲ್ಲ ಎಂದು ಹೇಳಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಮತ್ತಿಕೆರೆ ಜಯರಾಮ್ ಮಾತನಾಡಿ, ಜಲಾಶಯಗಳಿಂದ ನಾಲೆಗಳಿಗೆ ನೀರು ಹರಿಸಬೇಕಾದರೆ ನೀರಾವರಿ ಸಲಹಾ ಸಮಿತಿ ಸಭೆ ತೀರ್ಮಾನ ಮಾಡುತ್ತದೆ, ಆದರೆ ರಾಜ್ಯ ಸರ್ಕಾರ ತಮಿಳುನಾಡಿಗೆ ಏಕಾಏಕಿ ನೀರು ಬಿಡುತ್ತದೆ, ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಲು ಮುಂದಾಗಬೇಕು,ಸಂಕಷ್ಟ ಸೂತ್ರ ರೂಪಿಸಬೇಕು ಎಂದು ಒತ್ತಾಯಿಸಿದರು.

ಮಂಡ್ಯ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ ಸಿ ಮಂಜುನಾಥ್ ಮಾತನಾಡಿ, ಕಾವೇರಿ ವಿಚಾರದಲ್ಲಿ ರಾಜ್ಯವನ್ನಾಳಿರುವ ಮೂರು ರಾಜಕೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳು ಅನ್ಯಾಯ ಮಾಡಿವೆ, ನಮ್ಮ ನೀರು ನಮ್ಮ ಹಕ್ಕು ಎಂದವರು ಕದ್ದು ಮುಚ್ಚಿ ನೀರು ಬಿಟ್ಟಿದ್ದಾರೆ, ತಮಿಳುನಾಡಿನಲ್ಲಿ ಒಬ್ಬನೇ ಒಬ್ಬ ಬಿಜೆಪಿ ಸಂಸದ ಚುನಾಯಿತನಾಗಿಲ್ಲ, ಆದರೆ ರಾಜ್ಯದಲ್ಲಿ ಬಿಜೆಪಿ 26 ಸಂಸದರನ್ನು ನೀಡಲಾಗಿದೆ, ಅವರು ಕಾವೇರಿ ಹೋರಾಟದಲ್ಲಿ ದ್ವನಿ ಎತ್ತುತ್ತಿಲ್ಲ ಎಂದು ದೂರಿದರು.

ಕಾವೇರಿ ವಿಚಾರದಲ್ಲಿ ಆಗುತ್ತಿರುವ ಅನ್ಯಾಯ ತಡೆಯಲು ಮುಂಬರುವ ಲೋಕಸಭೆ ಚುನಾವಣೆಯನ್ನು ಬಹಿಷ್ಕರಿಸಲು ಮುಂದಾಗಬೇಕು,ಕಾವೇರಿ ಕಣಿವೆ ಜಿಲ್ಲೆಗಳಲ್ಲಿ ಮತದಾನ ಬಹಿಷ್ಕರಿಸಲು ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಕರೆ ನೀಡಬೇಕು ಎಂದು ಮನವಿ ಮಾಡಿದರು.

ಹಿರಿಯ ಪತ್ರಕರ್ತರಾದ ಪಿ.ಜೆ.ಚೈತನ್ಯಕುಮಾರ್, ಕೆ.ಎನ್.ರವಿ, ಲಿಂಗರಾಜು, ಶಿವನಂಜಯ್ಯ ಮತ್ತಿತರರು ಮಾತನಾಡಿದರು.

ಸಂಘದ ರಾಜ್ಯ ಕಾರ್ಯದರ್ಶಿ ಸೋಮಶೇಖರ್ ಕೆರಗೋಡು, ಉಪಾಧ್ಯಕ್ಷರಾದ ಬಿ.ಪಿ.ಪ್ರಕಾಶ್, ಪ್ರಧಾನ ಕಾರ್ಯದರ್ಶಿ ನವೀನ್ ಕುಮಾರ್, ಕಾರ್ಯದರ್ಶಿಗಳಾದ ಮಂಜುಳ ಕಿರುಗಾವಲು, ಆನಂದ, ಖಜಾಂಚಿ ನಂಜುಂಡಸ್ವಾಮಿ, ನಿರ್ದೇಶಕ ಎನ್.ನಾಗೇಶ್, ರಾಘವೇಂದ್ರ, ನಂದನ್, ರಾಜ್ಯ ಸಮಿತಿ ಸದಸ್ಯ ಮಂಜುನಾಥ್, ಪತ್ರಕರ್ತರಾದ ಕೃಷ್ಣ ಸ್ವರ್ಣಸಂದ್ರ, ನವೀನ್ ಚಿಕ್ಕಮಂಡ್ಯ, ಎಂ.ಎಸ್.ಮೂರ್ತಿ, ಶಂಭು ಕಬ್ಬನಹಳ್ಳಿ ಬಿ.ಟಿ.ಮೋಹನ್ ಕುಮಾರ್, ಜಗದೀಶ್, ರವಿ ಮತ್ತಿತರರು ಭಾಗವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!