Tuesday, September 17, 2024

ಪ್ರಾಯೋಗಿಕ ಆವೃತ್ತಿ

ಕನ್ನಡಿಗರಿಗೆ ಉದ್ಯೋಗ ಮಸೂದೆ ಮಂಡಿಸಲು ಆಗ್ರಹ: ರಸ್ತೆಯಲ್ಲಿ ಮಲಗಿ ಪ್ರತಿಭಟನೆ

ಕರ್ನಾಟಕ ರಾಜ್ಯದ ಎಲ್ಲಾ ಖಾಸಗಿ ಕೈಗಾರಿಕೆಗಳಲ್ಲಿ ‘ಸಿ’ ಮತ್ತು ‘ಡಿ’ ದರ್ಜೆಯ ಹುದ್ದೆಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ಕಡ್ಡಾಯಗೊಳಿಸುವ ವಿಧೇಯಕಕ್ಕೆ ನನ್ನೆ ನಡೆದ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿತ್ತು. ಆದರೆ ಖಾಸಗಿ ಉದ್ಯಮಿಗಳಿಂದ ಭಾರಿ ವಿರೋಧ ವ್ಯಕ್ತಪಡಿಸುತ್ತಿದ್ದಾರೆಂದು ಕಾರಣಕ್ಕೆ ರಾಜ್ಯ ಸರ್ಕಾರ ಹಿಂದೇಟು ಹಾಕತ್ತಿರುವುದು ಸರಿಯಲ್ಲ ಪ್ರಸಕ್ತ ಅಧಿವೇಶನದಲ್ಲೇ ಕನ್ನಡಿಗರಿಗೆ ಉದ್ಯೋಗ ಮಸೂದೆ ಮಂಡಿಸುವಂತೆ ಆಗ್ರಹಿಸಿ ಮಂಡ್ಯದಲ್ಲಿ ಕನ್ನಡ ಸೇನೆ ಕಾರ್ಯಕರ್ತರು ರಸ್ತೆಯಲ್ಲಿ ಮಲಗಿ ಪ್ರತಿಭಟನೆ ನಡೆಸಿದರು.

ಮಂಡ್ಯನಗರದ ಸಂಜಯ ವೃತ್ತದಲ್ಲಿ ಸೇನೆಯ ಜಿಲ್ಲಾಧ್ಯಕ್ಷ ಹೆಚ್.ಸಿ.ಮಂಜುನಾಥ್ ನೇತೃತ್ವದಲ್ಲಿ ರಸ್ತೆಯಲ್ಲಿ ಮಲಗಿ ಪ್ರತಿಭಟಿಸುವ ಮೂಲಕ ಸರ್ಕಾರದ ವಿರುದ್ದ ಆಕ್ರೋಶ ಹೊರ ಹಾಕಿದರು.

ರಾಜ್ಯದ ಮುಖ್ಯಮಂತ್ರಿಗಳು ಸಚಿವ ಸಂಪುಟದಲ್ಲಿ ತೀರ್ಮಾನಿಸಿದ ಕಾಯ್ದೆಯನ್ನು ಈ ಸದನದಲ್ಲೇ ಮಂಡಿಸಿ ವಿರೋಧ ಮಾಡುತ್ತಿರುವ ಕಾರ್ಪೋರೇಟ್ ವಲಯದ ಮುಖಂಡರಿಗೆ ತಕ್ಕ ಪಾಠ ಕಲಿಸಬೇಕು. ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಒದಗಿಸುವ ವಿಧೇಯಕ ವಿಧಾನಮಂಡಲದ ಉಭಯದ ಅಧಿವೇಶನಗಳಲ್ಲಿ ಅಂಗೀಕಾರವಾಗಬೇಕಾಗಿದೆ. ಮೂರು ಪಕ್ಷದ ಜನಪ್ರತಿನಿಧಿಗಳು ಸರ್ವಾನುಮತದಿಂದ ಈ ವಿಧೇಯಕವನ್ನು ಅನುಮೋದಿಸಿ ಅಂಗೀಕಾರ ನೀಡಬೇಕೆಂದು ಆಗ್ರಹಿಸಿದರು.

ಕನ್ನಡಿಗರ ಬಹುದಿನದ ಡಾ. ಸರೋಜಿನಿ ಮಹಿಷಿ ವರದಿಗಾಗಿ ರಾಜ್ಯದಾದ್ಯಂತ ಕನ್ನಡ ಸೇವೆ ಹೋರಾಟ ಮಾಡಿಕೊಂಡು ಬಂದಿದೆ. ಈ ಬೆಳವಣಿಗೆಗಳ ಮಧ್ಯ ಕೆಲ ಕಾಪೋರೇಟ್ ವಲಯದ ಪ್ರಚಾರ ಪ್ರಿಯರು ಉದ್ಯಮಿಗಳು ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡುವ ವಿಧೇಯಕಕ್ಕೆ ವಿರೋಧ ಮಾಡುತ್ತಿರುವುದು ಸರಿಯಲ್ಲ. ಕರ್ನಾಟಕ ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆ ಎಷ್ಟು ತಾಂಡವವಾಡುತ್ತಿದೆ. ಇದನ್ನು ಮನಗಂಡು ಮುಖ್ಯಮಂತ್ರಿಗಳು ಮನಗೊಂಡು, ತಡಾ. ಸರೋಜಿನಿ ಮಹಿಷಿ ವರದಿ ಜಾರಿ ಮಾಡಲು ಮುಂದಾಗಿರುವುದು ಸ್ವಾಗತಾರ್ಹ ಅದನ್ನು ಮುಂದುರಿಯಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಮಹಾಂತಪ್ಪ, ಪ್ರಸನ್ನ, ಅಶೋಕ್, ರಂಜಿತ್, ಆತ್ಮಾನಂದ, ಮಧಕುಮಾರ್ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!