ಎಸ್‌ಸಿ/ಎಸ್‌ಟಿ ಕಲ್ಯಾಣ ಕಾರ್ಯಕ್ರಮಗಳ ಅನುದಾನವನ್ನು ಬೇರೆ ಇಲಾಖೆಗಳಿಗೆ ವರ್ಗಾಯಿಸಿರುವುದನ್ನು ಖಂಡಿಸಿ, ಅಖಿಲ ಭಾರತ ಡಾ. ಬಿ.ಆರ್.ಅಂಬೇಡ್ಕರ್ ಸೈನ್ಯದ ಕಾರ್ಯಕರ್ತರು ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಮಳವಳ್ಳಿ ಪಟ್ಟಣದ ಸಾರಿಗೆ ಬಸ್ ನಿಲ್ದಾಣದಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಅಂಬೇಡ್ಕರ್ ಸೈನ್ಯದ ಕಾರ್ಯಕರ್ತರು, ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ತಾಲ್ಲೂಕು ಕಚೇರಿ ಮುಂದೆ ಪ್ರತಿಭಟಿಸಿದರು.
ಜಿಲ್ಲಾ ಪರಿಷತ್ ಮಾಜಿ ಅಧ್ಯಕ್ಷ ಪೂರಿಗಾಲಿ ಜಯರಾಜ್ ಮಾತನಾಡಿ, ಪ್ರಜಾಪ್ರಭುತ್ವ ರಾಷ್ಟದಲ್ಲಿ ಎಸ್‌ಸಿ/ಎಸ್‌ಟಿ ಸಮುದಾಯದ ಅಭಿವೃದ್ದಿಗಾಗಿ ಹಲವಾರು ಕಲ್ಯಾಣ ಕಾರ್ಯಕ್ರಮಗಳನ್ನು ಸರ್ಕಾರದಿಂದ ಅನುಷ್ಠಾನಗೊಳಿಸಲಾಗಿತ್ತು. ಸಾಕಷ್ಟು ಅನುದಾನವನ್ನು ಸರ್ಕಾರ ಮೀಸಲಿಟ್ಟಿದ್ದರೂ ದಲಿತರು ಇದುವರೆವಿಗೂ ಅಭಿವೃದ್ದಿ ಕಂಡಿಲ್ಲ, ಇಂದಿಗೂ ಸಾಮಾಜಿಕವಾಗಿ, ಆರ್ಥಿಕವಾಗಿ ಸಮಾನತೆ ಸಿಕ್ಕಿಲ್ಲವೆಂದು ಕಿಡಿಕಾರಿದರು.
ರಾಜ್ಯ ಸರ್ಕಾರ ಎಸ್‌ಸಿ/ಎಸ್‌ಟಿ ಅಭಿವೃದ್ದಿಗಾಗಿ ಮೀಸಲಿರಿಸಿದ ಹಣವನ್ನು ಸಮುದಾಯದ ಅಭಿವೃದ್ದಿಗಾಗಿ ಸಮರ್ಪಕವಾಗಿ ಬಳಕೆ ಮಾಡದೇ, ಉಳಿದ ಅನುದಾನವನ್ನು ಹಾಗೇ ಇರಿಸಿದ್ದರಿಂದ ದಲಿತರ, ಶೋಷಿತರ ಅಭಿವೃದ್ದಿ ಮರೀಚಿಕೆಯಾಗಿದೆ ಎಂದರು.
ಅನುದಾನ ಖರ್ಚು ಮಾಡದ ಅಧಿಕಾರಿಗಳ ಮೇಲೆ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕು. ಸಮುದಾಯವನ್ನು ಸಾಮಾಜಿಕ, ಆರ್ಥಿಕ, ಸಮಾನತೆಯನ್ನು ಎತ್ತಿ ಹಿಡಿಯಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಅಧ್ಯಕ್ಷ ಪುಟ್ಟಸ್ವಾಮಿ, ಚುಂಚಣ್ಣ, ಮಹದೇವಸ್ವಾಮಿ, ಸೇರಿದಂತೆ ಇತರರಿದ್ದರು.
ಇದನ್ನು ಓದಿ: ಎಲೆಮರೆಯ ಕಾಯಿ ನಾಟಿ ವೈದ್ಯೆ: ನಾಗಮ್ಮಜ್ಜಿ