Thursday, September 19, 2024

ಪ್ರಾಯೋಗಿಕ ಆವೃತ್ತಿ

ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಪ್ರಾಂತ ರೈತಸಂಘದಿಂದ ಪ್ರತಿಭಟನೆ

ರೈತರು ಬೆಳೆದ ಎಲ್ಲಾ ಬೆಳೆಗಳಿಗೆ ಬೆಂಬಲ ಬೆಲೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

nudikarnataka.com

ಮಳವಳ್ಳಿ ಪಟ್ಟಣದಲ್ಲಿ ಜಮಾವಣೆಗೊಂಡ ಪ್ರಾಂತ ರೈತಸಂಘದ ಕಾರ್ಯಕರ್ತರು, ಶಾಂತಿ ಕಾಲೇಜಿನಿಂದ ಪ್ರಾಂತ ರೈತ ಸಂಘದ ಅಧ್ಯಕ್ಷ ಭರತ್ ರಾಜ್ ನೇತೃತ್ವದಲ್ಲಿ ಸರ್ಕಾರದ ವಿರುದ್ದ ಘೋಷಣೆ ಕೂಗುತ್ತಾ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು.

ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರ ರೈತರನ್ನು ಕಡೆಗಣಿಸಿವೆ. ಕಬ್ಬಿಗೆ ವೈಜ್ಞಾನಿಕ ಬೆಲೆ ನೀಡಬೇಕೆಂದು ರೈತರು ಪ್ರತಿಭಟನೆ ನಡೆಸುತ್ತಿದ್ದರೂ ಸರ್ಕಾರ ಅವರ ಬೇಡಿಕೆ ಈಡೇರಿಸಿಲ್ಲ. ಭತ್ತ, ರಾಗಿ ಮೊದಲಾದ ಬೆಳೆಗಳಿಗೆ ಸೂಕ್ತ ಮಾರುಕಟ್ಟೆ ನಿರ್ಮಿಸಬೇಕು. ಹಾಲಿನ ಬೆಲೆಯಲ್ಲಿ ಹೆಚ್ಚಳ ಮಾಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಜನವಾದಿ ಮಹಿಳಾ ಸಂಘಟನೆ ರಾಜ್ಯ ಕಾರ್ಯದರ್ಶಿ ದೇವಿ, ಜಿಲ್ಲಾ ಕಾರ್ಯದರ್ಶಿ ಸುಶೀಲ, ಲಿಂಗರಾಜುಮೂರ್ತಿ ಸೇರಿದಂತೆ ಹಲವರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!