Saturday, October 19, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಶಾಸಕ ಸ್ಥಾನದಿಂದ ಮುನಿರತ್ನ ವಜಾಕ್ಕೆ ಆಗ್ರಹಿಸಿ ನಾಳೆ ಪ್ರತಿಭಟನೆ

ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಿ, ರಾಜ್ಯದಿಂದ ಗಡಿಪಾರು ಮಾಡುವಂತೆ ಆಗ್ರಹಿಸಿ ಅಕ್ಟೋಬರ್ 1ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಜಾಥಾ ಕಾರ್ಯಕ್ರಮವನ್ನು ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟದ ವತಿಯಿಂದ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಸುರೇಶ್ ಕಂಠಿ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಂಧ್ರದ ಚಿತ್ತೂರಿನಿಂದ ವಲಸೆ ಬಂದಿರುವ ಕೊಳಕು ಶಾಸಕ ಮುನಿರತ್ನ ಮಾತನಾಡಿರುವ ಆಡಿಯೋ ಬಹಿರಂಗಗೊಂಡಿದೆ. ಈ ದ್ವನಿ ಮುದ್ರಣದಲ್ಲಿ ಮಹಿಳೆಯರು ಒಳಗೊಂಡಂತೆ ಪರಿಶಿಷ್ಟ ಮತ್ತು ಒಕ್ಕಲಿಗ ಸಮುದಾಯಗಳ ಬಗ್ಗೆ ಅತ್ಯಂತ ಕೀಳು ಮಟ್ಟದ ಭಾಷೆ ಬಳಸಿ ಅಶ್ಲೀಲ ಮತ್ತು ಅಸಭ್ಯವಾಗಿ ಬೈದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇತ್ತೀಚಿನ ದಿನಗಳಲ್ಲಿ ಸಾಕ್ಷರತೆ ಪ್ರಮಾಣ ಹೆಚ್ಚಾಗುತ್ತಿದ್ದರೂ, ಜಾತಿ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿರುವುದು ಭವಿಷ್ಯ ಭಾರತದ ಆತಂಕವನ್ನು ಹೆಚ್ಚಿಸುತ್ತಿದೆ ಎಂದರು.

ಸಂವಿಧಾನದ ಅಡಿಯಲ್ಲಿ ಎಲ್ಲಾ ಸಮುದಾಯಗಳ ಮತಗಳನ್ನು ಪಡೆದು ಸರ್ವ ಸಮುದಾಯಗಳ ಪ್ರತಿನಿಧಿಯಾಗಿ ಆಯ್ಕೆಯಾಗಿರುವ ಶಾಸಕ ಮುನಿರತ್ನ ಅವರ ನಡೆಯನ್ನು ರಾಜ್ಯದ ಜನತೆ ಒಕ್ಕೊರಲಿನಿಂದ ಖಂಡಿಸಬೇಕಿದೆ ಎಂದರು.

ಇದು ಕೇವಲ ಕೆಲ ಸಮುದಾಯಗಳನ್ನು ಗುರಿ ಯಾಗಿಸುವುದು ಮಾತ್ರವಲ್ಲ. ಆಡಿಯೋ ಪ್ರಕರಣ ಹೊರಬೀಳುತ್ತಿದ್ದಂತೆ ಅತ್ಯಾಚಾರ, ಹನಿಟ್ರ್ಯಾಪ್ ,ಹೆಚ್ ಐ ವಿ ಸೋಂಕಿತರ ಮೂಲಕ ರಾಜಕೀಯ ವಿರೋಧಿಗಳನ್ನು ಹಣಿಯಲು ನೀಚ ಅಸ್ತ್ರಗಳನ್ನು ಪ್ರಯೋಗಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುನಿರತ್ನ ಅವರ ನೀಚ ಹೇಳಿಕೆಗಳನ್ನು ಖಂಡಿಸಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು .ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು .ಕರ್ನಾಟಕ ರಾಜ್ಯದಿಂದ ಗಡಿಪಾರು ಮಾಡಿ ರಾಜಕೀಯ ಬಹಿಷ್ಕಾರ ಹಾಕಬೇಕು. ಹಾಗೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಗದಿತ ಕಾಲಮಿತಿಯಲ್ಲಿ ಎಸ್ಐಟಿ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಪ್ರತಿಭಟನೆ ನಡೆಸಲಾಗುತ್ತಿದೆ. ಆದ್ದರಿಂದ ಪ್ರತಿಭಟನೆಯಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.

ಗೋಷ್ಠಿಯಲ್ಲಿ ನಗರಸಭೆ ಸದಸ್ಯರಾದ ಶ್ರೀಧರ್ ಸುಮಂತ್ ,ಮಂಡ್ಯ ಜಿಲ್ಲಾ ಕಾಂಗ್ರೆಸ್ ಘಟಕದ ಮಾಜಿ ಜಿಲ್ಲಾಧ್ಯಕ್ಷ ಲವ, ಸಿದ್ದರಾಜು, ಪ್ರಾಣೇಶ್ ಸೇರಿದಂತೆ ಇತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!