Thursday, May 16, 2024

ಪ್ರಾಯೋಗಿಕ ಆವೃತ್ತಿ

ಬೀಡಿ ಕಾರ್ಮಿಕರಿಗೆ ಪರ್ಯಾಯ ಉದ್ಯೋಗ ಒದಗಿಸಿ: ಸಿ.ಕುಮಾರಿ

ಬೀಡಿ ಉದ್ಯಮವನ್ನೆ ನಂಬಿಕೊಂಡು ಜೀವನ ಸಾಗಿಸುತ್ತಿರುವ ಕಾರ್ಮಿಕರಿಗೆ ಪರ್ಯಾಯ ಉದ್ಯೋಗ ಒದಗಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಅಖಿಲ ಭಾರತ ಬೀಡಿ ಕಾರ್ಮಿಕರ ಫೆಡರೇಷನ್ (ಸಿಐಟಿಯು) ಜಿಲ್ಲಾ ಘಟಕದ ವತಿಯಿಂದ ಗುರುವಾರ ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿತು.

ಜಿಲ್ಲಾಧಿಕಾರಿ ಕಚೇರಿ ಎದುರು ಸಮಾವೇಶಗೊಂಡ ಕಾರ್ಮಿಕರು, ತಮ್ಮ ಹಕ್ಕೋತ್ತಾಯದ ಮನವಿ ಪತ್ರವನ್ನು ಅಧಿಕಾರಿಗಳಿಗೆ ಸಲ್ಲಿಸಿದರು.

ದೇಶದಲ್ಲಿ ಸುಮಾರು 3 ಕೋಟಿ ಬೀಡಿ ಕಾರ್ಮಿಕರು ಈ ಉದ್ಯಮವನ್ನೆ ನೆಚ್ಚಿಕೊಂಡಿದ್ದಾರೆ. ಆದರೆ ಬೀಡಿ ನಿಷೇಧವನ್ನು ಸರ್ಕಾರವು ಪರಿಣಾಮಕಾರಿಯಾಗಿ ಮಾಡುತ್ತಿರುವ ಪರಿಣಾಮವಾಗಿ ಈ ಉದ್ಯಮ ಅಳಿವಿನಂಚಿನಲ್ಲಿದೆ.

ಸಿಐಟಿಯು ರಾಷ್ಟ್ರೀಯ ಮಟ್ಟದಲ್ಲಿ ಸೆ.8 ಅನ್ನು ಬೇಡಿಕೆ ದಿನವನ್ನು ಆಚರಿಸುತ್ತಿರುವ ಭಾಗವಾಗಿ ಈ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಸಿಐಟಿಯು ಮುಖಂಡರಾದ ಸಿ.ಕುಮಾರಿ ಹೇಳಿದರು.

ಸರ್ಕಾರ ಕೂಡಲೇ ಬೀಡಿ ಉದ್ಯಮ ಹಾಗೂ ಕಾರ್ಮಿಕರ ಸಮಸ್ಯೆಗಳನ್ನು ಪರಿಹರಿಸಲು ಕ್ರಮವಹಿಸಿಬೇಕೇಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಅಬ್ದುಲ್ ಮತ್ತಿತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!