Friday, September 20, 2024

ಪ್ರಾಯೋಗಿಕ ಆವೃತ್ತಿ

ಭಿಕ್ಷಾಟನೆಯಲ್ಲಿ ತೊಡಗಿರುವವರಿಗೆ ಮೂಲಭೂತ‌ ಸೌಕರ್ಯ ಒದಗಿಸಿ

ಭಿಕ್ಷಾಟನೆಯಲ್ಲಿ ತೊಡಗಿರುವವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಹಾಗೂ ಮೂಲಭೂತ ಸೌಕರ್ಯ ಒದಗಿಸಲು ಆಧಾರ್ ಹಾಗೂ ಪಡಿತರ ಚೀಟಿಯನ್ನು ಒದಗಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ: ಹೆಚ್ .ಎಲ್ ನಾಗರಾಜು ಅಧಿಕಾರಿಗಳಿಗೆ ಸೂಚಿಸಿದರು.

ಮಂಡ್ಯದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಮಕ್ಕಳ ಸಹಾಯವಾಣಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಬಾಲ್ಯವಿವಾಹ ಹಾಗೂ ಭಿಕ್ಷಾಟನೆಯಲ್ಲಿ ಮಕ್ಕಳು ಹಾಗೂ ಪೋಷಕರು‌ ತೊಡಗಿಕೊಂಡಿರುವ ಪ್ರಕರಣಗಳ ಬಗ್ಗೆ ಹೆಚ್ಚಿನ ಗಮನ ಹರಿಸಿ ಪರಿಹರಿಸಬೇಕು. ವಲಸೆ ಕಾರ್ಮಿಕರು ಮುಖ್ಯವಾಗಿ ಕಬ್ಬಿನ ಕಟಾವಿಗೆ ಜಿಲ್ಲೆಗೆ ಆಗಮಿಸುತ್ತಾರೆ. ಮಕ್ಕಳ ವಿದ್ಯಾಭ್ಯಾಸಕ್ಕೆ ಶಾಲೆ ಹಾಗೂ ವಸತಿ ಶಾಲೆಗಳಲ್ಲಿ ದಾಖಲು ಮಾಡಲು ಸ್ವಯಂ ಸೇವಾ ಸಂಸ್ಥೆಗಳು ಕೈ ಜೋಡಿಸಬೇಕು ಎಂದರು.

ಭಿಕ್ಷಾಟನೆಯಲ್ಲಿ ತೊಡಗುವವರು ಹಾಗೂ ವಲಸೆ ಕಾರ್ಮಿಕರಿಗೆ ವಸತಿ ಹಾಗೂ ಆಹಾರದ ಸಮಸ್ಯೆ ಪರಿಹಾರವಾದರೆ ಮಕ್ಕಳಿಗೆ ಸಂಬಂಧಿಸಿದ ಬಹಳಷ್ಟು ಸಮಸ್ಯೆಗಳು ಪರಿಹಾರವಾಗುತ್ತದೆ. ಈ ಹಿನ್ನಲೆಯಲ್ಲಿ ಅವರಿಗೆ ನಿವೇಶನ, ಮನೆ, ಪಡಿತರ ಚೀಟಿ ಒದಗಿಸಬೇಕು ಎಂದರು.

ಬಾಲ್ಯ ವಿವಾಹ ತಡೆಗಟ್ಟಲು ಎಲ್ಲಾ ಇಲಾಖೆಗಳ ಸಹಕಾರ ಮುಖ್ಯ. ಗ್ರಾಮ ಮಟ್ಟದಲ್ಲಿ ನಿಯೋಜನೆಯಾಗಿರುವ ಬಾಲ್ಯ ವಿವಾಹ ತಡೆಗಟ್ಟುವ ಅಧಿಕಾರಿಗಳು ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸಬೇಕು. ಗ್ರಾಮ ಮಟ್ಟದಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಕಂಡುಬಂದಲ್ಲಿ ತಕ್ಷಣ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿ ಸಹಕರಿಸಬೇಕು ಎಂದರು.

ಮಂಡ್ಯ ನಗರದ 13 ವರ್ಷದ ಬಾಲಕ ಶ್ರವಣದೋಷದಿಂದ ಬಳಲುತ್ತಿದ್ದು ಚಿಕಿತ್ಸೆಗೆ ಅಂದಾಜು 5 ಲಕ್ಷ ಹಣ ಬೇಕಿರುತ್ತದೆ. ಚಿಕಿತ್ಸೆಗೆ ಮಂಡ್ಯ ನಗರಸಭೆಯ ವಿಕಲಚೇತನರ ಅನುದಾನ ಹಾಗೂ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು.

ಮಂಡ್ಯ ಜಿಲ್ಲೆಯಲ್ಲಿ ಮಕ್ಕಳ ಸಹಾಯವಾಣಿ 1098ಕ್ಕೆ ಮಾರ್ಚ್ 2011 ರಿಂದ ಜೂನ್ 2022 ರವರಿಗೆ ಒಟ್ಟು 7892 ಪ್ರಕರಣಗಳು ನೊಂದಣಿಯಾಗಿವೆ. ಜಿಲ್ಲಾ ಮಟ್ಟದಲ್ಲಿ ಮಕ್ಕಳ ಮಾರಾಟ, ಬಾಲ್ಯವಿವಾಹಕ್ಕೆ ಸಂಬಂಧಿಸಿದಂತೆಸಂಬಂಧಿಸಿದಂತೆ ಜಾಗೃತಿಯನ್ನು ಮೂಡಿಸಲು ಹಲವಾರು ಜಾಥಾ ಮಾಡಲಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಕೋವಿಡ್ ನಿಂದ ತಂದೆ ತಾಯಿ ಇಬ್ಬರನ್ನು ಕಳೆದುಕೊಂಡಿರಯವ ಮಕ್ಕಳಿಗೆ ಪಿ.ಎಂ.ಕೇರ್ಸ್ ನಿಂದ ನೀಡಲಾಗುವ 10 ಲಕ್ಷ ರೂ ಪರಿಹಾರದ ಠೇವಣಿಯನ್ನು ಪಡೆದುಕೊಳ್ಳಲಾಯಿತು.

ಸಭೆಯಲ್ಲಿ ಜಿಲ್ಲಾ ಉಪಕಾರ್ಯದರ್ಶಿ ಸರಸ್ವತಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಚೇತನ್ ಕುಮಾರ್, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಓಂ ಪ್ರಕಾಶ್, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಅನಿಲ್ ಕುಮಾರ್, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ವಿಜಯ್ ಪ್ರಸಾದ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!