Tuesday, November 24, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | ಸಾರ್ವಜನಿಕರಿಗೆ ಬಸ್ ವ್ಯವಸ್ಥೆ ಕಲ್ಪಿಸಿ – ಚಿಕ್ಕಲಿಂಗಯ್ಯ

ಶಕ್ತಿ ಯೋಜನೆಯಡಿ ಮೈಸೂರು – ಮಂಡ್ಯ ಮಾರ್ಗಕ್ಕೆ ಮಂಡ್ಯ ಘಟಕದ ವತಿಯಿಂದ ಪ್ರತಿನಿತ್ಯ ಬೆಳಗ್ಗೆ ಮತ್ತು ಸಂಜೆ ಬಸ್ ಗಳನ್ನು ಬಿಟ್ಟು, ಬೇರೆ ಜಿಲ್ಲೆಯ ಘಟಕದ ವೇಗದೂತ ಬಸ್ ಗಳನ್ನು ಜಿಲ್ಲೆಗೆ ಹೆಚ್ಚು ಬಿಡಬೇಕೆಂದು ಮಂಡ್ಯ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಚಿಕ್ಕಲಿಂಗಯ್ಯ ಹೇಳಿದರು.

ಮಂಡ್ಯ ಜಿಲ್ಲಾ ಪಂಚಾಯತ್ ಮಿನಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಶಕ್ತಿ ಯೋಜನೆಯಡಿ ಸಾರ್ವಜನಿಕರಿಗೆ ತೊಂದರೆ ಆಗದಂತೆ ಮಂಡ್ಯ ಯಿಂದ ಮೈಸೂರಿಗೆ ಪ್ರತಿ 15 ನಿಮಿಷಕ್ಕೆ ಬಸ್ಸುಗಳನ್ನು ಬಿಡುವಂತೆ ಮತ್ತು ರಾತ್ರಿ 7 ರಿಂದ 9 ಗಂಟೆ ವೇಳೆಯಲ್ಲಿ ಪ್ರಯಾಣಿಸುವಾಗ ಸಾರ್ವಜನಿಕರಿಗೆ ತೊಂದರೆಯಾಗದಂತೆ ಬಸ್ಸುಗಳನ್ನು ಬಿಡುವಂತೆ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಚಿಕ್ಕಲಿಂಗಯ್ಯ ಅವರು ಹೇಳಿದರು.

ಅನ್ನಸುವಿಧ ಯೋಜನೆಯ ಮೂಲಕ 75 ವರ್ಷ ಮೇಲ್ಪಟ್ಟವರಿಗೆ ಈಗಾಗಲೇ ಪಡಿತರವನ್ನು ಮನೆ ಬಾಗಿಲಿಗೆ ತಲುಪಿಸಲಾಗುತ್ತಿದೆ. ಕೆಲವರ ಬಳಿ ಮೊಬೈಲ್ ಇಲ್ಲದ ಕಾರಣ ಓಟಿಪಿ ಪಡೆದು ಪಡಿತರ ತಲುಪಿಸಲು ಸಾಧ್ಯವಾಗುತ್ತಿಲ್ಲ.ಮಾನವಿಯತೆ ದೃಷ್ಟಿಯಿಂದ ವಯಸ್ಕರಿಗೆ ಪಡಿತರವನ್ನು ನೀಡಿ ಎಂದು ತಿಳಿಸಿದರು.

ಜಿಲ್ಲೆಯ ಎಲ್ಲಾ ಕಾಲೇಜುಗಳಲ್ಲಿ ಯುವನಿಧಿ ಯೋಜನೆಯ ಕುರಿತಾಗಿ ಹೆಚ್ಚಿನ ಪ್ರಚಾರ ಕೈಗೊಳ್ಳಿ. ಎಲ್ಲಾ ಕಾಲೇಜುಗಳಲ್ಲಿ ಯುವನಿಧಿ ಯೋಜನೆ ಕುರಿತು ಸೂಚನಾ ಫಲಕಗಳನ್ನು ಅಳವಡಿಸಿ ಅರಿವು ಮೂಡಿಸಿ ಎಂದು ಹೇಳಿದರು.

ಯುವನಿಧಿ ಯೋಜನೆಯಡಿ ಜಿಲ್ಲೆಯಲ್ಲಿ ಯುವ ಜನತೆಗೆ ಅರಿವು ಮೂಡಿಸುವಂತಹ ತರಬೇತಿ ಕಾರ್ಯಗಾರವನ್ನು ಮಾಡಬೇಕು ಎಂದು ಹೇಳಿದರು.

ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಪ್ರಶಾಂತ್ ಬಾಬು ಅವರು ಮಾತನಾಡಿ
ಅನ್ನಭಾಗ್ಯ ಯೋಜನೆಯಲ್ಲಿ ಫಲಾನುಭವಿಯು ಮರಣ ಹೊಂದಿದ ನಂತರ ನ್ಯಾಯಬೆಲೆ ಅಂಗಡಿಯಲ್ಲಿ ನೋಂದಣಿಯನ್ನು ರದ್ದು ಮಾಡುಬೇಕು ತಿಳಿಸಿದರು.

ಜಿಲ್ಲೆಯಲ್ಲಿ ತಾಲೂಕುವಾರು ಮಟ್ಟದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮರಣ ಹೊಂದಿದ ಫಲಾನುಭವಿಗಳ ಮಾಹಿತಿಯನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸುವಂತೆ ಹೇಳಿದರು.

ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ರಾಜೇಂದ್ರ ಎಸ್.ಹೆಚ್ ಅವರು ಮಾತನಾಡಿ ಗೃಹಜ್ಯೋತಿ ಯೋಜನೆಯಡಿ ಜಿಲ್ಲೆಯಲ್ಲಿ 200 ಯೂನಿಟ್ ಬಳಸುವಂತಹ ಫಲಾನುಭವಿಗಳನ್ನು ಗುರುತಿಸಿ ಗೃಹ ಜ್ಯೋತಿಯ ಸದ್ಬಳಕೆ ಕುರಿತು ಪರಿಶೀಲಿಸಬೇಕು ಎಂದು ತಿಳಿಸಿದರು.

ಜಿಲ್ಲೆಯಲ್ಲಿ 200 ಯೂನಿಟ್ ಬಳಸುವ ಫಲಾನುಭವಿಗಳು 3 % ಅಂದರೆ 15000 ಕುಟುಂಬಗಳು ಇರುವುದಾಗಿ ತಿಳಿಸಿದರು. ಹೊಸ ಮನೆಗಳಿಗೆ ಸರ್ಕಾರದ ನಿಯಮದಂತೆ ಕಡ್ಡಾಯವಾಗಿ 58 ಯೂನಿಟ್ ಗಳನ್ನು ನೀಡುವುದಾಗಿ ಹೇಳಿದರು.

ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಶಿವಣ್ಣ, ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಕೆ ಹನುಮಂತಯ್ಯ,ಜಿಲ್ಲಾ ಪಂಚಾಯತ್ ಯೋಜನಾಧಿಕಾರಿ ಧನುಷ್, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಸದಸ್ಯರುಗಳಾದ ಅಜಯ್ ಕುಮಾರ್ ಬಿ.ಪಿ, ಎ.ಬಿ ಕುಮಾರ, ಕೆ. ರುದ್ರಪ್ಪ, ವೀಣಾ ,ಶಂಕರೇಗೌಡ, ಬಸವರಾಜು, ಮಹಮದ್ ಅನ್ಸರ್, ರಮೇಶ್ ಬಿ.ಎಂ, ಪಿ ಮಾದೇಶ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ