Thursday, September 19, 2024

ಪ್ರಾಯೋಗಿಕ ಆವೃತ್ತಿ

545 ಪಿಎಸ್‌ಐ ಹುದ್ದೆಗಳ ಜೊತೆ 400 ಹುದ್ದೆ ಸೇರಿಸಿ ಪರೀಕ್ಷೆ ನಡೆಸಲು ಚಿಂತನೆ: ಪರಮೇಶ್ವರ್

ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್ಐ) ಮರು ಪರೀಕ್ಷೆ ನಡೆಸುವಂತೆ ಹೈಕೋರ್ಟ್ ಆದೇಶ ನೀಡಿರುವುದನ್ನು ಮಾಧ್ಯಮಗಳ ಮೂಲಕ ತಿಳಿದಿದೆ. ಅದರ ಸಂಪೂರ್ಣ ಪ್ರತಿಯನ್ನು ನಾನು ನೋಡಿಲ್ಲ. ಆದರೆ, ಪಿಎಸ್ಐ ಪರೀಕ್ಷಾರ್ಥಿಗಳು ಓದಲು ಸಮಯ ಕೊಡಿ ಅಂತಿದ್ದಾರೆ. ಅದನ್ನು ಪರಿಗಣಿಸಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಸ್ವತಂತ್ರ ಸಂಸ್ಥೆಯಿಂದ ಬೇಗ ಮರು ಪರೀಕ್ಷೆ ನಡೆಸಲು ಕೋರ್ಟ್ ಹೇಳಿದೆ. ಮುಂದಿನ ಸೋಮವಾರ ಅಥವಾ ಮಂಗಳವಾರ ಆದೇಶ ಪ್ರತಿ ಕೈ ಸೇರಲಿದೆ. ತದನಂತರ ಕ್ರಮ ತೆಗೆದುಕೊಳ್ಳುತ್ತೇವೆ” ಎಂದರು.

“ನೇಮಕಾತಿ ಬಳಿಕ ಅವರಿಗೆ ತರಬೇತಿ ನೀಡಲು 1 ವರ್ಷ ಆಗಲಿದೆ. ರೂಲ್ 32ರಲ್ಲಿ 500 ರಿಂದ 600 ಎಎಸ್ಐಗಳಿಗೆ ಬಡ್ತಿ ನೀಡಿದ್ದೇವೆ. 545 ಹುದ್ದೆಗಳ ಜೊತೆಗೆ ಇನ್ನೂ 400 ಪಿಎಸ್ಐ ಹುದ್ದೆಗಳು ಖಾಲಿಯಿವೆ. ಎರಡನ್ನೂ ಒಟ್ಟಿಗೆ ಮಾಡಬೇಕಾ ಅಥವಾ ಪ್ರತ್ಯೇಕವಾಗಿ ನಡೆಸಬೇಕೆಂದು ಚರ್ಚೆ ನಡೆಸುತ್ತಿದ್ದೇವೆ. ಹೈಕೋರ್ಟ್‌ ತೀರ್ಪು ಇಲಾಖೆಗೆ ಒಳ್ಳೆಯದಾಗಿದೆ” ಎಂದು ಹೇಳಿದರು.‌

545 ಪಿಎಸ್ಐಗಳ ನೇಮಕಾತಿಗಾಗಿ ಅಕ್ಟೋಬರ್ 3, 2021 ರಂದು 92 ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ಮಾಡಲಾಗಿತ್ತು. ಒಟ್ಟು 54,289 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. ಪರೀಕ್ಷೆ ಬರೆದ 52 ಅಭ್ಯರ್ಥಿಗಳು ಸೇರಿದಂತೆ ಹಗರಣಕ್ಕೆ ಸಂಬಂಧಿಸಿದಂತೆ 110 ಜನರನ್ನು ಬಂಧಿಸಲಾಗಿದೆ.

52 ಅಭ್ಯರ್ಥಿಗಳು ಯಾವುದೇ ಪೊಲೀಸ್ ನೇಮಕಾತಿಯಲ್ಲಿ ಭಾಗವಹಿಸದಂತೆ ನಿರ್ಬಂಧಿಸಲಾಗಿದೆ. ಹಿರಿಯ ಐಪಿಎಸ್ ಅಧಿಕಾರಿ ಅಮೃತ್ ಪೌಲ್ ಅವರನ್ನು ಪರೀಕ್ಷೆಯಲ್ಲಿ ರಿಗ್ಗಿಂಗ್ ಮಾಡಿದ ಆರೋಪದ ಮೇಲೆ ಬಂಧಿಸಲಾಗಿತ್ತು. ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಭ್ರಷ್ಟಾಚಾರ ಪ್ರಕರಣದಲ್ಲಿ ಎಡಿಜಿಪಿ ಶ್ರೇಣಿಯ ಐಪಿಎಸ್ ಅಮೃತ್ ಪೌ‌ಲ್‌ ಬಂಧಿಸಿದ್ದರು. ಇದೀಗ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

ಕೃಪೆ: ಈದಿನ.ಕಾಂ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!