Thursday, November 19, 2026

ಪ್ರಾಯೋಗಿಕ ಆವೃತ್ತಿ

ಪಿಯುಸಿ ಫಲಿತಾಂಶ ಪ್ರಕಟ | ಈ ಬಾರಿ ಶೇ.73.45 ಫಲಿತಾಂಶ : ಮಂಡ್ಯಕ್ಕೆ 14 ನೇ ಸ್ಥಾನ

2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಮಂಗಳವಾರ ಮಧ್ಯಾಹ್ನ ಪ್ರಕಟಗೊಂಡಿದೆ. ಈ ಬಾರಿ ಶೇಕಡಾ 73.45 ಫಲಿತಾಂಶ ಬಂದಿದ್ದು, ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ.

ಫಲಿತಾಂಶ ವೀಕ್ಷಣೆಗೆ ಇಲ್ಲಿ ಕ್ಲಿಕ್ ಮಾಡಿ : karresults.nic.in 

ಫಲಿತಾಂಶದಲ್ಲಿ ಎಂದಿನಂತೆ ಉಡುಪಿ ಜಿಲ್ಲೆ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮೂರನೇ ಸ್ಥಾನದಲ್ಲಿವೆ. ಮಂಡ್ಯ ಜಿಲ್ಲೆಯು ಶೇ.73.27ರಷ್ಟು ಫಲಿತಾಂಶ ಪಡೆಯುವ ಮೂಲಕ 14ನೇ ಸ್ಥಾನದಲ್ಲಿದೆ. ಯಾದಗಿರಿ ಜಿಲ್ಲೆಯು ಕೊನೆಯ ಸ್ಥಾನದಲ್ಲಿದೆ.

ಶಾಲಾ ಶಿಕ್ಷಣ & ಸಾಕ್ಷರತಾ ಇಲಾಖೆ ಸಚಿವ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದರು. ಮಧ್ಯಾಹ್ನ 1.30ರ ಬಳಿಕ ಜಾಲತಾಣದಲ್ಲಿ ಫಲಿತಾಂಶ ಲಭ್ಯವಿದೆ. ಅಂಕಪಟ್ಟಿ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.

ಮಾರ್ಚ್ 1 ರಿಂದ ಮಾರ್ಚ್ 20 ರ ವರೆಗೆ ಸೆಕೆಂಡ್ ಪಿಯು ಪರೀಕ್ಷೆ ನಡೆದಿತ್ತು. 7 ಲಕ್ಷದ 13 ಸಾವಿರದ 862 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಈ ಬಾರಿ  ಉಡುಪಿ (93.90%) ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ. ದಕ್ಷಿಣ ಕನ್ನಡ (93.57%) ದ್ವಿತೀಯ ಸ್ಥಾನ  ಪಡೆದಿದೆ. ಬೆಂಗಳೂರು ದಕ್ಷಿಣ ತೃತೀಯ ಸ್ಥಾನ ಪಡೆದಿದೆ. ಯಾದಗಿರಿ ಈ ವರ್ಷವೂ ಕೊನೆಯ ಸ್ಥಾನ (48.45%) ಪಡೆದಿದೆ.

ಕಲಾವಿಭಾಗದಲ್ಲಿ ಸಂಜನಾಬಾಯಿ ರಾಜ್ಯಕ್ಕೆ ಪ್ರಥಮ 597 ಅಂಕ ಪಡೆದಿದ್ದಾರೆ.  ಬಳ್ಳಾರಿ ನಿರ್ಮಲ ದ್ವಿತೀಯ ಸ್ಥಾನ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಕೆನರಾ ಕಾಲೇಜು ಮಂಗಳೂರಿನ ದೀಪಶ್ರೀ ರಾಜ್ಯಕ್ಕೆ ಪ್ರಥಮ 599 ಅಂಕ ಪಡೆದಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಎಕ್ಸಫರ್ಟ್ ಕಾಲೇಜು ಮಂಗಳೂರಿನ ಅಮೂಲ್ಯ ಕಾಮತ್ ರಾಜ್ಯಕ್ಕೆ ಪ್ರಥಮ 599 ಅಂಕ ಪಡೆದಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ