Friday, September 20, 2024

ಪ್ರಾಯೋಗಿಕ ಆವೃತ್ತಿ

ದ್ವಿತೀಯ ಪಿಯುಸಿ ಫಲಿತಾಂಶ | ಶೇ.74.67 ವಿದ್ಯಾರ್ಥಿಗಳ ತೇರ್ಗಡೆ

ದ್ವಿತೀಯ ಪಿಯುಸಿ ಅಂತಿಮ ಪರೀಕ್ಷಾ ಫಲಿತಾಂಶಗಳು ಶುಕ್ರವಾರ ಪ್ರಕಟವಾಗಿದ್ದು, ರಾಜ್ಯಾದ್ಯಂತ 5.24 ಲಕ್ಷ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ, ಪರೀಕ್ಷೆಯಲ್ಲಿ ಒಟ್ಟು 5,24,209 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಶಾಲಾ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೀಶ್ ಸಿಂಗ್ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದರು. 7,02,067 ವಿದ್ಯಾರ್ಥಿಗಳು ಪರೀಕ್ಷೆ ಹಾಜರಾಗಿದ್ದು 5,24,209 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಈ ಬಾರಿ 74.67% ಫಲಿತಾಂಶ ದಾಖಲಾಗಿದೆ.

ದಕ್ಷಿಣ ಕನ್ನಡ ಮೊದಲ ಸ್ಥಾನ (95.33%) ಉಡುಪಿಗೆ ಎರಡನೇ ಸ್ಥಾನ( 95.24%) ಕೊಡಗಿಗೆ 3ನೇ ಸ್ಥಾನ (90.55%) ಸಿಕ್ಕಿದರೆ ಯಾದಗಿರಿಗೆ (78.97%) ಕೊನೆಯ ಸ್ಥಾನ ಸಿಕ್ಕಿದೆ. ಎಂದಿನಂತೆ ಬಾಲಕೀಯರೇ ಮೇಲುಗೈ ಸಾಧಿಸಿದ್ದು 80.25% ಪಾಸ್ ಆಗಿದ್ದರೆ ಬಾಲಕರು 69.05% ಪಾಸ್‌ ಆಗಿದ್ದಾರೆ. ಗ್ರಾಮೀಣ ಭಾಗದ 74.79% ಮಕ್ಕಳು ತೇರ್ಗಡೆಯಾಗಿದ್ದರೆ 74.63% ನಗರ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

ಪರೀಕ್ಷೆಗೆ 727,923 ವಿದ್ಯಾರ್ಥಿಗಳು ನೋಂದಾಯಿಸಿದ್ದು, ಈ ಪೈಕಿ 725,821 ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹರಾಗಿದ್ದಾರೆ. 23,754 ಮಂದಿ ವಿದ್ಯಾರ್ಥಿಗಳು ಎಲ್ಲ ವಿಷಯಗಳ ಪರೀಕ್ಷೆಗೆ ಗೈರಾಗಿದ್ದಾರೆ. 702,067 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಈ ಪೈಕಿ 524,209 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ತಿಳಿದುಬಂದಿದೆ. 2023 ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಗೆ ಒಟ್ಟು 7,02,067 ವಿದ್ಯಾರ್ಥಿಗಳು ಹಾಜರಾಗಿದ್ದರು. ಒಟ್ಟು 61 ಕೇಂದ್ರದಲ್ಲಿ ಮೌಲ್ಯಮಾಪನ ಮಾಡಲಾಗಿತ್ತು.

ಕಲಾ ವಿಭಾಗದಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಸಂಖ್ಯೆ 1,34,876. ಕಲಾ ವಿಭಾಗದಲ್ಲಿ ಶೇಕಡಾ 61.22ರಷ್ಟು ಫಲಿತಾಂಶ ಬಂದಿದ್ದು, ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು KSEEB ಯ ಅಧಿಕೃತ ವೆಬ್‌ಸೈಟ್‌ನಲ್ಲಿ ತಮ್ಮ ಫಲಿತಾಂಶಗಳನ್ನು ಪರಿಶೀಲಿಸಬಹುದು.

ಫಲಿತಾಂಶವು KSEEB ಯ ಅಧಿಕೃತ ವೆಬ್‌ಸೈಟ್‌ karresults.nic.in. ಲಭ್ಯವಿರುತ್ತವೆ ಮತ್ತು ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಇತರ ಅಗತ್ಯ ವಿವರಗಳನ್ನು ಬಳಸಿಕೊಂಡು ತಮ್ಮ ಫಲಿತಾಂಶಗಳನ್ನು ಪರಿಶೀಲಿಸಬಹುದು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!