Thursday, November 19, 2026

ಪ್ರಾಯೋಗಿಕ ಆವೃತ್ತಿ

ಪುನೀತ್ ಕೆರೆಹಳ್ಳಿ ಇನ್ನೂ ಬಂಧನವಾಗಿಲ್ಲ ಎಂದ ರಾಮನಗರ ಎಸ್ಪಿ

ಕನಕಪುರ ತಾಲ್ಲೂಕಿನ ಸಾತನೂರಿನಲ್ಲಿ ಜಾನುವಾರು ಸಾಗಿಸುವ ವಾಹನದ ಚಾಲಕನನ್ನು ಹತ್ಯೆಗೈದ ಆರೋಪ ಹೊತ್ತಿರುವ ಪುನೀತ್ ಕೆರೆಹಳ್ಳಿಯನ್ನು ಇನ್ನೂ ಬಂಧಿಸಲಾಗಿಲ್ಲ ಎಂದು ರಾಮನಗರ ಎಸ್ಪಿ ಕಾರ್ತಿಕ್ ರೆಡ್ಡಿ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.

“>

ನೆಟ್ಟಿಗರ ಆಕ್ರೋಶ

ಗೋ ರಕ್ಷಕನೆಂದು ಹೇಳಿಕೊಂಡು ಹಣ ಕೀಳುವ ದಂಧೆ ಮಾಡುತ್ತಿದ್ದಾನೆನ್ನಲಾದ ಪುನೀತ್ ಕೆರೆಹಳ್ಳಿಯ ಮೇಲೆ ಮಂಡ್ಯದ ಜಾನುವಾರು ವ್ಯಾಪಾರಿ ಇದ್ರೀಸ್ ಪಾಷಾ ಅವರನ್ನು ಕೊಲೆ ಮಾಡಿದ ಆರೋಪದ ಮೇಲೆ 2 ಎಫ್ಐಆರ್ ಗಳು ದಾಖಲಾಗಿವೆ. ಹೀಗಿದ್ದರೂ ಇಂತಹ ಕೊಲೆ ಆರೋಪಿಯನ್ನು ಬಂಧನ ಮಾಡದಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಿಂದೂ ಧರ್ಮ ಮತ್ತು ದೇವರ ಬಗ್ಗೆ ಕೇವಲ ಹೇಳಿಕೆ ನೀಡಿದ ಚೇತನ ಅಹಿಂಸಾ ಅವರನ್ನು ತಕ್ಷಣ ಬಂಧಿಸಿದ ಪೊಲೀಸರು, ಪುನೀತ್ ಕೆರೆಹಳ್ಳಿ ವಿಚಾರದಲ್ಲಿ ಏಕೆ ಅಂತಹದ್ದೆ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳುತ್ತಿಲ್ಲ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ.

ಅಂದರೆ ಅನ್ಯ ಕೋಮಿನ ವ್ಯಕ್ತಿ ಪ್ರಾಣಕ್ಕೆ ಬೆಲೆ ಇಲ್ಲವೇ ? ಅದರಲ್ಲೂ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ರಾತ್ರೋರಾತ್ರಿ ಸಾಮಾಜಿಕ ಜಾಲತಾಣದಲ್ಲಿ ಲೈವ್ ಬಂದು ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಹಾಗೂ ಜೆಡಿಎಸ್ ನ ನಾಯಕರಾದ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ನಿಂದಿಸಿ, ಕೊಲೆ ಬೆದರಿಕೆ ಹಾಕಿದವನು, ಪೊಲೀಸರ ಕೈಗೆ ಸಿಗುತ್ತಿಲ್ಲವೇ ? ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ಟ್ವೀಟ್ ಮಾಡಿ ಗೃಹ ಸಚಿವರು ಹಾಗೂ ಪೊಲೀಸರ ನಿಷ್ಕ್ರಿಯತೆಗೆ ಕಿಡಿಕಾರಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ