Wednesday, May 15, 2024

ಪ್ರಾಯೋಗಿಕ ಆವೃತ್ತಿ

ಶ್ರೀರಂಗಪಟ್ಟಣ| ಪಲ್ಸ್ ಪೋಲಿಯೋ ಕುರಿತು ಸಮನ್ವಯ ಸಮಿತಿ ಸಭೆ

ಶ್ರೀರಂಗಪಟ್ಟಣ ತಾಲೂಕಿನಾದ್ಯಂತ ಮಾರ್ಚ್ 3 ರಂದು ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ ಕಾರ್ಯಕ್ರಮವನ್ನು ಆಯೋಜಿಸಿದ್ದು, ಸೊನ್ನೆಯಿಂದ ಐದು ವರ್ಷದೊಳಗಿನ ಯಾವುದೇ ಮಗು ಲಸಿಕೆಯಿಂದ ಹೊರಗುಳಿಯದಂತೆ ಎಚ್ಚರವಹಿಸಿ ಎಂದು ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶ್ರೀರಂಗಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪಲ್ಸ್ ಪೋಲಿಯೋ ಕುರಿತು ತಾಲೂಕು ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಪೋಲಿಯೋ ಕಾರ್ಯಕ್ರಮಕ್ಕೆ ನಿಯೋಜಿಸಿದ ಅಧಿಕಾರಿ, ಸಿಬ್ಬಂದಿಗಳು ವಿಶೇಷವಾಗಿ ಕೊಳಚೆ ಪ್ರದೇಶ, ಅಪಾಯಕಾರಿ ಪ್ರದೇಶ, ವಲಸೆ ಕಾರ್ಮಿಕ ಮಕ್ಕಳು ಪೋಲಿಯೋ ಲಸಿಕೆಯಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದರು.

ಪೋಲಿಯೋ ಕಾರ್ಯಕ್ರಮ ಕುರಿತು ಶಾಲಾ ಮಕ್ಕಳಿಂದ, ಕಸ ಸಂಗ್ರಹಣೆ ವಾಹನಗಳ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು.ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,ಸಾರಿಗೆ ಇಲಾಖೆ, ಹೆಸ್ಕಾಂ, ಸ್ಥಳೀಯ ಸಂಘ ಸಂಸ್ಥೆಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕೆಂದರು. ಸಾರ್ವಜನಿಕ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ಪಿ ಮಾರುತಿ ರವರು ಪಲ್ಸ್ ಪೋಲಿಯೋ ಕಾರ್ಯಕ್ರಮದ ರೂಪ ರೇಶಗಳ ಕುರಿತು ಸಭೆಗೆ ಮಾಹಿತಿ ನೀಡಿದರು.

ಈ ವೇಳೆ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್ ಡಿ ಬೆನ್ನೂರ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ ಮೋಹನ್, ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ಅಭಿನಂದನ್ ಹಾಗೂ ವಿವಿಧ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!