Thursday, September 19, 2024

ಪ್ರಾಯೋಗಿಕ ಆವೃತ್ತಿ

ರಾಜಸ್ತಾನದಲ್ಲಿ ಅಂದರ್ ಆದ ಪುನೀತ್ ಕೆರೆಹಳ್ಳಿ ಮತ್ತು ಸಹಚರರ ಮೇಲಿರುವ ಆರೋಪಗಳೇನು ?

ಮಂಡ್ಯದ ವಾಹನ ಚಾಲಕ ಇದ್ರೀಸ್‌ ಪಾಷ ಹತ್ಯೆ ಪ್ರಕರಣದ ಪ್ರಮುಖ ಆರೋಪಿ, ಇಷ್ಟು ದಿನ ತಲೆ ಮರೆಸಿಕೊಂಡಿದ್ದ ಪುನೀತ್‌ ಕೆರೆಹಳ್ಳಿಯನ್ನು ರಾಜಸ್ಥಾನದಲ್ಲಿ ಬಂಧಿಸಲಾಗಿದೆ. ಅವನೊಂದಿಗೆ ಇದ್ದ ನಾಲ್ವರು ಸಹಚರರನ್ನು ಸಹ ಬಂಧಿಸಲಾಗಿದೆ.

ಪುನೀತ್ ಕೆರೆಹಳ್ಳಿ ಜೊತೆ ಆತನ ಸಹಚರರರಾದ ಗೋಪಿ ರಾಮನಗರ, ಪವನ್ ಕುಮಾರ್ ತೀರ್ಥಹಳ್ಳಿ, ಪಿಲ್ಲಿಂಗ ಅಂಬಿ ಬಸವನಗುಡಿ, ಸುರೇಶ್ ಕುಮಾರ್ ಅವರನ್ನು ಬಂಧಿಸಲಾಗಿದೆ ಎಂದು ರಾಮನಗರ ಎಸ್ಪಿ ಕಾರ್ತಿಕ್ ರೆಡ್ಡಿ ತಿಳಿಸಿದ್ದಾರೆ.

ಫೇಸ್ ಬುಕ್ ಡಿಆಕ್ಟಿವೆಟ್ ಮಾಡಿಕೊಂಡಿದ್ದ ಪುನೀತ್ ಕೆರೆಹಳ್ಳಿ

ಸಾತನೂರು ಘಟನೆಯ ಬಳಿಕ ಪುನೀತ್ ಕೆರೆಹಳ್ಳಿ ತನ್ನ ಪೇಸ್ ಬುಕ್ ಖಾತೆಯನ್ನು ಡಿಆಕ್ಟಿವೆಟ್ ಮಾಡಿಕೊಂಡಿದ್ದ. ಅಲ್ಲದೇ ನನ್ನ ಮೇಲೆ ದಾಖಲಾಗಿರುವ ಎಫ್ಐಆರ್ ಅನ್ನು ತಿದ್ದುಪಡಿ ಮಾಡಿದ್ದಾರೆ ಎಂದು ಹೇಳಿದ್ದ. ಆದರೆ ಒಂದು ಬಾರಿ ಎಫ್ಐಆರ್ ದಾಖಲಾದ ಮೇಲೆ ಯಾರೂ ಕೂಡ ಅದನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ಎಸ್ಪಿ ಕಾರ್ತಿಕ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.

ಮಾರ್ಚ್ 31ರ ರಾತ್ರಿ ರಾಮನಗರ ಜಿಲ್ಲೆಯ ಸಾತನೂರು ಬಳಿ ಪುನೀತ್ ಕೆರೆಹಳ್ಳಿ ಗ್ಯಾಂಗ್ ಜಾನುವಾರು ಸಾಗಿಸುತ್ತಿದ್ದ ವಾಹನವನ್ನು ಅಡ್ಡಗಟ್ಟಿ ಹಲ್ಲೆ ನಡೆಸಿದ್ದರು. ಆ ಸಂದರ್ಭದಲ್ಲಿ ವಾಹನ ಚಾಲಕ ಇದ್ರೀಸ್ ಪಾಶ ಹತ್ಯೆಯಾಗಿದ್ದರು. ಈ ಕುರಿತು ಪುನೀತ್ ಕೆರೆಹಳ್ಳಿ ಮೇಲೆ ಎಫ್‌ಐಆರ್ ದಾಖಲಾಗಿತ್ತು. ಪೊಲೀಸರು ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 341, 504, 506, 324, 302, 304 ಅಡಿ ಪ್ರಕರಣ ದಾಖಲಿಸಿದ್ದರು. ಆದರೆ ಅಂದಿನಿಂದ ತಲೆ ಮರೆಸಿಕೊಂಡಿದ್ದ ಅವರು ಸೋಮವಾರ ರಾತ್ರಿ ಫೇಸ್‌ಬುಕ್‌ ಲೈವ್‌ ಬಂದು ನಾನು ಕೊಲೆ ಮಾಡಿಲ್ಲ ಎಂದಿದ್ದರು.

ಪ್ರಕರಣದ ಕುರಿತು ಪತ್ರಿಕಾಗೋಷ್ಟಿ ನಡೆಸಿದ್ದ ರಾಮನಗರ ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿ ಕಾರ್ತಿಕ್‌ ರೆಡ್ಡಿಯವರು, “ಪ್ರಕರಣದ ಪ್ರಮುಖ ಆರೋಪಿ ಪುನೀತ್ ಕೆರೆಹಳ್ಳಿ ತಲೆಮರೆಸಿಕೊಂಡಿದ್ದು, ಶೋಧಕ್ಕಾಗಿ ನಾಲ್ಕು ತಂಡಗಳನ್ನು ರಚಿಸಿದ್ದೇವೆ” ಎಂದು ಹೇಳಿದ್ದರು.

ಮಾರ್ಚ್ 27 ರಂದು ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲ್ಲೂಕಿನ ತೆಂಡೇಕೆರೆ ದನದ ಸಂತೆಯಲ್ಲಿ ಖರೀದಿಸಿದ ರಾಸುಗಳನ್ನು ಮಾರ್ಚ್ 31 ರ ರಾತ್ರಿ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಸಂತೆಗಳಿಗೆ ಕೊಂಡೊಯ್ಯುತ್ತಿರುವಾಗ ಅವರನ್ನು ರಾಮನಗರ ಜಿಲ್ಲೆಯ ಸಾತನೂರು ಬಳಿ ಪುನೀತ್ ಕೆರೆಹಳ್ಳಿ ಗ್ಯಾಂಗ್ ತಡೆದಿದೆ.  2 ಲಕ್ಷ ಹಣ ಕೊಟ್ಟರೆ ಗಾಡಿ ಬಿಡುತ್ತೇನೆ, ಇಲ್ಲದಿದ್ದರೆ ಬಿಡುವುದಿಲ್ಲ ಎಂದು ಇದ್ರೀಸ್‌ ಪಾಷ ಸೇರಿ ಅವರ ಜೊತೆಗಿದ್ದ ಇರ್ಫಾನ್ ಮತ್ತು ಸೈಯ್ಯದ್ ಜಹೀರ್ ಎಂಬುವವರಿಗೆ ಬೆದರಿಕೆಯೊಡ್ಡಿದ್ದಾರೆ. ಆದರೆ ಇದ್ರೀಸ್‌ ಪಾಷ ರಾಸುಗಳನ್ನು ಖರೀದಿಸಿದ ರಶೀದಿಗಳನ್ನು ತೋರಿಸಿ ನಾವು ಕಾನೂನು ಬದ್ಧವಾಗಿ ಖರೀದಿಸಿದ ಗೋವುಗಳನ್ನು ಸಾಗಾಟ ಮಾಡುತ್ತಿದ್ದೇವೆ, ನಿಮಗೆ ಏಕೆ  ಹಣ ಕೊಡಬೇಕೆಂದು  ವಾದಿಸಿದ್ದಾರೆ. ಈ ವೇಳೆ ಎರಡು ಗುಂಪಿನ ನಡುವೆ ಮಾತಿನ ಚಕಮಕಿ ನಡೆದಿದ್ದು, ಪುನೀತ್ ಕೆರೆಹಳ್ಳಿ ಗ್ಯಾಂಗ್ ಮಾರಕಾಸ್ತ್ರಗಳಿಂದ ಇದ್ರಿಶ್ ಪಾಶ, ಇರ್ಫಾನ್ ಮತ್ತು ಸಯ್ಯದ್ ಜಹೀರ್ ಮೇಲೆ ತೀವ್ರ ಹಲ್ಲೆ ನಡೆಸಿದೆ.

ಈ ಗಲಾಟೆಯಲ್ಲಿ ಇರ್ಫಾನ್ ತಪ್ಪಿಸಿಕೊಂಡು ಓಡಿದರೆ, ಸಯ್ಯದ್ ಅಂಗಡಿಯ ಬಳಿ ಅವಿತುಕೊಂಡಾಗ ಸಿಕ್ಕಿಬಿದ್ದಿದ್ದಾರೆ. ಆದರೆ ಇದ್ರೀಸ್‌ ಪಾಷ ತಪ್ಪಿಸಿಕೊಳ್ಳಲು ಯತ್ನಿಸುವಾಗ ಅವರಿಗೆ ಚಿತ್ರಹಿಂಸೆ ನೀಡಲಾಗಿದೆ. ಎಲೆಕ್ಟ್ರಿಕ್ ಗನ್ ರೀತಿಯ ಸಾಧನದಿಂದ ಕರೆಂಟ್ ಶಾಕ್ ಕೊಟ್ಟಿದ್ದಾರೆ. ಅದು ಮಿತಿ ಮೀರಿದ್ದರಿಂದ ಇದ್ರೀಸ್‌ ಪಾಷ ಪಾ‍‍‍‍‍‍‍‍‍‍‍‍‍‍‍‍‍‍‍‍‍‍ಷ ಜೀವ ಬಿಟ್ಟಿದ್ದಾರೆ. ಅವರಿಗೆ ನೀಡಿದ ಕಿರುಕುಳದ ಮಾರ್ಕ್‌ಗಳು ಇದ್ರೀಶ್ ದೇಹದ ಮೇಲಿರುವುದನ್ನು ಫೋಟೊಗಳು ದೃಢೀಕರಿಸುತ್ತವೆ ಎಂದು ಇದ್ರೀಸ್ ಪಾಷ ಕುಟುಂಬಸ್ಥರು ಆರೋಪಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!