Sunday, May 19, 2024

ಪ್ರಾಯೋಗಿಕ ಆವೃತ್ತಿ

ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ಸೇರಿದಂತೆ ಐವರು ನ್ಯಾಯಾಂಗ ಬಂಧನಕ್ಕೆ

ಕನಕಪುರ ಸಮೀಪದ ಸಾತನೂರು ಬಳಿ ಜಾನುವಾರು ಸಾಗಾಟ ಮಾಡುತ್ತಿದ್ದವರನ್ನು ಅಡ್ಡಗಟ್ಟಿ ಹಣ ವಸೂಲಿ ಮಾಡಲು ಯತ್ನಿಸಿದ ಹಾಗೂ ಮಂಡ್ಯದ ಇದ್ರೀಸ್ ಎಂಬ ವ್ಯಕ್ತಿಯನ್ನು ಕೊಲೆಗೈದ ಆರೋಪ ಹೊತ್ತಿರುವ ಪುನೀತ್ ಕೆರೆಹಳ್ಳಿ ಸೇರಿ ಆತನ ನಾಲ್ವರು ಸಹಚರರನ್ನು ನ್ಯಾಯಾಲಯವು  ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.

ಜಾನುವಾರು ಸಾಗಾಟ ವೇಳೆ ಇದ್ರೀಶ್ ಪಾಷಾ ಅನುಮಾನಾಸ್ಪದ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪುನೀತ್ ಕೆರೆಹಳ್ಳಿ ಸೇರಿದಂತೆ ಇತರೆ ನಾಲ್ಕು ಆರೋಪಿಗಳಿಗೆ 7 ದಿನಗಳ‌ ಕಾಲ ಪೋಲಿಸ್ ಕಸ್ಟಡಿಗೆ ನೀಡಿ ಕನಕಪುರ ಜೆಎಂಎಫ್’ಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಇದ್ರೀಶ್ ಪಾಷಾ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಹಿಂದೂಪರ ಸಂಘಟನೆಯ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಮತ್ತು ನಾಲ್ವರು ಸಹಚರರನ್ನು ಇಂದು ಬೆಳಗ್ಗೆ ರಾಜಸ್ಥಾನದಿಂದ ರಾಮನಗರಕ್ಕೆ ಕರೆತಂದಿದ್ದು, ಬಳಿಕ ಪೊಲೀಸರು ಆರೋಪಿಗಳನ್ನು ಕನಕಪುರ ಜೆಎಂಎಫ್​ಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು. ಹೆಚ್ಚಿನ‌ ವಿಚಾರಣೆಗೆ ಆರೋಪಿಗಳನ್ನು 7 ದಿನಗಳ‌ ಕಾಲ ಪೋಲಿಸ್ ಕಸ್ಟಡಿಗೆ ನೀಡಿ ನ್ಯಾಯಾಧೀಶರು ಆದೇಶಿಸಿದ್ದಾರೆ.

ಈ ಪ್ರಕರಣದ ಬಗ್ಗೆ ಇನ್ನಷ್ಟು ವಿಚಾರಣೆ ಮಾಡಬೇಕಿದೆ. ಈ ಹಿನ್ನೆಲೆಯಲ್ಲಿ ಆರೋಪಿಗಳನ್ನು ತಮ್ಮ ಕಸ್ಟಡಿಗೆ ನೀಡಬೇಕೆಂದು ನ್ಯಾಯಾಲಯಕ್ಕೆ ಪೊಲೀಸರು ಮನವಿ ಮಾಡಿದ್ದರು. ಪೊಲೀಸ್ ಮನವಿ ಪುರಸ್ಕರಿಸಿದ ಕೋರ್ಟ್, ಆರೋಪಿಗಳನ್ನು ಏಳು ದಿನ ಪೊಲೀಸ್​ ಕಸ್ಟಡಿಗೆ ನೀಡಿ ಆದೇಶಿಸಿದೆ. ಇನ್ನು ಪುನೀತ್ ಕೆರಹಳ್ಳಿ ಪರವಾಗಿ ಬೆಂಗಳೂರು ಮೂಲದ ಇಬ್ಬರು ವಕೀಲರು ವಕಾಲತ್ತು ವಹಿಸಿದ್ದರು.

ಏನಿದು ಪ್ರಕರಣ

ಕಳೆದ ಮಾರ್ಚ್ 31 ರಂದು ಮಂಡ್ಯದಿಂದ ಬರುತ್ತಿದ್ದ ವಾಹನವನ್ನ ಅಡ್ಡಗಟ್ಟಿ 2 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದ, ಅಲ್ಲದೇ ಈ ಸಂದರ್ಭದಲ್ಲಿ ಇದ್ರೀಸ್ ಪಾಷ ಎಂಬ ಮಂಡ್ಯದ ಯುವಕನನ್ನು ಶಾಕ್ ಟ್ರೀಟ್ ಮೆಂಟ್ ಮಾಡುವ ಮಾರಕಾಸ್ತ್ರದಿಂದ ಚಿತ್ರಹಿಂಸೆ ನೀಡಿ ಕೊಲೆ ಮಾಡಿರುವ ಆರೋಪ ಪುನೀತ್ ಕೆರೆಹಳ್ಳಿ ಹಾಗೂ ಆತನ ಸಹಚರರ ಮೇಲಿದೆ.

ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಸಾತನೂರು ಗ್ರಾಮದ ಬಳಿ ಮಂಡ್ಯದ ಗುತ್ತಲು ನಿವಾಸಿ ಇದ್ರೀಷ್ ಪಾಷ ಮೃತದೇಹ ಪತ್ತೆಯಾಗಿತ್ತು. ಈ ಸಂಬಂಧ ಮೃತನ ಸಹೋದರ ಸಾತನೂರು ‌ಠಾಣೆಗೆ ಪುನೀತ್ ಕೆರೆಹಳ್ಳಿ ಸೇರಿದಂತೆ ಇತರರರ ವಿರುದ್ಧ ದೂರು ನೀಡಿದ್ದರು. ರಾಷ್ಟ್ರೀಯ ರಕ್ಷಣಾ ಪಡೆಯ ಪುನಿತ್ ಕೆರೆಹಳ್ಳಿ, ಗೋಪಿ, ಪವನ್ ಕುಮಾರ್, ಪಿಲ್ಲಿಂಗ್ ಅಂಬಿಗಾರ್, ಸುರೇಶ್ ಎನ್ನುವವರ ವಿರುದ್ಧ ಐಪಿಸಿ ಸೆಕ್ಷನ್ 341, 504, 506, 324, 302, 34 ರ ಅಡಿ ಕೇಸ್ ದಾಖಲಾಗಿತ್ತು. ದೂರು ದಾಖಲಾಗುತ್ತಿದ್ದಂತೆಯೇ ಈ ಆರೋಪಿಗಳು ತಲೆ ಮರೆಸಿಕೊಂಡಿದ್ದರು. ಇವರನ್ನು ಬಂಧಿಸಲು ರಾಮನಗರ ಎಸ್ಪಿ ಕಾರ್ತಿಕ್ ರೆಡ್ಡಿ ನಾಲ್ಕು ತಂಡಗಳನ್ನು ರಚಿಸಿದ್ದರು. ಕೊನೆಗೆ ಏಪ್ರಿಲ್ 5 ರಂದು ಆರೋಪಿಗಳು ರಾಜಸ್ಥಾನದಲ್ಲಿ ಸಿಕ್ಕಿಬಿದ್ದಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!