Friday, September 20, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಬೆಂಬಲ ಬೆಲೆಯಲ್ಲಿ ಕೊಬ್ಬರಿ ಖರೀದಿ: ಶೀಘ್ರವೇ ನೋಂದಣಿ

2024 ನೇ ಸಾಲಿನ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಎಫ್ ಎ ಕ್ಯೂ ಗುಣಮಟ್ಟದ ಉಂಡೆಕೊಬ್ಬರಿಗೆ ಸರ್ಕಾರವು ಪ್ರತಿ ಕ್ವಿಂಟಾಲಿಗೆ ರೂ.12000 ರಂತೆ ಕನಿಷ್ಟ ಬೆಂಬಲ ಬೆಲೆ ಘೋಷಿಸಿದ್ದು, ನೋಂದಣಿ ಪ್ರಕ್ರಿಯೆ ಶೀಘ್ರವೇ ಪ್ರಾರಂಭವಾಗಲಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಎಂ ಕೃಷ್ಣಕುಮಾರ ತಿಳಿಸಿದರು.

ಮಂಡ್ಯ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ರೈತರಿಗೆ ನೇರವಾಗಿ ಉಂಡೆ ಕೊಬ್ಬರಿಯನ್ನು ಖರೀದಿಸುವ ಸಂಬAಧ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಸಭೆ ನಡೆಸಿ ಮಾತನಾಡಿದರು.

ಸರ್ಕಾರದ ಆದೇಶದಂತೆ ಗುಣಮಟ್ಟದ ಉಂಡೆ ಕೊಬ್ಬರಿಯನ್ನು ರೈತರಿಂದ ನೇರವಾಗಿ ಕರ್ನಾಟಕ ಸರ್ಕಾರದ ಸಹಕಾರ ಮಾರಾಟ ಮಹಾ ಮಂಡಳಿ ನಿಯಮಿತದವರು ಖರೀದಿ ಪ್ರಕ್ರಿಯೆ ನಡೆಸಲಿದ್ದು, ಕೆ.ಆರ್.ಪೇಟೆ -1, ಪಾಂಡವಪುರ-1 ಹಾಗೂ ನಾಗಮಂಗಲ-2 ಸೇರಿದಂತೆ ಒಟ್ಟು 4 ನೊಂದಣಿ ಕೇಂದ್ರ ತೆರಲಾಗುವುದು.

ನೊಂದಣಿ ನಂತರ ಮಾರಾಟದಾರರಿಂದ ಖರೀದಿಸಲು ನಾಗಮಂಗಲ ಹಾಗೂ ಕೆ.ಆರ್ ಪೇಟೆಯಲ್ಲಿ ಒಟ್ಟು 2 ಖರೀದಿ ಕೇಂದ್ರ ತೆರೆಯಲಾಗುವುದು ಎಂದರು.

ನೊAದಣಿ ಹಾಗೂ ಖರೀದಿಗೆ ಬೇಕಿರುವ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಿ, ಖರೀದಿ ಕೇಂದ್ರಗಳಲ್ಲಿ ಅಗತ್ಯ ಮೂಲಭೂತ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕು. ಖರೀದಿ ಕೇಂದ್ರಕ್ಕೆ ವಿದ್ಯುನ್ಮಾನ ತೂಕದಯಂತ್ರ, ಮೇಜು, ಕುರ್ಚಿಗಳನ್ನು ಒದಗಿಸಿ ಎಂದರು.

ಸಭೆsÉಯಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಅಶೋಕ್, ಎ.ಪಿ.ಎಂ.ಸಿ ಕಾರ್ಯದರ್ಶಿ ರೇವತಿ, ಆಹಾರ ಇಲಾಖೆಯ ಸಹಾಯಕ ನಿರ್ದೇಶಕ ಶ್ರೀನಿವಾಸ್, ವಾರ್ತಾಧಿಕಾರಿ ಎಸ್ ಹೆಚ್ ನಿರ್ಮಲ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!