Friday, November 20, 2026

ಪ್ರಾಯೋಗಿಕ ಆವೃತ್ತಿ

ಪೂರಿಗಾಲಿ ಹನಿ ನೀರಾವರಿ ಯೋಜನೆ ಪೂರ್ಣಗೊಳಿಸದಿದ್ದರೆ ನಿರಂತರ ಧರಣಿ

ಶಾಸಕರ ನಿರ್ಲಕ್ಷ್ಯದಿಂದ ನೆನೆಗುದಿಗೆ ಬಿದ್ದಿರುವ ಪೂರಿಗಾಲಿ ಹನಿ ನೀರಾವರಿ ಯೋಜನೆ ಕಾಮಗಾರಿ ಕೂಡಲೇ ಪೂರ್ಣಗೊಳಿಸದಿದ್ದರೆ ಪ್ರಾಂತ ರೈತಸಂಘದಿಂದ ನಿರಂತರ ಧರಣಿ ನಡೆಸಲಾಗುವುದೆಂದು ಸಂಘದ ತಾಲ್ಲೂಕು ಅಧ್ಯಕ್ಷ ಭರತ್‌ರಾಜ್ ತಿಳಿಸಿದರು.

ಮಳವಳ್ಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿ, ಹಲಗೂರಿನಲ್ಲಿ ನಡೆದ ಕರ್ನಾಟಕ ಪ್ರಾಂತ ರೈತ ಸಂಘದ 4ನೇ ಸಮ್ಮೇಳನದಲ್ಲಿ ತೆಗೆದುಕೊಂಡ ನಿರ್ಣಯಗಳನ್ನು ತಿಳಿಸಿದರು.

ಪೂರಿಗಾಲಿ ಹನಿ ನೀರಾವರಿ ಯೋಜನೆಯು ದೊಡ್ಡ ಯೋಜನೆಯಾಗಿದ್ದು, ಐದು ವರ್ಷಗಳು ಕಳೆದರೂ ಪೂರ್ಣಕೊಂಡಿಲ್ಲ. ಜವಾಬ್ದಾರಿ ಹೊತ್ತ ಶಾಸಕರು ಕಾಮಗಾರಿ ಬಗ್ಗೆ ನಿರ್ಲಕ್ಷ್ಯ ತೋರಿದ್ದು,ಜನರಿಗೆ ನೀರು ಸಿಗುವುದು ಕನಸಾಗಿದೆ. ಇನ್ನೂ ಕೆಲವೇ ತಿಂಗಳಲ್ಲಿ ಯೋಜನೆಯನ್ನು ಪೂರ್ಣಗೊಳಿಸದಿದ್ದರೆ ರಸ್ತೆಗಿಳಿದು ಹೋರಾಟ ನಡೆಸಬೇಕಾಗುತ್ತದೆ ಎಂದರು.

ಮೈಕ್ರೋ ಫೈನಾನ್ಸ್ ಗಳಲ್ಲಿ ಮಾಡಿರುವ ಸ್ತ್ರೀಶಕ್ತಿ ಸ್ವ-ಸಹಾಯ ಸಂಘಗಳ ಸಾಲ ಮನ್ನಾ ಮಾಡಬೇಕು, ಪ್ರತಿ ಲೀಟರ್ ಹಾಲಿಗೆ 50 ರೂ. ಹಾಗೂ ಟನ್ ಕಬ್ಬಿಗೆ 5 ಸಾವಿರ ರೂ .ನೀಡಬೇಕು. ಪಂಪ್ ಸೆಟ್ ಗಳಿಗೆ ಮೀಟರ್ ಅಳವಡಿಸುವ ನೀತಿಯನ್ನು ಕೈಬಿಡಬೇಕು. ಬಗರಹುಕುಂ ಸಾಗುವಳಿದವರಿಗೆ ಹಕ್ಕುಪತ್ರ ನೀಡಬೇಕು, ಭೂಸುಧಾರಣೆ, ಎಪಿಎಂಸಿ, ವಿದ್ಯುತ್ ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಹಾಗೂ ಸರ್ಕಾರಿ ಆಸ್ಪತ್ರೆ ಹಾಗೂ ಕಚೇರಿಗಳಲ್ಲಿನ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕು ಸೇರಿದಂತೆ ಹಲವು ನಿರ್ಣಯ ಕೈಗೊಳ್ಳಲಾಗಿದೆ ಎಂದರು.

ನೂತನ ಘಟಕ ರಚನೆ ಕರ್ನಾಟಕ ಪ್ರಾಂತ ರೈತ ಸಂಘದ ತಾಲ್ಲೂಕು ಘಟಕದ ನೂತನ ಸಮಿತಿಯನ್ನು ರಚನೆ ಮಾಡಿದ್ದು, ಅಧ್ಯಕ್ಷರಾಗಿ ಎನ್.ಎಲ್.ಭರತ್ ರಾಜ್, ಕಾರ್ಯದರ್ಶಿಯಾಗಿ ಎನ್.ಲಿಂಗರಾಜಮೂರ್ತಿ,
ಉಪಾಧ್ಯಕ್ಷರಾಗಿ ಎ.ಎಲ್.ಶಿವಕುಮಾರ್, ಚಿಕ್ಕಸ್ವಾಮಿ, ಗುರುಸ್ವಾಮಿ, ಪ್ರಮೀಳಾ, ಸಹ
ಕಾರ್ಯದರ್ಶಿಯಾಗಿ ಶಿವಪ್ಪ, ಅನಿತಾ, ಮರಿಲಿಂಗಯ್ಯ, ಹಿಪ್ಜುಲ್ಲಾ ಹಾಗೂ ೧೯ ಮಂದಿಯನ್ನು
ಸಮಿತಿಯ ಸದಸ್ಯರಾಗಿ ಆಯ್ಕೆ ಮಾಡಲಾಗಿದೆ ಎಂದರು.

ಗೋಷ್ಠಿಯಲ್ಲಿ ಎನ್.ಲಿಂಗರಾಜಮೂರ್ತಿ,ಶಿವಕುಮಾರ್,ಗುರುಸ್ವಾಮಿ, ಪ್ರಮೀಳಾ ಸೇರಿದಂತೆ ಇತರರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ