ಮಂಡ್ಯನಗರದ ಸರ್ಕಾರಿ ಮಹಿಳಾ ಕಾಲೇಜು ಹಿಂಭಾಗದ 2ನೇ ತಿರುವಿನಲ್ಲಿ ವಾಣಿಜ್ಯ ಅಂಗಡಿ- ಮುಂಗಟ್ಟುಗಳ ಮಾಲೀಕರು ಫುಟ್ ಪಾತ್ ಅನ್ನು ಅತಿಕ್ರಮಿಸಿರುವುದಿರಂದ ಇಲ್ಲಿನ ನಿವಾಸಿಗಳಿಗೆ ಹಾಗೂ ಈ ಮಾರ್ಗದಲ್ಲಿ ಓಡಾಡುವ ಶಾಲಾ-ಕಾಲೇಜು ವಿದ್ಯಾರ್ಥಿಗಳ ಸಂಚಾರಕ್ಕೆ ತೀವ್ರ ತೊಂದರೆಯುಂಟಾಗಿದೆ ಎಂದು ಸ್ಥಳೀಯ ನಿವಾಸಿಗಳು ದೂರಿದ್ದಾರೆ.

ಇಲ್ಲಿನ ಹಲವು ಮಂದಿ ಮನೆ ಲೈಸೆನ್ಸ್ ಪಡೆದು ವಾಣಿಜ್ಯ ಅಂಗಡಿ ಮಳಿಗೆಗಳನ್ನು ನಿರ್ಮಿಸಿಕೊಂಡಿದ್ದಾರೆ. ಈ ಭಾಗದಲ್ಲಿ ಹೆಚ್ಚಾಗಿ ಸ್ಕೂಟರ್, ಆಟೋ, ಟೆಂಪೋ ಹಾಗೂ ಟ್ರಾಕ್ಟರ್ ವರ್ಕ್ ಶಾಪ್ ಗಳಿದ್ದು, ಎಲ್ಲೆಂದರಲ್ಲಿ ವಾಹನಗಳನ್ನು ನಿಲ್ಲಿಸಿಕೊಂಡು ರಿಪೇರಿ ಮಾಡುವುದರಿಂದ ಸ್ಥಳೀಯರಿಗೆ ತೀವ್ರ ತೊಂದರೆಯಾಗುತ್ತಿದೆ. ಈ ಬಗ್ಗೆ ನಗರಸಭೆಯ ಅಧಿಕಾರಿಗಳಿಗೆ ಹಲವಾರು ಬಾರಿ ದೂರು ನೀಡಿದ್ದರೂ ಯಾವುದೇ ಕ್ರಮ ವಹಿಸಿಲ್ಲ, ಹಾಗಾಗಿ ಜಿಲ್ಲಾಡಳಿತ ಈ ಬಗ್ಗೆ ಗಮನಹರಿಸಿ, ಸ್ಥಳೀಯ ನಾಗರೀಕರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.




