ಪಾಂಡವಪುರ ತಾಲ್ಲೂಕಿನ ಕ್ಯಾತನಹಳ್ಳಿಯಲ್ಲಿರುವ ರೈತ ನಾಯಕ ಹಾಗೂ ಮೇಲುಕೋಟೆ ಕ್ಷೇತ್ರದ ಮಾಜಿ ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ಅವರ ಸ್ಮಾರಕಕ್ಕೆ ಮಂಡ್ಯ ಲೋಕಸಭಾ ಚುನಾವಣೆಯ ಬಿಜೆಪಿ-ಜೆಡಿಎಸ್ ಮೈತ್ರಿ ಹೆಚ್.ಡಿ.ಕುಮಾರಸ್ವಾಮಿ ಪೂಜೆ ಸಲ್ಲಿಸಿದರು.
ಪಾಂಡವಪುರ ಭಾಗದಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ಅವರು, ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರೊಂದಿಗೆ ತೆರಳಿ ನಮನ ಸಲ್ಲಿಸಿದರು. ಈ ಬಗ್ಗೆ ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಬರೆದುಕೊಂಡಿರುವ ಕುಮಾರಸ್ವಾಮಿ, ‘ತಮ್ಮ ಇಡೀ ಜೀವಿತವನ್ನು ಅನ್ನದಾತರ ಒಳಿತಿಗಾಗಿಯೇ ಮೀಸಲಿಟ್ಟು ಹೋರಾಟ ನಡೆಸಿದ ಆ ಚೇತನ (ಪುಟ್ಟಣ್ಣಯ್ಯ)ಕ್ಕೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದೆ ಎಂದಿದ್ದಾರೆ.
ಈ ಸಂದರ್ಭದಲ್ಲಿ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು, ಶಾಸಕ ಹೆಚ್.ಟಿ.ಮಂಜುನಾಥ್, ವಿಧಾನ ಪರಿಷತ್ ಮಾಜಿ ಸದಸ್ಯರಾದ ಕೆ.ಟಿ. ಶ್ರೀಕಂಠೇಗೌಡ, ಜೆಡಿಎಸ್ ಮುಖಂಡ ವಿಜಯಾನಂದ ಸೇರಿದಂತೆ ಮೈತ್ರಿ ಪಕ್ಷಗಳ ಅನೇಕ ಮುಖಂಡರು ಹಾಜರಿದ್ದರು.




